ಮುಖದ ಅಂದವನ್ನು ಹೆಚ್ಚಿಸುತ್ತೆ ಈ ಅಕ್ಕಿಹಿಟ್ಟು ಫೇಸ್ ಪ್ಯಾಕ್

ಎಲ್ಲರಿಗೂ ಕೂಡ ತಮ್ಮ ತ್ವಚೆಯು ಮೃದುವಾಗಿ, ಮೊಡವೆಗಳಿಲ್ಲದೇ, ಕಲೆಗಳಿಲ್ಲದೇ ಇರಬೇಕು ಎನ್ನುವುದಿರುತ್ತದೆ. ಹೀಗಾಗಿ ಬಹುತೇಕ ಮಹಿಳೆಯರು ಮುಖದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಚಿಂತಿತರಾಗುತ್ತಾರೆ. ಮುಖದಲ್ಲಿರುವ ಮೊಡವೆ, ಕಪ್ಪು ಕಲೆ, ಕಣ್ಣಿನ ಸುತ್ತಲು ಇರುವ ಕಪ್ಪು ವರ್ತೂಲವನ್ನು ತೆಗೆದು ಹಾಕಲು ಮಾರುಕಟ್ಟೆಯಲ್ಲಿರುವ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುತ್ತೇವೆ. ಆದರೆ ಅಡುಗೆ ಮನೆಯಲ್ಲಿರುವ ಈ ಅಕ್ಕಿ ಹಿಟ್ಟು ಬಹಳ ಪ್ರಯೋಜನಕಾರಿಯಾಗಿದ್ದು, ಮುಖದ ಅಂದವನ್ನು ಹೆಚ್ಚಿಸುತ್ತದೆ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ.

ಮುಖದ ಅಂದವನ್ನು ಹೆಚ್ಚಿಸುತ್ತೆ ಈ ಅಕ್ಕಿಹಿಟ್ಟು ಫೇಸ್ ಪ್ಯಾಕ್
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 29, 2024 | 5:51 PM

ದಿನನಿತ್ಯ ದೋಸೆ ಇಡ್ಲಿ ಮಾಡಲು ಬಳಸುವ ಈ ಅಕ್ಕಿ ಹಿಟ್ಟನ್ನು ಅಡುಗೆಗೆ ಮಾತ್ರ ಸೀಮಿತ ಎಂದು ಹಲವರು ಅಂದುಕೊಂಡಿದ್ದಾರೆ. ರುಚಿ ರುಚಿಯಾಗಿ ತಿಂಡಿ ತಿನಿಸುಗಳನ್ನು ಮಾಡಲು ಬಳಸುವ ಈ ಅಕ್ಕಿಹಿಟ್ಟು ಮುಖದ ಸೌಂದರ್ಯದಲ್ಲಿಯೂ ಪ್ರಯೋಜನಕಾರಿಯಾಗಿದೆ. ಈ ಅಕ್ಕಿಯಲ್ಲಿ ವಿಟಮಿನ್ ಬಿಯಂತಹ ಪೋಷಕಾಂಶಗಳ ಸಮೃದ್ಧವಾಗಿದ್ದು, ಹೀಗಾಗಿ ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಅಂದವನ್ನು ಹೆಚ್ಚಿಸಲು ಬಯಸುವವರು ಮನೆಯಲ್ಲಿರುವ ಅಕ್ಕಿ ಹಿಟ್ಟಿನಿಂದ ತ್ವಚೆಗೆ ನಾನಾ ರೀತಿಯ ಫೇಸ್ ಪ್ಯಾಕ್ ಅನ್ನು ತಯಾರಿಸಿ ಮುಖಕ್ಕೆ ಹಚ್ಚಿಕೊಳ್ಳಬಹುದು.

* ಅಕ್ಕಿ ಹಿಟ್ಟಿನ ಫೇಸ್ ಸ್ಕ್ರಬ್: ಎರಡು ಚಮಚ ಅಕ್ಕಿ ಹಿಟ್ಟಿಗೆ ಒಂದು ಚಮಚ ಜೇನುತುಪ್ಪ ಮತ್ತು ಕೆಲವು ಹನಿ ನೀರು ಬೆರೆಸಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ ಒಂದೆರಡು ನಿಮಿಷಗಳ ಕಾಲ ನಿಧಾನವಾಗಿ ಮಸಾಜ್ ಮಾಡಿ. ಆ ಬಳಿಕ ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆದರೆ ಚರ್ಮವು ಮೃದುವಾಗುವುದಲ್ಲದೆ ಸತ್ತಜೀವ ಕೋಶಗಳನ್ನು ತೆಗೆದುಹಾಕುತ್ತವೆ.

*ಕಪ್ಪು ಕಲೆಯ ನಿವಾರಣೆಗೆ ಅಕ್ಕಿ ಹಿಟ್ಟಿನ ಫೇಸ್ ಪ್ಯಾಕ್ : ಎರಡು ಚಮಚ ಅಕ್ಕಿ ಹಿಟ್ಟನ್ನು ಒಂದು ಚಮಚ ಮೊಸರು ಮತ್ತು ಚಿಟಿಕೆ ಅರಿಶಿನದೊಂದಿಗೆ ಬೆರೆಸಿ ದಪ್ಪ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ, 15-20 ನಿಮಿಷಗಳ ಕಾಲ ನಂತರದಲ್ಲಿ ತಣ್ಣಗಿನ ನೀರಿನಿಂದ ತೊಳೆಯಿರಿ. ಈ ಫೇಸ್ ಪ್ಯಾಕ್ ನ ಕಪ್ಪು ಕಲೆಗಳನ್ನು ಕಡಿಮೆ ಮಾಡಿ ಮುಖದ ಹೊಳಪನ್ನು ಹೆಚ್ಚಿಸುತ್ತದೆ.

*ಎಣ್ಣೆಯುಕ್ತ ತ್ವಚೆಗೆ ಅಕ್ಕಿ ಹಿಟ್ಟು ಮತ್ತು ಗ್ರೀನ್ ಟೀ ಫೇಸ್ ಪ್ಯಾಕ್ : ಗ್ರೀನ್ ಟೀ ಬ್ಯಾಗ್ ಅನ್ನು ಸೋಸುವ ಮೊದಲು 5 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ನೆನೆಸಿಡಿ. ಸ್ವಲ್ಪ ಸಮಯವರೆಗೆ ತಣ್ಣಗಾಗಲು ಬಿಡಿ. ಇದಕ್ಕೆ ಅಕ್ಕಿ ಹಿಟ್ಟು ಮತ್ತು ನಿಂಬೆ ರಸವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇದನ್ನು ಚರ್ಮಕ್ಕೆ ನಿಧಾನವಾಗಿ ಮಸಾಜ್ ಮಾಡಿ, 20 ನಿಮಿಷಗಳ ನಂತರದಲ್ಲಿ ತಣ್ಣೀರಿನಿಂದ ಮುಖ ತೊಳೆಯಿರಿ.

*ಡಾರ್ಕ್ ಸರ್ಕಲ್ ಗೆ ಅಕ್ಕಿ ಹಿಟ್ಟು, ಕಡಲೆ ಹಿಟ್ಟು ಹಾಗೂ ಟೊಮೆಟೊ ರಸದ ಫೇಸ್ ಪ್ಯಾಕ್ : ಒಂದು ಚಮಚ ಅಕ್ಕಿ ಹಿಟ್ಟು, ಒಂದು ಚಮಚ ಕಡಲೆ ಹಿಟ್ಟು, ಅರ್ಧ ಕಪ್ ಟೊಮೆಟೊ ರಸ ಈ ಮೂರನ್ನು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಈ ಮಿಶ್ರಣವನ್ನು ಕಣ್ಣುಗಳ ಸುತ್ತಲಿನ ಪ್ರದೇಶಕ್ಕೆ ಅನ್ವಯಿಸಿ. 30 ನಿಮಿಷಗಳ ಕಾಲ ಹಾಗೆ ಬಿಟ್ಟು, ತಣ್ಣೀರಿನಿಂದ ತೊಳೆಯಿರಿ. ನಂತರ ಮಾಯಿಶ್ಚರೈಸರ್ ಮುಖಕ್ಕೆ ಹಚ್ಚಿಕೊಳ್ಳಿ.

ಇದನ್ನೂ ಓದಿ: ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹುಪಯೋಗಿ ಶುಂಠಿ

*ಮೊಡವೆಗಳಿಗೆ ಅಲೋವೆರಾ ಫೇಸ್ ಪ್ಯಾಕ್: ಎರಡು ಚಮಚ ಅಕ್ಕಿ ಹಿಟ್ಟು, ಎರಡು ಚಮಚ ಅಲೋವೆರಾ ಜೆಲ್ ಹಾಗೂ ಒಂದು ಚಮಚದಷ್ಟು ತುರಿದ ಸೌತೆಕಾಯಿಯನ್ನು ಸೇರಿಸಿ ನಯವಾದ ಪೇಸ್ಟ್ ಮಾಡಿಕೊಳ್ಳಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ 20 ನಿಮಿಷಗಳ ಕಾಲ ಒಣಗಲು ಬಿಡಿ. ಆ ಬಳಿಕ ತಣ್ಣೀರಿನಿಂದ ನಿಮ್ಮ ಮುಖವನ್ನು ಸ್ವಚ್ಛಗೊಳಿಸಿದರೆ ಮುಖದಲ್ಲಿರುವ ಮೊಡವೆಗಳು ಮಾಯವಾಗುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ