ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಈ ಯೋಗ ಭಂಗಿಗಳು ಸಹಾಯಕ

ನಿಮ್ಮ ಶ್ವಾಸಕೋಶದ ಆರೋಗ್ಯ ಕಾಪಾಡಲು ಮುಖ್ಯವಾಗಿ ಈ ಕೆಳಗಿನ ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ. ಇವು ನಿಮ್ಮ ದೇಹವನ್ನು ಸದೃಢವಾಗಿರಿಸಲು ಸಹಾಯ ಮಾಡುತ್ತವೆ.

ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಈ ಯೋಗ ಭಂಗಿಗಳು ಸಹಾಯಕ
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Oct 17, 2021 | 12:13 PM

ನೀವು ಆರೋಗ್ಯವಾಗಿರಲು ಒಳ್ಳೆಯ ಆಹಾರ ಪದ್ಧತಿಯ ಜತೆಗೆ ಪ್ರತಿನಿತ್ಯ ವ್ಯಾಯಾಮ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ಉತ್ತಮ. ನಿಮ್ಮ ಶ್ವಾಸಕೋಶದ ಆರೋಗ್ಯ ಕಾಪಾಡಲು ಮುಖ್ಯವಾಗಿ ಈ ಕೆಳಗಿನ ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ. ಇವು ನಿಮ್ಮ ದೇಹವನ್ನು ಸದೃಢವಾಗಿರಿಸಲು ಸಹಾಯ ಮಾಡುತ್ತವೆ. ಜತೆಗೆ ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸುತ್ತವೆ.

ಧನುರಾಸನ ಈ ಯೋಗ ಭಂಗಿಯಲ್ಲಿ ನೀವು ಹೊಟ್ಟೆಯ ಮೇಲೆ ಮಗಲಬೇಕು. ನಿಮ್ಮ ಮೊಣಕಾಲುಗಳನ್ನು ನಿಮ್ಮ ಸೊಂಟದ ಕಡೆಗೆ ಬಾಗಿಸಿ ಮತ್ತು ನಿಮ್ಮ ಕಾಲುಗಳನ್ನು ನಿಮ್ಮ ಕೈಗಳಿಂದ ಹಿಡಿದುಕೊಳ್ಳಿ. ಬಳಿಕ ನಿಮ್ಮ ಮುಖವನ್ನು ಮೇಲಕ್ಕೆತ್ತಿ. ಈ ಭಂಗಿಯಲ್ಲಿಯೇ ಸ್ವಲ್ಪ ಸಮಯ ಹಾಗೆಯೇ ಇರಿ.

ಹಸ್ತ ಉತ್ತಾನಾಸನ ನೇರವಾಗಿ ನಿಂತು ನಿಮ್ಮ ಕೈಗಳನ್ನು ತಲೆಯ ಮೇಲಕ್ಕೆತ್ತಿ. ಮೇಲಕ್ಕೆತ್ತಿದ ಕೈಗಳಿಂದ ನಮಸ್ಕರಿಸಿ. ಬಳಿಕ ನಿಧಾನವಾಗಿ ಹಿಂದಕ್ಕೆ ಬಾಗಿ. ನಿಮ್ಮ ಮೊಣಕಾಲುಗಳು ನೇರವಾಗಿರಲಿ. ಸ್ವಲ್ಪ ಸಮಯ ಈ ಭಂಗಿಯಲ್ಲಿಯೇ ಇರಿ. ನಂತರ ಮೂಲ ಸ್ಥಾನಕ್ಕೆ ಹಿಂತಿರುಗಿ. ಈ ರೀತಿ ಮಾಡುವುದರಿಂದ ನಿಮ್ಮ ಬೆನ್ನು, ಸೊಂಟ ಹಾಗೂ ಶ್ವಾಸಕೋಶ ಆರೋಗ್ಯವಾಗಿರುತ್ತದೆ.

ಉಷ್ಟ್ರಾಸನ ಮೊದಲಿಗೆ ಚಾಪೆಯ ಮೇಲೆ ಮಂಡಿಯೂರಿ ಕುಳಿತುಕೊಳ್ಳಿ. ನಿಮ್ಮ ಕೈಗಳನ್ನು ಸೊಂಟದ ಮೇಲೆ ಇರಿಸಿ. ನಂತರ ನಿಮ್ಮ ಬೆನ್ನನ್ನು ಬಗ್ಗಿಸಿ. ತೋಳುಗಳನ್ನು ನೇರವಾಗಿ ಇಟ್ಟುಕೊಳ್ಳಿ. ನಿಮ್ಮ ಅಂಗೈಗಳನ್ನು ಪಾದಗಳ ಮೇಲೆ ಇಟ್ಟುಕೊಳ್ಳಿ. ನಿಮ್ಮ ಕುತ್ತಿಗೆ ಭಾಗವನ್ನು ತಟಸ್ಥ ಸ್ಥಿತಿಯಲ್ಲಿ ಇರಿಸಿ. ಸ್ವಲ್ಪ ಸಮಯ ಈ ಸ್ಥಿತಿಯಲ್ಲಿಯೇ ಇರಿ. ನಂತರ ಉಸಿರು ಬಿಡುತ್ತಾ ಆರಂಭಿಕ ಸ್ಥಾನಕ್ಕೆ ಹಿಂತಿರುಗಿ.

ಚಕ್ರಾಸನ ನಿಮ್ಮ ಬೆನ್ನಿನ ಮೇಲೆ ಮಲಗಿ ಮತ್ತು ನಿಮ್ಮ ಮೊಣಕಾಲುಗಳನ್ನು ಬಗ್ಗಿಸಿ. ನಿಮ್ಮ ಕಾಲುಗಳು ನೆಲದ ಮೇಲೆ ಊರಿರಲಿ. ನಿಮ್ಮ ಅಂಗೈಗಳನ್ನು ಆಕಾಶಕ್ಕೆ ಮುಖಮಾಡಿ ಮೊಣಕೈಯಲ್ಲಿ ಬಾಗಿ. ದೇಹವನ್ನು ಕಮಾನು ಮಾಡಲು ಪ್ರಯತ್ನಿಸಿ. ನಿಮ್ಮ ಕುತ್ತಿಗೆಯನ್ನು ಸಡಿಲಗೊಳಿಸಿ ಮತ್ತು ನಿಮ್ಮ ತಲೆಯು ನಿಧಾನವಾಗಿ ಹಿಂದಕ್ಕೆ ಬಾಗಿರಲಿ .

ಇದನ್ನೂ ಓದಿ:

Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್