AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hug Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಹಗ್‌ ಡೇ ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ ಗೊತ್ತೇ?

Valentine’s Week 2026: ವ್ಯಾಲೆಂಟೈನ್‌ ವೀಕ್‌ನ ಒಂದು ದಿನವನ್ನು ಹಗ್ ಡೇ ಆಚರಣೆಗೆ ಮೀಸಲಿಡಲಾಗಿದೆ. ಫೆಬ್ರವರಿ 12 ರಂದು ಆಚರಿಸಲಾಗುವ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಅಪ್ಪುಗೆಯು ಸಂಬಂಧಗಳನ್ನು ಗಾಢವಾಗಿಸುತ್ತದೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಎಂಬುದನ್ನು ನೆನಪಿಸುತ್ತದೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಈ ಹಗ್‌ ಡೇಯನ್ನು ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ, ಈ ದಿನದ ಹಿನ್ನೆಲೆಯೇನು ಎಂಬುದನ್ನು ತಿಳಿಯೋಣ ಬನ್ನಿ.

Hug Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಹಗ್‌ ಡೇ ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ ಗೊತ್ತೇ?
ಹಗ್‌ ಡೇ Image Credit source: Freepik
ಮಾಲಾಶ್ರೀ ಅಂಚನ್​
|

Updated on:Feb 11, 2026 | 4:18 PM

Share

ವ್ಯಾಲೆಂಟೈನ್‌ ವೀಕ್‌ನ ಪ್ರತಿ ದಿನವೂ ಪ್ರೇಮಿಗಳಿಗೆ ತುಂಬಾನೇ ವಿಶೇಷವಾಗಿದೆ. ಈ ಪ್ರಣಯ ವಾರದ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್‌ ಡೇಯನ್ನು (Hug Day) ಆಚರಿಸಲಾಗುತ್ತದೆ. ಹೆಸರೇ ಸೂಚಿಸುವಂತೆ, ಈ ದಿನವು ವಿಶೇಷವಾಗಿ ಸಿಹಿ ಅಪ್ಪುಗೆಗೆ ಮೀಸಲಿಡಲಾಗಿದೆ. ಇದು ಪ್ರೀತಿ, ವಾತ್ಸಲ್ಯ ಮತ್ತು ಭಾವನಾತ್ಮಕ ಸಂಪರ್ಕ, ಸಂಬಂಧದಲ್ಲಿ ನಂಬಿಕೆಯನ್ನು ಬಲಪಡಿಸುತ್ತದೆ ಮತ್ತು ಸಂಗಾತಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಪ್ರೀತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ ಒಂದು ಸುಂದರ ಸಂದರ್ಭವಾಗಿದ್ದು, ಈ ದಿನದ ಆಚರಣೆ ಪ್ರಾರಂಭವಾಗಿದ್ದು ಹೇಗೆ, ಇದರ ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

ಹಗ್‌ ಡೇಯನ್ನು ಏಕೆ ಆಚರಿಸಲಾಗುತ್ತದೆ?

ಫೆಬ್ರವರಿ 12 ರಂದು ಹಗ್‌ ಡೇಯನ್ನು ಆಚರಿಸಲಾಗುತ್ತದೆ ಮತ್ತು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಪ್ಪುಗೆಯು ಸಂಬಂಧಗಳನ್ನು ಗಾಢವಾಗಿಸುತ್ತದೆ ಮತ್ತು ಎಲ್ಲಾ ನೋವನ್ನು ಮರೆಸುತ್ತದೆ ಎಂಬುದನ್ನು ಹಾಗೂ ಸಂಬಂಧಗಳನ್ನು ಬಲಪಡಿಸುವಲ್ಲಿ ಮತ್ತು ಭಾವನೆಗಳನ್ನು ಬೆಳೆಸುವಲ್ಲಿ ದೈಹಿಕ ಸ್ಪರ್ಶದ ಮಹತ್ವವನ್ನು ಈ ದಿನ ನಮಗೆ ನೆನಪಿಸುತ್ತದೆ.  ಈ ದಿನದಂದು ಜನರು ತಮ್ಮ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ.

ಹಗ್‌ ಡೇ ಯಾವಾಗ ಪ್ರಾರಂಭವಾಯಿತು, ಅದರ ಇತಿಹಾಸವೇನು?

ಹಗ್‌ ಡೇಗೆ ಸಂಬಂಧಿಸಿದಂತೆ ಸ್ಪಷ್ಟ ಇತಿಹಾಸವಿಲ್ಲದಿದ್ದರೂ, 1980 ರ ದಶಕದಲ್ಲಿ ಅಮೆರಿಕದಲ್ಲಿ ಹಗ್ ಡೇ ಆಚರಣೆ ಹುಟ್ಟಿಕೊಂಡಿತು ಮತ್ತು  ಇದನ್ನು ಪ್ರೇಮಿಗಳ ವಾರದ ಭಾಗವಾಗಿ ಆಚರಿಸಲಾಯಿತು ಎಂದು ಹೇಳಲಾಗುತ್ತದೆ.  ಜನರು ಭಾವನಾತ್ಮಕವಾಗಿ ಪರಸ್ಪರ ಸಂಪರ್ಕ ಸಾಧಿಸಲು ಅವಕಾಶವನ್ನು ಒದಗಿಸುವ ಒಂದು ಉಪಕ್ರಮವಾಗಿ ಇದನ್ನು ನೋಡಲಾಯಿತು. ಕ್ರಮೇಣ, ಈ ದಿನವು ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸಿತು ಮತ್ತು ಈಗ ಪ್ರೀತಿ ಮತ್ತು ವಾತ್ಸಲ್ಯದ ಸಂಕೇತವಾಗಿದೆ.

ಇದನ್ನೂ ಓದಿ: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ

 ಹಗ್‌ ಡೇಯ ಮಹತ್ವವೇನು?

  • ಅಪ್ಪುಗೆಯ ದಿನವು ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ಮಹತ್ವವನ್ನು ಹೊಂದಿದೆ ಏಕೆಂದರೆ ಅದು ಪ್ರೀತಿ ಮತ್ತು ಭಾವನಾತ್ಮಕ ಸಂಪರ್ಕವನ್ನು ಉತ್ತೇಜಿಸುತ್ತದೆ.
  • ಹಗ್ ಡೇ ಕೇವಲ ಒಂದು ಸಣ್ಣ ಆಚರಣೆಯಲ್ಲ, ಅದು ನಂಬಿಕೆ ಮತ್ತು ಭದ್ರತೆಯ ಸಂಕೇತವೂ ಆಗಿದೆ.
  • ಅಪ್ಪುಗೆಯ ದಿನ ಸರಳವಾಗಿ ಕಾಣಿಸಬಹುದು, ಆದರೆ ಅದರ ಮಹತ್ವ ಅಪಾರವಾಗಿದೆ. ಇದು ಪ್ರೀತಿ ಮತ್ತು ಸಂತೋಷದಿಂದ ಹಿಡಿದು ಸಾಂತ್ವನದವರೆಗೆ ವಿವಿಧ ಭಾವನೆಗಳನ್ನು ವ್ಯಕ್ತಪಡಿಸಲಿರುವ ಸರಳ ಕ್ರಿಯೆಯಾಗಿದೆ.
  • ಈ ದಿನದಂದು, ಜನರು ತಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುತ್ತಾರೆ, ಅವರ ಸಂಬಂಧಗಳನ್ನು ಬಲಪಡಿಸುತ್ತಾರೆ
  • ಹಗ್‌ ಡೇ ಯಂದು ಪ್ರೇಮಿಗಳು ಪರಸ್ಪರ ಅಪ್ಪಿಕೊಳ್ಳುವ ಮೂಲಕ ತಮ್ಮ ಸಂಬಂಧಗಳನ್ನು ಬಲಪಡಿಸಲು ಶ್ರಮಿಸುತ್ತಾರೆ.
  • ಅಪ್ಪುಗೆ ಭಾವನಾತ್ಮಕ ಬಂಧವನ್ನು ಬಲಪಡಿಸುವುದು ಮಾತ್ರವಲ್ಲದೆ, ನಂಬಿಕೆಯನ್ನೂ ಬಲಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 11 February 26

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ