AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ.

ಒದ್ದೆಯಾದ ಒಳ ಉಡುಪುಗಳನ್ನು ಬಳಸುತ್ತೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ ಎಚ್ಚರ!
ಪ್ರಾತನಿಧಿಕ ಚಿತ್ರ
TV9 Web
| Edited By: |

Updated on: Sep 16, 2022 | 7:07 PM

Share

ಅನೇಕ ಜನರು ತಮ್ಮ ಒಳ ಉಡುಪುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಸಾಮಾನ್ಯ ಬಟ್ಟೆಗಳಿಗೆ ಕೊಡುವ ಆದ್ಯತೆಯನ್ನು ಒಳ ಉಡುಪುಗಳಿಗೆ ನೀಡುವುದಿಲ್ಲ. ಆದರೆ ಒಳಉಡುಪುಗಳ ಶುಚಿತ್ವದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಒಳ ಉಡುಪುಗಳ ವಿಷಯದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎಂದು ಲೇಖನದ ಮೂಲಕ ತಿಳಿದುಕೊಳೋಣ.

ಒಳ ಉಡುಪುಗಳ ವಿಚಾರದಲ್ಲಿ ಎಚ್ಚರಿಕೆ ವಹಿಸದಿದ್ದರೆ ಪುರುಷರ ಹಾಗೂ ಮಹಿಳೆಯರ ಖಾಸಗಿ ಅಂಗದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಹೆಚ್ಚು ಎನ್ನಲಾಗುತ್ತಿದೆ. ಮಣ್ಣಾದ ಒಳ ಉಡುಪುಗಳನ್ನು ಬಳಸುವುದರಿಂದ ಶಿಲೀಂಧ್ರ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು. ತುರಿಕೆ ಮತ್ತು ಕೆಂಪು ದದ್ದುಗಳು ಕಾಣಿಸಿಕೊಳ್ಳಬಹುದು. ಇದು ಯೀಸ್ಟ್ ಸೋಂಕಿನಂತಹ ಅಪಾಯಗಳಿಗೆ ಕಾರಣವಾಗಬಹುದು. ಇವುಗಳಿಂದಾಗಿ ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ತುರಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಒಳ ಉಡುಪುಗಳನ್ನು ದೀರ್ಘಕಾಲದವರೆಗೆ ಬಳಸಿದರೆ, pH ಮೌಲ್ಯಗಳಲ್ಲಿನ ಬದಲಾವಣೆಗಳಿಂದ ಅಪಾಯವಿದೆ.

ಇದನ್ನೂ ಓದಿ: Cinnamon: ದಾಲ್ಚಿನ್ನಿಯಿಂದಾಗುವ ಅನುಕೂಲಗಳು, ಅನನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

ದೀರ್ಘ ವರ್ಕೌಟ್, ವಾಕಿಂಗ್, ಜಾಗಿಂಗ್ ಮಾಡುವವರು ವರ್ಕೌಟ್ ಆದ ಕೂಡಲೇ ಒಳ ಉಡುಪುಗಳನ್ನು ಬದಲಿಸಬೇಕು ಎನ್ನುತ್ತಾರೆ ತಜ್ಞರು. ವ್ಯಾಯಾಮವು ಸ್ವಾಭಾವಿಕವಾಗಿ ಖಾಸಗಿ ಭಾಗಗಳಲ್ಲಿ ಬೆವರುವಿಕೆಗೆ ಕಾರಣವಾಗುತ್ತದೆ. ಹಾಗೇ ಬಿಟ್ಟರೆ ಸಾಂಕ್ರಾಮಿಕ ರೋಗಗಳು ಬರಬಹುದು ಎನ್ನುತ್ತಾರೆ ತಜ್ಞರು. ಬೆವರುವಿಕೆಯ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಒಳ ಉಡುಪುಗಳನ್ನು ದಿನಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಬದಲಾಯಿಸಬೇಕೆಂದು ತಜ್ಞರು ಸೂಚಿಸುತ್ತಾರೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?