Tulu Script : ತುಳುವರಿಗೆ ಸಂತಸದ ಸುದ್ದಿ, ಯೂನಿಕೋಡ್​​ಗೆ ತುಳುಲಿಪಿ ಸೇರ್ಪಡೆ

ಕಳೆದ ಐದಾರು ವರ್ಷಗಳಿಂದ ತುಳು ಲಿಪಿಯ ಬಳಕೆ ಹಾಗೂ ಅದರ ಕುರಿತಾದ ಅಧ್ಯಯನಗಳು ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೇ ಗೂಗಲ್ ಟ್ರಾನ್ಸಲೇಟರ್ ತಂತ್ರಾಂಶದಲ್ಲಿಯೂ ತುಳುಭಾಷೆ ಸೇರ್ಪಡೆಯಾಗಿತ್ತು. ಆದರೆ ಇದೀಗ ತುಳುವವರಿಗೆ ಮತ್ತೊಂದು ಸಿಹಿಯೊಂದು ಹೊರಬಿದ್ದಿದೆ. ಕರಾವಳಿಗರ ಮಾತೃಭಾಷೆಯಾಗಿರುವ ತುಳು ಭಾಷೆಯ ತುಳುಲಿಪಿಯನ್ನು ಕಂಪ್ಯೂಟರ್ ಕೀಲಿಮಣೆಗೂ ತರಲಾಗಿದೆ.

Tulu Script : ತುಳುವರಿಗೆ ಸಂತಸದ ಸುದ್ದಿ, ಯೂನಿಕೋಡ್​​ಗೆ ತುಳುಲಿಪಿ ಸೇರ್ಪಡೆ
ತುಳುಲಿಪಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 10, 2024 | 11:54 AM

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ ಈ ತುಳು. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಈ ತುಳುಭಾಷೆ ಹೆಚ್ಚಾಗಿ ಚಾಲ್ತಿಯಲ್ಲಿದೆ. ಅದಲ್ಲದೇ, ಸರಿಸುಮಾರು ಹತ್ತನೇಯ ಶತಮಾನದಲ್ಲಿ ತುಳು ಬ್ರಾಹ್ಮಣರು ದಕ್ಷಿಣ ಭಾರತದ ಭಾಗಗಳಲ್ಲಿ ವಿಕಾಸವಾದ ತಿಗಳಾರಿ ಲಿಪಿ ಎಂಬ ಬ್ರಾಹ್ಮಿ ಆಧಾರಿತ ಲಿಪಿಯನ್ನು ಉಪಯೋಗಿಸುತ್ತಿದ್ದರು. ಆದರೆ ಇದೀಗ ತುಳುಭಾಷೆಯ ಲಿಪಿ ಯುನಿಕೋಡ್‌ಗೂ ಸೇರ್ಪಡೆಯಾಗಿರುವುದು ತುಳುವರಿಗೆ ಸಂತೋಷವನ್ನುಂಟು ಮಾಡಿದೆ.

ತುಳು ಲಿಪಿಗಿರುವ ಇನ್ನೊಂದು ಹೆಸರಿನ ಮೂಲಕ ತುಳು ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದ್ದು, ಇನ್ನು ಮುಂದೆ ತುಳುಲಿಪಿಯಲ್ಲಿಯೇ ಪಠ್ಯಗಳನ್ನು ಓದಬಹುದಾಗಿದೆ. ಸಾಮಾನ್ಯವಾಗಿ ಇಂಗ್ಲಿಷ್, ಕನ್ನಡ ಸೇರಿದಂತೆ ಬೇರೆ ಯಾವ ಭಾಷೆಯಲ್ಲಿ ಶಬ್ದಗಳನ್ನು ಬರೆದರೆ, ಅದನ್ನು ತುಳುವಿನಲ್ಲಿ ಅನುವಾದಿಸುವ ಕೆಲಸವನ್ನು ಈ ಗೂಗಲ್ ಮಾಡುತ್ತದೆ. ಇದೀಗ ತುಳು ಲಿಪಿಯದ್ದೇ ಅಧಿಕೃತ ಫಾಂಟ್ ಕೀಲಿಮಣೆಯಲ್ಲಿ ಲಭ್ಯವಿದ್ದು, ಹೀಗಾಗಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತ್ತರ ಡಿಜಿಟಲ್ ವ್ಯವಸ್ಥೆಯಲ್ಲಿ ತುಳುಲಿಪಿಯನ್ನು ಓದುವ ಅವಕಾಶವೊಂದು ದೊರೆತಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ತುಳುವರ ಬಹು ವರ್ಷದ ಕನಸು ಈಡೇರಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ‘ತುಳು ಲಿಪಿಗಿರುವ ಇನ್ನೊಂದು ಹೆಸರಿನ ಜೊತೆಗೆ ತುಳು ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನ ಪ್ರಯತ್ನಕ್ಕೆ ಈಗ ಇನ್ನಷ್ಟು ಹೆಚ್ಚಿನ ಮಹತ್ವ ಬಂದಿದೆ’ ಎಂದಿದ್ದಾರೆ.

‘ಎ.ಸಿ. ಭಂಡಾರಿ ಅವರು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ತುಳು ಲಿಪಿಯನ್ನು ಯೂನಿಕೋಡ್‌ನಲ್ಲಿ ಅಳವಡಿಸಲು 2017ರಲ್ಲಿ ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿದ್ದರು. ಇದಕ್ಕೆ ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ನಂತರ ತಜ್ಞರು ನಿರಂತರವಾಗಿ ಈ ವಿಷಯದ ಬಗ್ಗೆ ಸತತ ಮನವಿಗಳನ್ನು, ಪರಿಷ್ಕರಣೆಗಳನ್ನು ಕಳುಹಿಸಿದ್ದರು. ಅವರೆಲ್ಲರ ಪ್ರಯತ್ನದ ಫಲವಾಗಿ ತುಳು ಲಿಪಿಯನ್ನು ಯುನಿಕೋಡ್ ಅಂಗೀಕರಿಸುವಂತಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡವರಲ್ಲಿ ಮಹಿಳೆಯರಿಗಿಂತ ಪುರುಷರೇ ಅಧಿಕ: ಅಂಕಿಅಂಶದಿಂದ ಬಹಿರಂಗ

‘ತುಳು ಲಿಪಿಯನ್ನು ಯುನಿಕೋಡ್ ಆಗಿ ಅಂಗೀಕರಿಸುವ ನಿಟ್ಟಿನಲ್ಲಿ ತಜ್ಞರಾದ ಕೆ.ಪಿ. ರಾವ್, ಯು.ಬಿ.ಪವನಜ, ವೈಷ್ಣವಿ ಮೂರ್ತಿ, ಎಸ್.ಎ.ಕೃಷ್ಣಯ್ಯ, ರಾಧಕೃಷ್ಣ ಬೆಳ್ಳೂರು, ಭಾಸ್ಕರ್ ಶೇರಿಗಾರ್, ಎಸ್.ಆರ್. ವಿಘ್ನರಾಜ್, ಆಕಾಶ್ ರಾಜ್ ಸೇರಿದಂತೆ ಅನೇಕರು ಕೊಡುಗೆಗಳನ್ನು ನೀಡಿದ್ದಾರೆ. ತುಳು ವಿಕಿಪೀಡಿಯಕ್ಕಾಗಿ ಶ್ರಮಿಸಿದ್ದ ವಿಶ್ವ ಕನ್ನಡ ಸಂಪಾದಕ ಯು.ಬಿ. ಪವನಜ, ‘ಯುನಿಕೋಡ್ ಆವೃತ್ತಿ 16 ರಲ್ಲಿ ತುಳು ಸೇರ್ಪಡೆಯಾಗಿದೆ. ಒಟ್ಟು 80 ಅಕ್ಷರಗಳನ್ನು ಸೇರಿಸಿದ್ದಾರೆ’ ಎಂದು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು