ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ

ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ
ಎಳನೀರು ಮಾತ್ರ ಸೇವಿಸಿ ಜೀವನ ನಡೆಸುತ್ತಿದ್ದ ಬಾಲಕೃಷ್ಣನ್ Image Credit source: Instagram
Follow us
ಅಕ್ಷತಾ ವರ್ಕಾಡಿ
|

Updated on:Feb 18, 2023 | 12:58 PM

ಸಾಮಾನ್ಯವಾಗಿ ಎಳನೀರು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ? ಇದು ನಿಮ್ಮ ದೇಹವನ್ನು ತಂಪಾಗಿಡುತ್ತದೆ. ಇದಲ್ಲದೇ ಪ್ರತಿದಿನ ಎಳನೀರು ಕುಡಿಯುವುದರಿಂದ ಅಧಿಕ ರಕ್ತದೊತ್ತಡದ ಪ್ರಮಾಣವನ್ನು ಕಡಿಮೆ ಮಾಡಬಹುದು. ಇದಲ್ಲದೇ , ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಬ್ಬರು ವ್ಯಕ್ತಿ ಕಳೆದ 24 ವರ್ಷಗಳಿಂದ ಎಳನೀರು ಹೊರತು ಪಡಿಸಿ ಬೇರೇನೂ ತಿಂದಿಲ್ಲ. ಜೊತೆಗೆ ತನ್ನ ಕಾಯಿಲೆಯನ್ನು ಎಳನೀರು ವಾಸಿ ಮಾಡಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ಎಂದರೇನು?

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಾಗಿದೆ. ನೀವು ಎದೆಯುರಿ ಹೊಂದಿದ್ದರೆ, ನಿಮ್ಮ ಎದೆಯ ಹಿಂಭಾಗದಲ್ಲಿ ಸುಡುವ ಸಂವೇದನೆ, ನೀವು ಮಲಗಿರುವಾಗ ಅಥವಾ ಊಟವನ್ನು ಸೇವಿಸಿದಾಗ ಇಂತಹ ಲಕ್ಷಣಗಳು ಕಾಣಿಸಿಕೊಂಡರೆ, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಡಿಸೀಸ್ (GERD) ನ ಲಕ್ಷಣಗಳಾಗಿವೆ.

ಇದನ್ನೂ ಓದಿ: ಆರೋಗ್ಯಕರ ಜೀರ್ಣಕ್ರಿಯೆಗಾಗಿ ಈ ಗಿಡಮೂಲಿಕೆಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಿ

ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ನನಗೆ ಜಿಇಆರ್‌ಡಿ ಇರುವುದು ತಿಳಿದ ನಂತರ, ನನ್ನ ದೇಹವು ಕ್ಷೀಣಿಸಲು ಪ್ರಾರಂಭವಾಯಿತು. ನಂತರ, ಚಿಕಿತ್ಸೆಯ ಭಾಗವಾಗಿ ತೆಂಗಿನಕಾಯಿಯನ್ನು ತಿನ್ನಲು ಪ್ರಾರಂಭಿಸಿದೆ. ಈಗ ನನ್ನ ದೇಹದಲ್ಲಿ ಸಾಕಷ್ಟು ಬದಲಾವಣೆಯನ್ನುಂಟು ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ತೆಂಗಿನಕಾಯಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸೋಡಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳು ಹೇರಳವಾಗಿದ್ದು, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ವಿರುದ್ಧ ಹೋರಾಡಲು ಸಹಾಯಮಾಡಿದೆ. ಜೊತೆಗೆ ಈಗ ಫಿಟ್ ಆಂಡ್​​ ಫೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:47 pm, Sat, 18 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ