Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ

ಈ ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸಲು ಸಹಾಯಕವಾಗಿದೆ. ಜೊತೆಗೆ ನಿಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆಗೊಳಿಸಲು ಸಹಾಯಮಾಡುತ್ತದೆ.

Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ
ಸಾಂದರ್ಭಿಕ ಚಿತ್ರImage Credit source: NDTV FOOD
Follow us
| Updated By: Digi Tech Desk

Updated on:Dec 22, 2022 | 12:07 PM

ಚಳಿಗಾಲ(Winter) ದಲ್ಲಿ, ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಸೋಂಕುಗಳನ್ನು ತಡೆಗಟ್ಟಲು ಮತ್ತು ನೀವು ಇಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ಅವುಗಳ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುವ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ. ಚಳಿಗಾಲದಲ್ಲಿ ಹೊರಗಿನ ಶೀತಗಾಳಿಗೆ ದೇಹವು ಸಾಕಷ್ಟು ತಣ್ಣಗಾಗುವುದರಿಂದ ನಿಮ್ಮ ದೇಹವನ್ನು ಬೆಚ್ಚಗಿಡುವುದು ಅಗತ್ಯವಾಗಿದೆ. ಈ ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸುತ್ತದೆ. ಜೊತೆಗೆ ದೇಹದ ಅತಿಯಾದ ತೂಕದಿಂದ ನೀವು ಬಳಲುತ್ತಿದ್ದರೆ ತೂಕ ನಷ್ಟಗೊಳಿಸಲು ಇದು ಸಹಾಯವಾಗಿದೆ.

ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ಮಾಡುವ ವಿಧಾನದ ವೀಡಿಯೋ ಇಲ್ಲಿದೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್​ಗೆ ಬೇಕಾಗುವ ಸಾಮಾಗ್ರಿಗಳು:

2 ಕ್ಯಾರೆಟ್ 1 ಬೀಟ್ರೂಟ್ 4 ಟೊಮೆಟೊ 1 ಚಮಚ ಆಲಿವ್ ಎಣ್ಣೆ ಚಿಕ್ಕ ತುಂಡು ಶುಂಠಿ ರುಚಿಗೆ ಉಪ್ಪು 1 ಚಮಚ ಮೆಣಸಿನ ಹುಡಿ ಸ್ವಲ್ಪ ಕೊತ್ತಂಬರಿ ಸೊಪ್ಪು

ಇದನ್ನೂ ಓದಿ: ಭಾರತೀಯ ಕರೆನ್ಸಿಯ ಮೂಲಕ ಕಡಿಮೆ ಖರ್ಚಿನಲ್ಲಿ ಹೋಗಬಹುದಾದ ವಿದೇಶಿ ತಾಣಗಳು ಇಲ್ಲಿವೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್ ತಯಾರಿಸುವುದು ಹೇಗೆ?:

ಮೊದಲಿಗೆ 2 ಕ್ಯಾರೆಟ್, 1 ಬೀಟ್ರೂಟ್ ಮತ್ತು 4 ಟೊಮೆಟೊಗಳನ್ನು ತೆಗೆದುಕೊಳ್ಳಿ. ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿ. ನಂತರ ಒಂದು ಕುಕ್ಕರ್ ತೆಗೆದುಕೊಂಡು ಸ್ವಲ್ಪ ಆಲಿವ್ ಎಣ್ಣೆ ಮತ್ತು ಕತ್ತರಿಸಿದ ಶುಂಠಿಯನ್ನು ಬಿಸಿ ಮಾಡಿ. ನಂತರ ಇದಕ್ಕೆ ಕತ್ತರಿಸಿದ ತರಕಾರಿಗಳನ್ನು ಸೇರಿಸಿ, ಸ್ವಲ್ಪ ಉಪ್ಪು ಮತ್ತು ಮೆಣಸಿನ ಹುಡಿಯನ್ನು ಹಾಕಿ ಮತ್ತು 2-3 ಗ್ಲಾಸ್ ನೀರು ಸೇರಿಸಿ. ತರಕಾರಿಗಳು ಬೇಯುವ ವರೆಗೆ ಕುಕ್ ಮಾಡಿ. ಕೊನೆಯದಾಗಿ ಒಂದು ಬೌಲ್​ಗೆ ಹಾಕಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:28 am, Thu, 22 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್