AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin-D Deficiency: ವಿಟಮಿನ್-ಡಿ ಕೊರತೆಯು ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗಬಹುದು

ದೇಹವನ್ನು ಆರೋಗ್ಯಕರವಾಗಿಡಲು ನಮಗೆ  ಅಗತ್ಯ ಪೋಷಕಾಂಶಗಳು ಬೇಕಾಗುತ್ತವೆ. ಅದೇ ರೀತಿ  ನಮ್ಮ ದೇಹಕ್ಕೆ  ಅಗತ್ಯ ಪ್ರಮಾಣದ ಜೀವಸತ್ವಗಳ ಅವಶ್ಯಕತೆಯೂ ಇದೆ. ಏಕೆಂದರೆ ಮುಖ್ಯವಾಗಿ ವಿಟಮಿನ್ ಡಿ ಜೀವಸತ್ವದ ಕೊರತೆಯಿಂದಾಗಿ ಹೃದ್ರೋಗ ಮತ್ತು ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ಹೃದಯ, ಮೂಳೆಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಟಮಿನ್ ಡಿ ಜೀವಸತ್ವವು ಅಗತ್ಯವಾಗಿ ಬೇಕಾಗುತ್ತದೆ.

Vitamin-D Deficiency: ವಿಟಮಿನ್-ಡಿ ಕೊರತೆಯು ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗಬಹುದು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 17, 2023 | 4:50 PM

Share

ದೇಹವನ್ನು ಆರೋಗ್ಯಕರವಾಗಿಡಲು ನಮಗೆ ನಿಯಮಿತವಾಗಿ ಹಲವಾರು ರೀತಿಯ ಪೋಷಕಾಂಶಗಳು ಬೇಕಾಗುತ್ತವೆ.  ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ದೇಹಕ್ಕೆ ಬೇಕಾಗುವಂತಹ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು. ಪೋಷಕಾಂಶಗಳ ಜೊತೆಗೆ ನಮ್ಮ ದೇಹಕ್ಕೆ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳನ್ನು  ಒದಗಿಸುವ ಆಹಾರಗಳನ್ನು ಸೇವನೆ ಮಾಡುವುದು ಕೂಡಾ ಬಹಳ ಮುಖ್ಯ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಡಿ ಕೂಡಾ ಒಂದು. ವಿಟಮಿನ್ ಡಿ ನಮಗೆ ಬಹಳ ಮುಖ್ಯವಾಗಿದೆ.  ಏಕೆಂದರೆ ಇದು ಮೂಳೆಗಳನ್ನು ಆರೋಗ್ಯಕರವಾಗಿಡಲು ಮತ್ತು ಬಲವಾದ ರೋಗನಿರೋಧಕಶಕ್ತಿಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಆದರೆ ಇದರ ಕೊರತೆಯು  ಆನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತವೆ.  ಹೌದು ವಿಟಮಿನ್ ಡಿ ಕೊರತೆಯು ಹೃದ್ರೋಗ ಮತ್ತು ಕ್ಯಾನ್ಸರ್ನಂಹತ ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ವಿಟಮಿನ್ ಡಿ ನಮಗೆ ಏಕೆ ಮುಖ್ಯವಾಗಿದೆ ಮತ್ತು ಅದನ್ನು ಪೂರೈಸಲು ಏನು ಮಾಡಬಹುದು ಎಂಬುದನ್ನು ತಿಳಿಯೋಣ.

ವಿಟಮಿನ್ ಡಿ ಕೊರತೆಯಿಂದ ಉಂಟಾಗುವ ಕಾಯಿಲೆಗಳು:

ವಿಟಮಿನ್ ಡಿ ಜೀವಸತ್ವವು ಮೂಳೆಗಳ ಆರೋಗ್ಯಕ್ಕೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಗೆ ಬಹಳ ಅವಶ್ಯಕವಾಗಿದೆ. ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿರುವ ಜನರ ಮೂಳೆ ಸಾಂದ್ರತೆಯು ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ, ಇದು ಆಸ್ಟಿಯೊಪೊರೋಸಿಸ್ ಮತ್ತು ಮೂಳೆಮುರಿತದ ಅಪಾಯವನ್ನು ಹೆಚ್ಚಿಸುತ್ತದೆ. ಮಕ್ಕಳಲ್ಲಿ ವಿಟಮಿನ್ ಡಿ ಕೊರತೆಯು ರಿಕೆಟ್ಸ್ ಕಾಯಿಲೆಗಳಿಗೆ ಕಾರಣವಾಗಬಹುದು.  ರಿಕೆಟ್ಸ್ ಅಪರೂಪದ ಕಾಯಿಲೆಯಾಗಿದ್ದು, ಅದು ಮೂಳೆ ರಚನೆ ಮತ್ತು ಅಂಗರಚನೆಯ ಮೇಲೆ ಪರಿಣಾಮ ಬೀರುತ್ತದೆ.

ಹೃದಯರಕ್ತನಾಳಗಳ ಕಾಯಿಲೆಗಳು ಹೆಚ್ಚಾಗಬಹುದು:

ವಿಟಮಿನ್ ಡಿ ಕೊರತೆಯು ಹೃದಯದ ಆರೋಗ್ಯಕ್ಕೂ ಅಪಾಯಕಾರಿ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಗಳಿಂದ  ಬಳಲುತ್ತಿರುವ  ಹೆಚ್ಚಿನ ಜನರಲ್ಲಿ ವಿಟಮಿನ್ ಡಿ ಕೊರತೆ ಕಂಡುಬರುತ್ತದೆ ಎಂದು ಸಂಶೋಧನೆಗಳು ಕಂಡುಕೊಂಡಿವೆ. ಆಹಾರದಲ್ಲಿ ವಿಟಮಿನ್ ಡಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ, ನೀವು ಹೃದಯದ ಆರೋಗ್ಯವನ್ನು  ಸುಧಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಈ ಆಹಾರಗಳನ್ನು ಎಂದಿಗೂ ನಿಮ್ಮ ಮಕ್ಕಳಿಗೆ ನೀಡಬೇಡಿ

ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು:

ವಿಟಮಿನ್ ಡಿ ಕೊರತೆಯು ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು  ಸಹ ಹೆಚ್ಚಿಸಬಹುದು ಎಂದು ಕೆಲವು ಸಂಶೋಧನೆಗಳು ಕಂಡುಕೊಂಡಿವೆ. ವಿಟಮಿನ್ ಡಿ ಕೊರತೆಯು ವಿಶೇಷವಾಗಿ ಸ್ತನ ಕ್ಯಾನ್ಸರ್, ರಕ್ತನಾಳದ ಕ್ಯಾನ್ಸರ್, ಅನ್ನನಾಳ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಕಂಡುಬಂದಿದೆ. ಅಗತ್ಯ ಪ್ರಮಾಣ ವಿಟಮಿನ್ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಇಂತಹ ಗಂಭೀರ ಕಾಯಿಲೆಗಳು ಬಾರದಂತೆ ನೋಡಿಕೊಳ್ಳಲು ನಮಗೆ ವಿಟಮಿನ್ ಡಿ ಜೀವಸತ್ವವು ಅಗತ್ಯ ಪ್ರಮಾಣದಲ್ಲಿ ಬೇಕಾಗುತ್ತದೆ.

ನಿಮಗೂ ವಿಟಮಿನ್ ಡಿ ಕೊರತೆ ಇದೆಯೇ ಎಂದು ತಿಳಿಯುವುದು ಹೇಗೆ?

ಮೂಳೆಗಳಲ್ಲಿ ನೋವು ಕಾಣಿಸಿಕೊಳ್ಳುವಂತಹದ್ದು, ಆಗಾಗ್ಗೆ ಆಯಾಸ, ಸ್ನಾಯು ಸೆಳೆತ, ದೌರ್ಬಲ್ಯ, ಮೂಳೆ ಮುರಿತ ಮುಂತಾದ ಕೆಲವು ಕಾಯಿಲೆಗಳ ಚಿಹ್ನೆಗಳ ವಿಟಮಿನ್ ಡಿ ಕೊರತೆಯ ಲಕ್ಷಣಗಳಾಗಿವೆ.

ಸಾಕಷ್ಟು ವಿಟಮಿನ್ ಡಿ ಜೀವಸತ್ವವನ್ನು ಹೇಗೆ ಪಡೆಯುವುದು:

ಬೆಳಗ್ಗೆ ಹೊತ್ತು ದೇಹವು ಸೂರ್ಯ ಬೆಳಕಿಗೆ ಒಡ್ಡಿಕೊಂಡಾಗ ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್ ಡಿ ಜೀವಸತ್ವವು  ಲಭಿಸುತ್ತದೆ. ಅಲ್ಲದೆ ಮೀನು,  ಮೊಟ್ಟೆಯ ಹಳದಿ ಭಾಗ, ಬೆಣ್ಣೆ, ಮೊಸರು, ಹಾಲು, ಚೀಸ್, ಕಿತ್ತಳೆ ರಸ, ಅಣಬೆ ಇತ್ಯಾದಿ  ಆಹಾರಗಳನ್ನು ಸೇವಿಸುವ ಮೂಲಕ ಅಗತ್ಯ ಪ್ರಮಾಣದ ವಿಟಮಿನ್ ಜೀವಸತ್ವವನ್ನು ಪಡೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:47 pm, Tue, 17 October 23

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​