AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ?

Valentine Day Color Code: ಪ್ರೇಮಿಗಳ ದಿನದಂದು ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳಿವೆ, ಕೆಲವರು ದುಬಾರಿ ಗಿಫ್ಟ್‌ಗಳನ್ನು ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಪ್ರೇಮಿಗಳ ದಿನವನ್ನು ಸಂಭ್ರಮಿಸಲು ಕೆಂಪು ಬಣ್ಣದ ಬಟ್ಟೆಯನ್ನು ತೊಡುತ್ತಾರೆ. ಕೆಂಪು ಬಣ್ಣದ ಬಟ್ಟೆ ಮಾತ್ರವಲ್ಲ ಈ ಕೆಲವು ಬಣ್ಣಗಳ ಬಟ್ಟೆಯನ್ನು ಧರಿಸುವ ಮೂಲಕವೂ ವಿವಿಧ ರೀತಿಯ ಭಾವನೆಗಳನ್ನು ವ್ಯಕ್ತಪಡಿಸಬಹುದು. ಹಾಗಿದ್ರೆ ಯಾವ ಬಣ್ಣದ ಬಟ್ಟೆ ಏನರ್ಥವನ್ನು ನೀಡುತ್ತದೆ ಎಂಬುದನ್ನು ತಿಳಿಯೋಣ ಬನ್ನಿ.

Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ?
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 12, 2026 | 8:09 PM

Share

ಪ್ರತಿವರ್ಷ ಫೆಬ್ರವರಿ 14 ರಂದು ವ್ಯಾಲೆಂಟೈನ್‌ ಡೇ (Valentine Day) ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳ ಪಾಲಿಗೆ ತುಂಬಾನೇ ಸ್ಪೆಷಲ್.‌ ಹೌದು ಈ ದಿನ ಪ್ರೇಮಪಕ್ಷಿಗಳು ತಮ್ಮ ಮುದ್ದಿನ ಸಂಗಾತಿಗೆ ಐ ಲವ್‌ ಯೂ ಹೇಳಿ, ಒಂದು ಗಿಫ್ಟ್‌ ಕೊಟ್ಟು ವಿಶೇಷ ಭಾವನೆ ಮೂಡಿಸುತ್ತಾರೆ. ಇನ್ನೂ ಕೆಲವರು ಕೆಂಪು ಬಣ್ಣದ ಬಟ್ಟೆಯನ್ನು ತೊಟ್ಟು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೇಮಿಗಳ ದಿನದಂದು ಕೆಂಪು ಬಣ್ಣವೇ ಧರಿಸಬೇಕೆಂದಿಲ್ಲ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಈ ಕೆಲವು ಬಣ್ಣದ ಬಟ್ಟೆಗಳನ್ನೂ ಧರಿಸಬಹುದು. ಈ ಬಣ್ಣದ ಬಟ್ಟೆಗಳು ಒಂದೊಂದು ಅರ್ಥವನ್ನು ಹೊಂದಿದ್ದು, ಪ್ರೇಮಿಗಳ ದಿನದಂದು ಧರಿಸುವ ಯಾವ ಬಣ್ಣದ ಬಟ್ಟೆ ಯಾವ ಅರ್ಥವನ್ನು ಸೂಚಿಸುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆ ಧರಿಸಬೇಕು?

 ಕೆಂಪು – ಪ್ರೀತಿ ಮತ್ತು ಉತ್ಸಾಹ: ಈ ಬಣ್ಣವು ಪ್ರೀತಿ, ಉತ್ಸಾಹದ ಭಾವನೆಯನ್ನು ಸಂಕೇತಿಸುತ್ತದೆ. ಆದ್ದರಿಂದ, ಈ ಪ್ರೇಮಿಗಳ ದಿನದಂದು ನಿಮ್ಮ ಸಂಗಾತಿಯನ್ನು ನೀವು ಎಷ್ಟು ಪ್ರೀತಿಸುತ್ತೀರಿ ಎಂದು ತೋರಿಸಲು ಬಯಸಿದರೆ, ಕೆಂಪು ಬಣ್ಣದ ಬಟ್ಟೆಯನ್ನು ಧರಿಸುವುದು ಉತ್ತಮ ಆಯ್ಕೆಯಾಗಿದೆ. ಒಟ್ಟಾರೆಯಾಗಿ ಕೆಂಪು ಪರಸ್ಪರ ಪ್ರೀತಿಯ ಸಂಕೇತವಾಗಿದೆ.

ಗುಲಾಬಿ – ಸಿಹಿ ಮತ್ತು ಮಾಧುರ್ಯ: ಗುಲಾಬಿ ಬಣ್ಣವನ್ನು ಮೃದುತ್ವ, ಮಾಧುರ್ಯ ಮತ್ತು  ಪ್ರೀತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ತಮ್ಮ ಪ್ರೀತಿ ಸೂಕ್ಷ್ಮ, ಸಿಹಿ ಮತ್ತು ನಿಜವಾದದ್ದು ಎಂದು ತಮ್ಮ ಸಂಗಾತಿಗೆ ತಿಳಿಸಲು ಬಯಸುವವರಿಗೆ  ಪ್ರೇಮಿಗಳ ದಿನದಂದು ಈ ಬಣ್ಣದ ಬಟ್ಟೆ ಧರಿಸುವುದು ಸೂಕ್ತವಾಗಿದೆ.

ಬಿಳಿ – ಶುದ್ಧತೆ ಮತ್ತು ಪ್ರಾಮಾಣಿಕತೆ: ಬಿಳಿ ಬಣ್ಣವು ಶುದ್ಧತೆ, ಪ್ರಾಮಾಣಿಕತೆ ಮತ್ತು ಹೊಸ ಆರಂಭಗಳನ್ನು ಸಂಕೇತಿಸುತ್ತದೆ. ನಿಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಅಥವಾ ನಿಮ್ಮ ಸಂಗಾತಿಯೊಂದಿಗೆ ಪ್ರೀತಿಯನ್ನು ಪ್ರಾರಂಭಿಸಲು ನೀವು ಬಯಸಿದರೆ, ಬಿಳಿ ಬಣ್ಣದ ಬಟ್ಟೆಯನ್ನು ಪ್ರೇಮಿಗಳ ದಿನದಂದು  ಧರಿಸುವುದು ಉತ್ತಮ ಆಯ್ಕೆಯಾಗಿದೆ. ಈ ಬಣ್ಣವು ನಿಮ್ಮ ಪ್ರೀತಿಯ ಶುದ್ಧತೆ ಮತ್ತು ನಿಮ್ಮ ಜೀವನದ ಶಾಂತಿ ಮತ್ತು ನೆಮ್ಮದಿ, ಬದ್ಧತೆಯನ್ನು ಸಹ ಪ್ರತಿನಿಧಿಸುತ್ತದೆ.

ನೇರಳೆ – ಆಕರ್ಷಕ: ನೇರಳೆ ಬಣ್ಣವು ಐಷಾರಾಮಿ ಮತ್ತು ಆಕರ್ಷಣೆಯನ್ನು ಸಂಕೇತಿಸುತ್ತದೆ. ಈ ಬಣ್ಣವು ಇತ್ತೀಚಿನ ದಿನಗಳಲ್ಲಿ ತುಂಬಾ ಟ್ರೆಂಡಿಯಾಗಿದ್ದು, ತಮ್ಮ ಪ್ರೀತಿ ಅಮೂಲ್ಯ ಮತ್ತು ವಿಶೇಷ ಎಂದು ತಮ್ಮ ಸಂಗಾತಿಗೆ ತಿಳಿಸಲು ಬಯಸುವವರಿಗೆ ಈ ಬಣ್ಣದ ಬಟ್ಟೆ ಧರಿಸುವುದು ಸೂಕ್ತವಾಗಿದೆ.

ಇದನ್ನೂ ಓದಿ: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ?

ನೀಲಿ – ಶಾಂತಿ ಮತ್ತು ವಿಶ್ವಾಸ:ನೀಲಿ ಬಣ್ಣವು ಶಾಂತಿ, ವಿಶ್ವಾಸ ಮತ್ತು ಸ್ಥಿರತೆಯನ್ನು ಸಂಕೇತಿಸುತ್ತದೆ. ನಿಮ್ಮ ಸಂಗಾತಿಯನ್ನು ನೀವು ಸಂಪೂರ್ಣವಾಗಿ ನಂಬುತ್ತೀರಿ, ನಿಮ್ಮ ಸಂಬಂಧವು ಬಲವಾಗಿದೆ ಮತ್ತು ನಿಮ್ಮ ಸಂಬಂಧದಲ್ಲಿ ಸ್ಥಿರತೆಯನ್ನು ನಿರೀಕ್ಷಿಸುತ್ತೀರಿ ಎಂದು ಅವರಿಗೆ ತಿಳಿಸಲು ಬಯಸಿದರೆ, ನೀವು ನೀಲಿ ಬಣ್ಣದ ಬಟ್ಟೆಯನ್ನು ಧರಿಸಬಹುದು

ಹಳದಿ – ಸಂತೋಷ ಮತ್ತು ಸ್ನೇಹ: ಹಳದಿ ಬಣ್ಣವನ್ನು ಅದೃಷ್ಟದ ಬಣ್ಣವೆಂದು ಪರಿಗಣಿಸಲಾಗುತ್ತದೆ, ಇದು ಉತ್ಸಾಹ ಮತ್ತು ಸ್ನೇಹವನ್ನು ಸಂಕೇತಿಸುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಸದಾ  ಸಂತೋಷದಿಂದ ಇರಲು ಬಯಸಿದರೆ, ನೀವು ಹಳದಿ ಬಣ್ಣದ ಬಟ್ಟೆಯನ್ನು ಧರಿಸಬಹುದು. ಈ ಬಣ್ಣವು ನಿಮ್ಮ ಪ್ರೀತಿಯನ್ನು ಇನ್ನಷ್ಟು ರೋಮಾಂಚಕವಾಗಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!