Vaikuntha Ekadashi 2025: ವೈಕುಂಠ ಏಕದಾಶಿಯಂದು ಯಾವ ಬಣ್ಣದ ಬಟ್ಟೆ ಹಾಗೂ ಆಭರಣ ಧರಿಸಬೇಕು?

ವೈಕುಂಠ ಏಕಾದಶಿಯು ಹಿಂದೂ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವನ್ನು ನೀಡಲಾಗಿದ್ದು, ಇದು ವಿ‍ಷ್ಣುವಿನ ಆರಾಧನೆ ಹಾಗೂ ಉಪವಾಸಕ್ಕೆ ಪ್ರಸಿದ್ಧಿಯಾಗಿದೆ. ಈ ಬಾರಿಯ ವೈಕುಂಠ ಏಕಾದಶಿಯು ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಬಂದಿದ್ದು, ಜನವರಿ 10 ರಂದು ವೈಕುಂಠ ಏಕಾದಶಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ವಿಷ್ಣುವನ್ನು ಬಹಳ ಶ್ರದ್ಧೆ ಹಾಗೂ ಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥಗಳು ಈಡೇರುತ್ತದೆ. ಹಾಗಾದ್ರೆ ಈ ವೈಕುಂಠ ಏಕಾದಶಿ ಯಾವ ಬಣ್ಣದ ಬಟ್ಟೆ ಹಾಗೂ ಯಾವ ವಿಧದ ಆಭರಣವನ್ನು ಧರಿಸಿದರೆ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಸಾಧ್ಯ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Vaikuntha Ekadashi 2025: ವೈಕುಂಠ ಏಕದಾಶಿಯಂದು ಯಾವ ಬಣ್ಣದ ಬಟ್ಟೆ ಹಾಗೂ ಆಭರಣ ಧರಿಸಬೇಕು?
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 09, 2025 | 5:12 PM

ವೈಕುಂಠ ಏಕಾದಶಿಯು ಹಿಂದೂ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವನ್ನು ಹೊಂದಿದೆ. 2025 ರ ಮೊದಲ ತಿಂಗಳಾದ ಜನವರಿಯಲ್ಲಿ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಪುಷ್ಯ ಮಾಸದ ಶುಕ್ಲ ಪಕ್ಷದ ಈ ಏಕಾದಶಿಯನ್ನು ಪೌಷ್ಯ ಪುತ್ರಾದ ಏಕಾದಶಿ ಎಂದೂ ಸಹ ಕರೆಯುತ್ತಾರೆ. ಹಿಂದೂ ಪಂಚಾಗದ ಪ್ರಕಾರ ಈ ವರ್ಷದ ವೈಕುಂಠ ಏಕಾದಶಿಯನ್ನು ನಾಳೆ ಜನವರಿ 10 ಶುಕ್ರವಾರದಂದು ಆಚರಿಸಲಾಗುತ್ತದೆ. ಈ ಏಕಾದಶಿ ತಿಥಿಯು ಜನವರಿ 9 ರಂದು ಮಧ್ಯಾಹ್ನ 12:22 ಕ್ಕೆ ಪ್ರಾರಂಭವಾಗಿ, ಜನವರಿ 10 ರಂದು ಬೆಳಗ್ಗೆ 10:19 ಕ್ಕೆ ಕೊನೆಗೊಳ್ಳುತ್ತದೆ. ಹೀಗಾಗಿ ಜನವರಿ 10 ರಂದು ಉದಯ ತಿಥಿಯಂತೆ ವೈಕುಂಠ ಏಕಾದಶಿ ಉಪವಾಸ ಕೈಗೊಳ್ಳಲಾಗುತ್ತದೆ. ಈ ದಿನ ಶ್ರೀ ವಿಷ್ಣುವನ್ನು ವಿಧಿ ವಿಧಾನಗಳಿಂದ ಪೂಜಿಸಲಾಗುತ್ತದೆ. ಹಾಗಾದ್ರೆ ಈ ದಿನ ಯಾವ ಬಣ್ಣದ ಬಟ್ಟೆ ಹಾಗೂ ಯಾವ ರೀತಿಯ ಆಭರಣ ಧರಿಸಬೇಕು? ಎನ್ನುವುದನ್ನು ತಿಳಿದುಕೊಳ್ಳಿ.

ನಂಬಿಕೆಯ ಪ್ರಕಾರ ಈ ದಿನ ದಕ್ಷಿಣಾಯನದಲ್ಲಿ ನಿದ್ರಿಸುವ ವಿಷ್ಣು ಉತ್ತರಾಯಣದಲ್ಲಿ ಏಳುತ್ತಾನೆ. ಈ ದಿನ ಮೂರು ಕೋಟಿ ದೇವರಿಗೆ ದರ್ಶನ ನೀಡುತ್ತಾನೆ ಎನ್ನುವ ಕಾರಣಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಈ ದಿನದಂದು ವೈಕುಂಠದ ಬಾಗಿಲು ತೆರೆಯುತ್ತದೆ, ಈ ಏಕಾದಶಿಯಂದು ವಿಷ್ಣುವಿನ ಸ್ಮರಣೆ ಹಾಗೂ ಉಪವಾಸ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಹೀಗಾಗಿ ಬೆಳಗ್ಗೆಯಿಂದ ಉಪವಾಸ ಇದ್ದು, ವಿಷ್ಣುವಿನ ದೇವಸ್ಥಾನದಲ್ಲಿ ವೈಕುಂಠ ದ್ವಾರದ ಮೂಲಕ ಹಾದು ಹೋಗಿ ಆಶೀರ್ವಾದ ಪಡೆಯುತ್ತಾರೆ. ದೇವಸ್ಥಾನಗಳಲ್ಲಿ ಪೂಜೆ, ಹೋಮ ಹವನಗಳು ಸೇರಿದಂತೆ ಭಜನಾ ಕಾರ್ಯಕ್ರಮಗಳು ನಡೆಯುತ್ತವೆ.

ಇದನ್ನೂ ಓದಿ: ವೈಕುಂಠ ಏಕದಾಶಿಯಂದು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವನೆ ಮಾಡಬೇಡಿ

ಯಾವ ಬಣ್ಣದ ಬಟ್ಟೆ ಹಾಗೂ ಯಾವ ರೀತಿಯ ಆಭರಣ ಧರಿಸಬೇಕು?

ವೈಕುಂಠ ಏಕಾದಶಿಯಂದು ಸೂರ್ಯೋದಯಕ್ಕೂ ಮುನ್ನವೇ ಎದ್ದು ಸ್ನಾನ ಮಾಡಬೇಕು. ಈ ದಿನ ಮುಂಜಾನೆ ಸ್ನಾನದ ಬಳಿಕ ಹಳದಿ ಬಟ್ಟೆಯನ್ನು ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ವಿಷ್ಣುವಿನ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ ಇದೇ ಬಣ್ಣದ ಬಟ್ಟೆ ಧರಿಸಿದರೆ ಇಷ್ಟಾರ್ಥಗಳನ್ನು ಶ್ರೀಹರಿ ಈಡೇರಿಸುತ್ತಾನಂತೆ. ಹಳದಿ ಬಟ್ಟೆ ತೊಟ್ಟು ಹಳದಿ ಹೂವುಗಳು, ಹಣ್ಣುಗಳನ್ನು ಅರ್ಪಿಸಬೇಕು. ಉಪವಾಸ ಆರಂಭಿಸಿ ದೇವರ ಮುಂದೆ ತುಪ್ಪ ಬೆಳಗಿಸಿ ವಿಷ್ಣು ಹಾಗೂ ಲಕ್ಷ್ಮೀಯನ್ನು ಪೂಜಿಸಬೇಕು. ಲಕ್ಷ್ಮಿ ದೇವಿಯನ್ನು ಪೂಜಿಸುವ ಸಾಂಪ್ರದಾಯಿಕವಾದ ಪೂರ್ವಜರ ಆಭರಣಗಳಿದ್ದರೆ ಧರಿಸಿದರೆ ಒಳ್ಳೆಯದು, ಇದರಿಂದ ಲಕ್ಷ್ಮಿ ದೇವಿಯ ಕೃಪೆಗೂ ಪಾತ್ರರಾಗುತ್ತೀರಿ. ಈ ದಿನ ಭಗವಾನ್ ವಿಷ್ಣುವಿಗೆ ಪಂಚಾಮೃತದಿಂದ ಅಭಿಷೇಕ, ತುಳಸಿ ಎಲೆಗಳನ್ನು ಅರ್ಪಣೆ ಹಾಗೂ ವಿಷ್ಣು ಮಂತ್ರಗಳ ಪಠಣೆ ಮಾಡುವುದರಿಂದ ಶ್ರೀಹರಿಯ ಕೃಪೆಗೆ ಪಾತ್ರರಾಗಿ ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್