ಯುನೆಸ್ಕೋದ ವಿಶ್ವ ನೋಂದಣಿ ಪಟ್ಟಿಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ : ಭಾರತೀಯರಿಗೆ ಇದು ಹೆಮ್ಮೆಯ ಕ್ಷಣ ಎಂದ ಮೋದಿ

ಪುರಾತನ ಭಾರತೀಯ ಗ್ರಂಥಗಳಾದ ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಯುನೆಸ್ಕೋ ತನ್ನ ವಿಶ್ವ ನೋಂದಣಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. ಇದು ನಿಜಕ್ಕೂ ಭಾರತೀಯರಿಗೆ ಮರೆಯಲಾಗದ ಹಾಗೂ ಹೆಮ್ಮೆ ಪಡುವ ಕ್ಷಣವಾಗಿದೆ. ಹೌದು, ಈ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

ಯುನೆಸ್ಕೋದ ವಿಶ್ವ ನೋಂದಣಿ ಪಟ್ಟಿಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ : ಭಾರತೀಯರಿಗೆ ಇದು ಹೆಮ್ಮೆಯ ಕ್ಷಣ ಎಂದ ಮೋದಿ
ಯುನೆಸ್ಕೋದ ವಿಶ್ವ ನೋಂದಣಿ ಪಟ್ಟಿಗೆ ಭಗವದ್ಗೀತೆ, ನಾಟ್ಯಶಾಸ್ತ್ರ
Updated By: ಅಕ್ಷಯ್​ ಪಲ್ಲಮಜಲು​​

Updated on: Apr 18, 2025 | 2:36 PM

ಭಾರತ ಈ ಹೆಸರು ಕೇಳಿದ ಕೂಡಲೇ ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯೂ ಕಣ್ಣ ಮುಂದೇ ಬರುತ್ತದೆ. ಆದರೆ ಇದೀಗ ಭಾರತದ ಪ್ರಮುಖ ಗ್ರಂಥಗಳಾದ ಭಗವದ್ಗೀತೆ (bhagavad gita) ಮತ್ತು ಭರತ ಮುನಿ (bharat muni) ಗಳ ನಾಟ್ಯಶಾಸ್ತ್ರ (natya shastra) ಕ್ಕೆ ಯುನೆಸ್ಕೋದಿಂದ (UNESCO’s)ದ ಮನ್ನಣೆ ಸಿಕ್ಕಿದೆ. ಹೌದು, ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼನಲ್ಲಿ ಈ ಎರಡು ಪ್ರಮುಖ ಗ್ರಂಥಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದು ಭಾರತೀಯರ ಪಾಲಿನ ಮರೆಯಲಾಗದ ಕ್ಷಣಗಳಲ್ಲಿ ಒಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣವಾಗಿದೆ. ಈ ಸೇರ್ಪಡೆ ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆ ಮತ್ತು ಪ್ರಜ್ಞೆಯನ್ನು ಪೋಷಿಸಿವೆ. ಅವರ ಒಳನೋಟಗಳು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
ಹೊಸ ವರ್ಷ ಆಚರಿಸಿ ಫೂಲ್ ಆದ ದೇಶ ಯಾವುದು?
ದೇಹ ಆಕಾರವೇ ನಿಮ್ಮ ವ್ಯಕ್ತಿತ್ವ ಬಹಿರಂಗ ಪಡಿಸುತ್ತೆ
ಬೇಸಿಗೆಯ ದಾಹ ನೀಗಿಸಲು ಎಳನೀರು ಕುಲುಕ್ಕಿ ಶರ್ಬತ್‌ ಒಮ್ಮೆ ಟ್ರೈ ಮಾಡಿ…
ಭಾರತದ ಹೊರತುಪಡಿಸಿ ವಿದೇಶದಲ್ಲಿರುವ ಪ್ರಮುಖ ಶಿವ ದೇವಾಲಯಗಳಿವು

ಇದನ್ನೂ ಓದಿ :ಅಜಂತಾ ಎಲ್ಲೋರಾ ಗುಹೆಯಿಂದ ಹಂಪಿವರೆಗೆ; ಈ ಎಲ್ಲ ಸ್ಥಳಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳು

ಪ್ರಧಾನಿ ಮೋದಿ ಟ್ವೀಟ್ ಇಲ್ಲಿದೆ:

ಅದಲ್ಲದೇ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆಗೊಳಿಸಿರುವುದು ಭಾರತದ ನಾಗರಿಕ ಪರಂಪರೆಗೆ ಐತಿಹಾಸಿಕ ಕ್ಷಣ. ಈ ಜಾಗತಿಕ ಗೌರವವು ಭಾರತದ ಶಾಶ್ವತ ಬುದ್ಧಿವಂತಿಕೆ ಮತ್ತು ಕಲಾತ್ಮಕ ಪ್ರತಿಭೆಗೆ ಸಾಕ್ಷಿಯಾಗಿದೆ. ಇದು ಭಾರತದ ವಿಶ್ವದೃಷ್ಟಿಕೋನ, ನಾವು ಯೋಚಿಸುವ, ಅನುಭವಿಸುವ, ಬದುಕುವ ತಾತ್ವಿಕ ಮತ್ತು ಸೌಂದರ್ಯಕ್ಕೆ ಅಡಿಪಾಯಗಳಾಗಿವೆ. ನಾವೀಗ ಅಂತಾರಾಷ್ಟ್ರೀಯ ನೋಂದಣಿಯಲ್ಲಿ ನಮ್ಮ ದೇಶದಿಂದ 14 ಶಾಸನಗಳನ್ನು ಹೊಂದಿದ್ದೇವೆ’ ಎಂದು ತಿಳಿಸಿದ್ದಾರೆ.

ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ