ಜಿಗುಟು ಅಥವಾ ಎಣ್ಣೆಯುಕ್ತ ಚರ್ಮದಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದರೆ ಈ ವಿಧಾನವನ್ನು ಅನುಸರಿಸಬಹುದು
ಟ್ಯಾನಿಂಗ್ ಮತ್ತು ಮೊಡವೆಗಳಂತಹ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಚರ್ಮದ ಹೆಚ್ಚುವರಿ ಎಣ್ಣೆಯನ್ನು ನಿಯಂತ್ರಿಸಲು ನೀವು ಮುಲ್ತಾನಿ ಮಿಟ್ಟಿಯನ್ನು ಬಳಸಬಹುದು. ಮುಲ್ತಾನಿ ಮಿಟ್ಟಿಯನ್ನು ಬಳಸಿ ನೀವು ಹಲವಾರು ರೀತಿಯ ಫೇಸ್ ಪ್ಯಾಕ್‌ಗಳನ್ನು ತಯಾರಿಸಬಹುದು.
ಎಣ್ಣೆಯುಕ್ತ ತ್ವಚೆ ಇರುವವರು ಅನೇಕ ಚರ್ಮ ಸಂಬಂಧಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಎಣ್ಣೆಯುಕ್ತ ಚರ್ಮವು ಕೊಳೆಕನ್ನು ಬಹಳ ವೇಗವಾಗಿ ಆಕರ್ಷಿಸುತ್ತದೆ. ಇದರಿಂದಾಗಿ ಟ್ಯಾನಿಂಗ್ ಮತ್ತು ಮೊಡವೆಗಳಂತಹ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಚರ್ಮದ ಹೆಚ್ಚುವರಿ ಎಣ್ಣೆಯನ್ನು ನಿಯಂತ್ರಿಸಲು ನೀವು ಮುಲ್ತಾನಿ ಮಿಟ್ಟಿಯನ್ನು ಬಳಸಬಹುದು. ಮುಲ್ತಾನಿ ಮಿಟ್ಟಿಯನ್ನು ಬಳಸಿ ನೀವು ಹಲವಾರು ರೀತಿಯ ಫೇಸ್ ಪ್ಯಾಕ್‌ಗಳನ್ನು ತಯಾರಿಸಬಹುದು. ಚರ್ಮದ ಎಣ್ಣೆಯನ್ನು ನಿಯಂತ್ರಿಸುವ ಮೂಲಕ, ಇದು ಅನೇಕ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ಮುಲ್ತಾನಿ ಮಿಟ್ಟಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಮುಲ್ತಾನಿ ಮಿಟ್ಟಿ ಮತ್ತು ರೋಸ್ ವಾಟರ್ ಒಂದು ಬಟ್ಟಲಿನಲ್ಲಿ ಒಂದು ಚಮಚ ಮುಲ್ತಾನಿ ಮಿಟ್ಟಿ ತೆಗೆದುಕೊಳ್ಳಿ. ಅದಕ್ಕೆ ರೋಸ್ ವಾಟರ್ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ. ಈ ಪೇಸ್ಟ್ನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. ಅದು ಒಣಗುವವರೆಗೆ ಬಿಡಿ. ನಂತರ ನೀರಿನಿಂದ ತೊಳೆಯಿರಿ. ನೀವು ಈ ಫೇಸ್ ಪ್ಯಾಕ್ನ್ನು ವಾರಕ್ಕೆ 1 ರಿಂದ 2 ಬಾರಿ ಬಳಸಬಹುದು. ಈ ಫೇಸ್ ಪ್ಯಾಕ್ ಚರ್ಮದ ಸುಕ್ಕು, ಸೂಕ್ಷ್ಮ ರೇಖೆಗಳು ಮತ್ತು ಕಪ್ಪು ಚುಕ್ಕೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಮುಲ್ತಾನಿ ಮಿಟ್ಟಿ ಮತ್ತು ಜೇನುತುಪ್ಪ
ಒಂದು ಬಟ್ಟಲಿನಲ್ಲಿ ಒಂದು ಚಮಚ ಮುಲ್ತಾನಿ ಮಿಟ್ಟಿ ಪುಡಿಯನ್ನು ತೆಗೆದುಕೊಳ್ಳಿ. ಅದಕ್ಕೆ ಬೇಕಾದಷ್ಟು ಜೇನುತುಪ್ಪ ಸೇರಿಸಿ. ಈ ಎರಡು ವಸ್ತುಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಪ್ಯಾಕ್ ಮಾಡಿ. ಈ ಫೇಸ್ ಪ್ಯಾಕ್ನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. 15 ರಿಂದ 20 ನಿಮಿಷಗಳ ಕಾಲ ಬಿಡಿ. ನಂತರ ಚರ್ಮವನ್ನು ನೀರಿನಿಂದ ತೊಳೆಯಿರಿ. ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ನೀವು ಈ ಫೇಸ್ ಪ್ಯಾಕ್ನ್ನು ವಾರಕ್ಕೆ 1 ರಿಂದ 2 ಬಾರಿ ಬಳಸಬಹುದು. ಈ ಫೇಸ್ ಪ್ಯಾಕ್ ನಿಮ್ಮ ಚರ್ಮವನ್ನು ಮೃದುವಾಗಿಸಲು ಸಹಾಯ ಮಾಡುತ್ತದೆ.
ಮುಲ್ತಾನಿ ಮಿಟ್ಟಿ ಮತ್ತು ಅರಿಶಿನ
ಒಂದು ಬಟ್ಟಲಿನಲ್ಲಿ ಒಂದು ಚಮಚ ಮುಲ್ತಾನಿ ಮಿಟ್ಟಿ ಪುಡಿಯನ್ನು ತೆಗೆದುಕೊಳ್ಳಿ. ಅದಕ್ಕೆ ಸ್ವಲ್ಪ ಅರಿಶಿನ ಮತ್ತು ರೋಸ್ ವಾಟರ್ ಸೇರಿಸಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಫೇಸ್ ಪ್ಯಾಕ್ನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. 10 ರಿಂದ 15 ನಿಮಿಷ ಹಾಗೆಯೇ ಅದು ಒಣಗುವವರೆಗೆ ಬಿಡಿ. ನಂತರ ನೀರಿನಿಂದ ತೊಳೆಯಿರಿ. ಮೊಡವೆ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಈ ಫೇಸ್ ಪ್ಯಾಕ್ ಕೆಲಸ ಮಾಡುತ್ತದೆ. ಮೊಡವೆಗಳನ್ನು ಹೋಗಲಾಡಿಸಲು ನೀವು ವಾರಕ್ಕೆ 1 ರಿಂದ 2 ಬಾರಿ ಈ ಫೇಸ್ ಪ್ಯಾಕ್ನ್ನು ಬಳಸಬಹುದು. (ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. TV9 ಕನ್ನಡ ಡಿಜಿಟಲ್ಗೆ ಸಂಬಂಧಿಸಿರುವುದಿಲ್ಲ ತಜ್ಞರನ್ನು ಸಂಪರ್ಕಿಸಿ ನಂತರ ಇದನ್ನು ಅನುಸರಿಸಬಹುದು)
Published On - 9:29 am, Tue, 30 August 22