AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Vrata 2024 : ವರಮಹಾಲಕ್ಷ್ಮೀ ಹಬ್ಬಕ್ಕೆ ಮನೆಯ ಅಲಂಕಾರ ಹೇಗೆ ಮಾಡಬೇಕು? ಇಲ್ಲಿದೆ ಸಿಂಪಲ್ ಟಿಪ್ಸ್

ವರಮಹಾಲಕ್ಷ್ಮಿ ಹಬ್ಬವು ಶ್ರಾವಣ ಮಾಸದಲ್ಲಿ ಶುಕ್ಲ ಪಕ್ಷದ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ವರ್ಷ ವರಲಕ್ಷ್ಮಿ ಹಬ್ಬವು ಆಗಸ್ಟ್ 16 ರಂದು ಬಂದಿದ್ದು, ಹೆಂಗಳೆಯರು ಹಬ್ಬದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಹಬ್ಬದ ದಿನ ಮನೆಯ ಅಲಂಕಾರವು ಬಹಳ ಮುಖ್ಯವಾಗುತ್ತದೆ. ಮನೆಯನ್ನು ಸ್ವಚ್ಛಗೊಳಿಸಿ ಸುಂದರವಾಗಿ ಅಲಂಕಾರ ಮಾಡಲು ಇಲ್ಲಿದೆ ಕೆಲವು ಸಲಹೆಗಳು

Varamahalakshmi Vrata 2024 : ವರಮಹಾಲಕ್ಷ್ಮೀ ಹಬ್ಬಕ್ಕೆ ಮನೆಯ ಅಲಂಕಾರ ಹೇಗೆ ಮಾಡಬೇಕು? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 15, 2024 | 5:34 PM

Share

ಹೆಣ್ಣು ಮಕ್ಕಳ ನೆಚ್ಚಿನ ಹಬ್ಬ ವರಮಹಾಲಕ್ಷ್ಮಿ ಹಬ್ಬಕ್ಕೆ ಒಂದೇ ಒಂದು ದಿನವಷ್ಟೇ ಬಾಕಿಯಿದೆ. ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಪ್ರತಿವರ್ಷ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವ್ರತವನ್ನು ಸುಮಂಗಲಿಯರು ಬಹಳ ಶ್ರದ್ಧಾ ಭಕ್ತಿಯಿಂದ ಮಾಡುತ್ತಾರೆ. ಹೀಗಾಗಿ ಲಕ್ಷ್ಮೀ ದೇವಿಯನ್ನು ಮನೆಗೆ ಬರ ಮಾಡಿಕೊಳ್ಳಲು ಮನೆಯನ್ನು ಸ್ವಚ್ಛಗೊಳಿಸಿ ಸುಂದರವಾಗಿ ಅಲಂಕಾರ ಮಾಡಲಾಗುತ್ತದೆ. ಈ ಕೆಲವು ಸಲಹೆಗಳನ್ನು ಅನುಸರಿಸಿ ಅಲಂಕಾರ ಮಾಡಿದರೆ ಹಬ್ಬದ ರಂಗು ಇನ್ನಷ್ಟು ಹೆಚ್ಚಾಗುತ್ತದೆ.

  1. ಯಾವುದೇ ಹಬ್ಬವಿರಲಿ, ಮನೆಯ ಅಲಂಕಾರವು ಹಬ್ಬದ ಕಳೆಯನ್ನು ಹೆಚ್ಚಿಸುತ್ತದೆ. ಮನೆಯ ಪ್ರವೇಶದ್ವಾರಕ್ಕೆ ಹೂವು ಹಾಗೂ ತೋರಣಗಳಿಂದ ಅಲಂಕಾರ ಮಾಡುವುದು ಬಹಳ ಮುಖ್ಯ. ಇದು ಮನೆಯಲ್ಲಿ ಹಬ್ಬದ ಕಳೆಯನ್ನು ತಂದು ಕೊಡುತ್ತದೆ. ವರಮಹಾಲಕ್ಷ್ಮಿ ಹಬ್ಬದ ದಿನ ಮನೆಯ ಪ್ರವೇಶದ್ವಾರಕ್ಕೆ ಮಾವಿನ ತೋರಣವನ್ನು ಕಟ್ಟಿ, ಚೆಂಡು ಹೂವಿನ ಮಾಲೆಯನ್ನು ನೇತು ಹಾಕಿ ಸಿಂಪಲ್ ಆಗಿ ಹಬ್ಬದ ಲುಕ್ ನೀಡಬಹುದು.
  2. ಹೂವಿನ ಅಲಂಕಾರವು ಮನೆಯ ಅಂದವನ್ನು ಹೆಚ್ಚಿಸುತ್ತದೆ. ಮನೆಯ ಪ್ರವೇಶದ್ವಾರಕ್ಕೆ ಹಾಗೂ ದೇವರ ಕೋಣೆಯ ಪ್ರವೇಶದ್ವಾರಕ್ಕೆ ಹೂಮಾಲೆಯನ್ನು ಹಾಕಿ ಅಲಂಕರಿಸಬಹುದು. ಈಗಾಗಲೇ ಮಾರುಕಟ್ಟೆಯಲ್ಲಿ ವಿವಿಧ ಬಣ್ಣದ ಪ್ಲಾಸ್ಟಿಕ್ ಹೂವುಗಳು ಲಭ್ಯವಿದೆ. ಇದನ್ನು ಕೂಡ ಅಲಂಕಾರಕ್ಕಾಗಿ ಬಳಸಿಕೊಳ್ಳಬಹುದು.
  3. ಹಬ್ಬದ ರಂಗನ್ನು ಹೆಚ್ಚಿಸುವುದೇ ಮನೆ ಮುಂದೆ ಹಾಕುವ ರಂಗೋಲಿ..ಈ ವರಮಹಾಲಕ್ಷ್ಮೀ ಹಬ್ಬದ ದಿನ ಲಕ್ಷ್ಮೀ ದೇವಿಯನ್ನು ಮನೆಗೆ ಬರ ಮಾಡಿಕೊಳ್ಳಲು, ಮನೆಯ ಮುಂದೆಯ ಆಕರ್ಷಕವಾದ ರಂಗೋಲಿಯನ್ನು ಬಿಡಿಸಿ. ಮನೆಯ ಅಂದವನ್ನು ಹೆಚ್ಚಿಸುವುದರೊಂದಿಗೆ ಧನಾತ್ಮಕತೆಯನ್ನು ಹೆಚ್ಚಿಸುತ್ತದೆ.
  4. ವರಮಹಾಲಕ್ಷ್ಮಿ ಹಬ್ಬಕ್ಕೆ ದೇವರ ಕೋಣೆಯ ಅಲಂಕಾರದ ಗಮನ ಕೊಡುವುದು ಮುಖ್ಯ. ದೇವರ ಕೋಣೆಯ ಪ್ರವೇಶದ್ವಾರಕ್ಕೆ ತಳಿರುತೋರಣ ಹಾಗೂ ಹೂಮಾಲೆಯನ್ನು ಕಟ್ಟಿ ಅಂದವನ್ನು ಹೆಚ್ಚಿಸಬಹುದು. ಲಕ್ಷ್ಮಿಯ ವಿಗ್ರಹವನ್ನು ಇಡುವಲ್ಲಿ ಕಂಚಿನ ದೀಪಗಳು, ಸಾಂಪ್ರದಾಯಿಕ ವಿನ್ಯಾಸಗಳಿರುವ ಆಂಟಿಕ್ ವಸ್ತುಗಳನ್ನು ಬಳಸಿ ದೇವರ ಕೋಣೆಯನ್ನು ಆಕರ್ಷಕವಾಗಿ ಕಾಣುವಂತೆ ಮಾಡಿ.
  5. ವರಮಹಾಲಕ್ಷ್ಮೀ ಹಬ್ಬದ ದಿನದಂದು ಮಹಿಳೆಯರು ಸಂಬಂಧಿಕರು ಮತ್ತು ಅಕ್ಕಪಕ್ಕದ ಮನೆಯವರನ್ನು ಮನೆಗೆ ಬಂದರೆ ಲಿವಿಂಗ್ ರೂಮಲ್ಲಿ ಕುಳಿತುಕೊಳ್ಳುತ್ತಾರೆ. ಹೀಗಾಗಿ ಹಬ್ಬದ ವಾತಾವರಣಕ್ಕೆ ಹೊಂದಿಕೊಳ್ಳುವ ಗಾಢ ಬಣ್ಣದಿಂದ ಕೂಡಿದ ಕಿಟಕಿಗಳಿಗೆ ಕರ್ಟನ್ ಗಳು, ಸೋಫಾ ಕವರ್​​ಗಳು, ಕುಶನ್ ಕವರ್ ಗಳು ಟೇಬಲ್ ಮ್ಯಾಟ್ ಹಾಕಿದರೆ ಲಿವಿಂಗ್ ರೂಮ್ ಅಂದವು ಹೆಚ್ಚಾಗುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 15 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ