ತೂಕ ಇಳಿಸಿಕೊಳ್ಳಲು ಜಿಮ್‌ಗಿಂತ ಹೆಚ್ಚು ಪ್ರಯೋಜನಕಾರಿ ಈ ಅಭ್ಯಾಸ: ಇಲ್ಲಿವೆ ಸುಲಭ ಮಾರ್ಗ
ತೂಕ ಹೆಚ್ಚಾಗುವಿಕೆ ಜನರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಯಮಿತ ವರ್ಕೌಟ್ ಮಾಡುವುದರ ಹೊರತಾಗಿ, ಆಹಾರ ಪದ್ಧತಿಯನ್ನು ಬದಲಾಯಿಸುವುದು ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು.
ತೂಕ ಹೆಚ್ಚಾಗುವಿಕೆ (weight loss) ಜನರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ತೂಕ ಇಳಿಸಿಕೊಳ್ಳಲು ಜನರು ಜಿಮ್‌ಗೆ ಹೋಗುವುದರಿಂದ ಹಿಡಿದು ಡಯಟಿಂಗ್‌ವರೆಗೆ ನಾನಾ ರೀತಿಯ ಪ್ರಯೋಗಗಳನ್ನು ಮಾಡುತ್ತಾರೆ. ಈ ಸಂಪೂರ್ಣ ಪ್ರಕ್ರಿಯೆಗೆ ಸಾಕಷ್ಟು ದಿನಗಳು ಅಥವಾ ತಿಂಗಳುಗಳೇ ತೆಗೆದುಕೊಳ್ಳಬಹುದು. ತೂಕ ಹೆಚ್ಚಾಗುವುದರಿಂದ ದೇಹವು ಅನೇಕ ರೋಗಗಳಿಗೆ ತುತ್ತಾಗಬಹುದು ಎಂದು ತಜ್ಞರು ಹೇಳುತ್ತಾರೆ.
ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವುದರೊಂದಿಗೆ ತಮ್ಮ ಆಹಾರ ಪದ್ಧತಿಯನ್ನು ಸಹ ಬದಲಾಯಿಸಿಕೊಳ್ಳಬೇಕು. ನಿಯಮಿತ ವರ್ಕೌಟ್ ಮಾಡುವುದರ ಹೊರತಾಗಿ, ಪ್ರತಿನಿತ್ಯದ ಆಹಾರ ಪದ್ಧತಿಯನ್ನು ಬದಲಾಯಿಕೊಳ್ಳುವುದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.
ಇದನ್ನೂ ಓದಿ: ಮಳೆಗಾಲದಲ್ಲಿ ರಸ್ತೆ ಸುರಕ್ಷತೆ: ಡ್ರೈವಿಂಗ್ ಮಾಡುವಾಗ ಗಮನಿಸಬೇಕಾದ ವಿಷಯಗಳು
ಧಾನ್ಯಗಳು
ತೂಕ ಕಡಿಮೆ ಮಾಡಿಕೊಳ್ಳ ಬಯಸುವವರು ನಿತ್ಯದ ಆಹಾರದಲ್ಲಿ ಧಾನ್ಯಗಳನ್ನು ಸೇವಿಸಿ. ಇವು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಧಾನ್ಯ ತಿಂದರೆ ಹೊಟ್ಟೆ ತುಂಬಿದಂತಾಗುತ್ತದೆ. ವಾರದಲ್ಲಿ ಕನಿಷ್ಠ 3 ಬಾರಿ ಧಾನ್ಯಗಳನ್ನು ಸೇವಿಸಿದರೆ ಸರಳವಾಗಿ ತೂಕ ಕಡಿಮೆ ಆಗುತ್ತದೆ.
ಹಣ್ಣು ಮತ್ತು ತರಕಾರಿ
ಜಂಕ್ ಮತ್ತು ಸಂಸ್ಕರಿಸಿದ ಆಹಾರವನ್ನು ತಿನ್ನುವುದು ತ್ವರಿತ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹಾಗಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದಿಂದ ತೂಕ ಕಡಿಮೆ ಮಾಡಿಕೊಳ್ಳಬಹುದು. ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಸೇರಿದಂತೆ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತೀರಿ. ಇದು ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: Natural Glow: ನೈಸರ್ಗಿಕ ಹೊಳಪನ್ನು ಕಳೆದುಕೊಂಡಿದ್ದೀರಾ? ಆಹಾರ ಕ್ರಮ ಬದಲಾಯಿಸಿ
ತಂಪು ಪಾನೀಯಗಳು ಬೇಡ
ತಂಪು ಪಾನೀಯಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿರುತ್ತದೆ. ತಂಪು ಪಾನೀಯಗಳ ಅತಿಯಾದ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ತ್ವರಿತವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ತಂಪು ಪಾನೀಯಗಳ ಬದಲಿಗೆ, ನೀವು ಜ್ಯೂಸ್ ಕುಡಿಯಬಹುದು ಎನ್ನುತಾರೆ ತಜ್ಞರು.
(ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ತಜ್ಞರನ್ನು ಸಂಪರ್ಕಿಸಿದ ನಂತರವೇ ಅದನ್ನು ಅನುಸರಿಸಿ.)
ಮತ್ತಷ್ಟು ಜೀವನಶೈಲಿ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.