AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor: ಹೆಣ್ಣಿನ ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಆಪರೇಷನ್ ಸಿಂಧೂರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಇನ್ನು ಈಗ ಗೆಲ್ಲುವ ಅವಕಾಶ ಸಿಗುವುದುಂಟೆ!

Operation Sindoor: ಹೆಣ್ಣಿನ ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ
ಸಿಂಧೂರ
ಪ್ರೀತಿ ಭಟ್​, ಗುಣವಂತೆ
|

Updated on: May 07, 2025 | 10:40 AM

Share

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ (Pahalgam Attack) ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ (Indian Army) ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ (Terrorist Hideouts) ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ “ಆಪರೇಷನ್ ಸಿಂಧೂರ್” (Operation Sindoor) ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ. ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

ಇದನ್ನೂ ಓದಿ: Operation Sindoor: ಆಪರೇಷನ್ ಸಿಂಧೂರ್ ಎಂದರೇನು? ಪಾಕ್​ ನಿದ್ರೆಗೆಡಿಸಿದ ಭಾರತದ ದಾಳಿಗೆ ಈ ಹೆಸರಿಟ್ಟಿದ್ದೇಕೆ?

ಇದನ್ನೂ ಓದಿ
Image
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಸಿಂಧೂರ ಮತ್ತು ಪುರಾಣ

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ