ಜಿಮ್​​ಗೆ ಹೋಗದೆಯೇ ಫಿಟ್ ಆಗಿರಲು ಬಯಸುವಿರಾ? ಹಾಗಾದರೆ ಮನೆಯಲ್ಲಿ ಪ್ರತಿನಿತ್ಯ ಈ ಚಟುವಟಿಕೆ ಮಾಡಿ

ದೈಹಿಕವಾಗಿ ಸಕ್ರಿಯವಾಗಿರಬೇಕೆಂದರೆ, ಪ್ರತಿದಿನ ಕೆಲವು ವ್ಯಾಯಾಮ ಅಥವಾ ವ್ಯಾಯಾಮ ಸಂಬಂಧಿ ಚಟುವಟಿಕೆಗಳನ್ನು  ಮಾಡಬೇಕು. ಆದರೆ ಕೆಲಸದ ಕಾರಣದಿಂದ ಹೆಚ್ಚಿನ ಜನರಿಗೆ ಜಿಮ್ ಗೆ ಹೋಗಲು ಸಯಯವಿರುವುದಿಲ್ಲ. ಹೀಗಿರುವಾಗ ಜಿಮ್​​​ಗೆ ಹೋಗದೆಯೇ, ಮನೆಯಲ್ಲಿ ಕೆಲವು ಚಟುವಟಿಕೆಗಳನ್ನು ಮಾಡುವ ಮೂಲಕ ನೀವು ನಿಮ್ಮನ್ನು ಫಿಟ್ ಆಗಿ ಮತ್ತು ದೈಹಿಕವಾಗಿ ಸಕ್ರಿಯವಾಗಿರಿಸಿಕೊಳ್ಳಬಹುದು.

ಜಿಮ್​​ಗೆ ಹೋಗದೆಯೇ ಫಿಟ್ ಆಗಿರಲು ಬಯಸುವಿರಾ? ಹಾಗಾದರೆ ಮನೆಯಲ್ಲಿ ಪ್ರತಿನಿತ್ಯ ಈ ಚಟುವಟಿಕೆ ಮಾಡಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 09, 2023 | 5:37 PM

ಕಳಪೆಮಟ್ಟದ ಜೀವನಶೈಲಿ ಮತ್ತು ಆಹಾರ ಕ್ರಮದ ಕಾರಣ ಇಂದಿನ ದಿನಗಳಲ್ಲಿ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಇದೇ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಜನರು ಅಧಿಕ ರಕ್ತದೊತ್ತಡ, ಸ್ಥೂಲಕಾಯತೆ, ಮಧುಮೇಹದಂತಹ ಅನೇಕ ಗಂಭೀರ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಹೀಗಿರುವಾಗ ಫಿಟ್ ಆಗಿರಲು ಆಹಾರ ಕ್ರಮ ಮತ್ತು ವ್ಯಾಯಾಮದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ನಿಯಮಿತ ವ್ಯಾಯಾಮ ಮಾಡುವುದರಿಂದ ಖಿನ್ನತೆ, ಅಲ್ಝೈಮರ್ ಸೇರಿದಂತೆ ಹಲವು ಕಾಯಿಲೆಗಳನ್ನು ತಡೆಯಬಹುದು. ಬಿಡುವಿಲ್ಲದ ವೇಳಾಪಟ್ಟಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಂಡರೆ ನೀವು ಫಿಟ್ ಆಗಿ ಉಳಿಯಬುದು. ಯಾವಾಗಲೂ ಫಿಟ್ ಆಗಿರಲು ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡನ್ನೂ ಕಾಪಾಡಿಕೊಳ್ಳು ಅವಶ್ಯಕತೆಯಿದೆ. ನಿಮ್ಮನ್ನು ದೈಹಿಕವಾಗಿ ಸಕ್ರಿಯವಾಗಿರಿಸಲು ಪ್ರತಿದಿನ ಕೆಲವು ವ್ಯಾಯಾಮ ಅಥವಾ ಚಟುವಟಿಕೆಗಳನ್ನು ಮಾಡಬೇಕು. ಜಿಮ್ ಗೆ ಹೋಗದೆಯೇ ನೀವು ಮನೆಯಲ್ಲಿಯೇ ಕೆಲವು ಚಟುವಟಿಕೆಗಳನ್ನು ಅಭ್ಯಾಸ ಮಾಡುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಜಿಮ್​ಗೆ ಹೋಗದೆಯೇ ಫಿಟ್ ಆಗಿರುವುದು ಹೇಗೆ?

ವಾಕಿಂಗ್: ನೀವು ಫಿಟ್ ಆಗಿರಲು ಬಯಸಿದರೆ ನಿಯಮಿತವಾಗಿ ಬೆಳಗ್ಗೆ ಅಥವಾ ಸಂಜೆ ಹೊತ್ತಿನಲ್ಲಿ ಹೋಗಲು ಪ್ರಾರಂಭಿಸಿ.  ಪ್ರತಿನಿತ್ಯ ವಾಕಿಂಗ್ ಮಾಡುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ ಮತ್ತು ಇದರಿಂದ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು.  ನಡಿಗೆಯಿಂದ ದೇಹದಲ್ಲಿ ರಕ್ತಪರಿಚಲನೆ ಸರಿಯಾಗಿ ಸಾಗುತ್ತದೆ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನೂ ಕಡಿಮೆ ಮಾಡುತ್ತದೆ. ಹಾಗೂ ಹೃದಯದ ಆರೋಗ್ಯನ್ನೂ ಕಾಪಾಡಿಕೊಳ್ಳಬಹುದು. ಯಾರಾದರೂ  ತೂಕವನ್ನು ಹೆಚ್ಚಿಸುವ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಅವನು ಪ್ರತಿದಿನ ನಡೆಯಲು ತೂಕ ಹೆಚ್ಚಾಗಿದೆ ಎಂಬ ಚಿಂತೆ ನಿಮಗಿದ್ದರೆ, ಪ್ರತಿನಿತ್ಯ ವಾಕಿಂಗ್ ಹೋಗುವ ಮೂಲಕ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಸ್ಕಿಪ್ಪಿಂಗ್:  ಸ್ಕಿಪ್ಪಿಂಗ್​ನ್ನು ಉತ್ತಮ ವ್ಯಾಯಾಮವೆಂದು ಪರಿಗಣಿಸಲಾಗಿದೆ.  ಸ್ಕಿಪ್ಪಿಂಗ್   ತೂಕವನ್ನು ಕಡಿಮೆ ಮಾಡಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.  ನೀವು ಫಿಟ್ ಆಗಿರಬೇಕಾದರೆ ತೂಕ ಇಳಿಸಿಕೊಳ್ಳಬೇಕು. ಅಂತಹ ಪರಿಸ್ಥಿತಿಯಲ್ಲಿ ನೀವು ಮನೆಯಲ್ಲಿ ಕನಿಷ್ಟ 10 ರಿಂದ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್  ಮಾಡಿ. ಇದು ರಕ್ತ ಪರಿಚಲನೆಯನ್ನು ಸುಧಾರಿಸುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತದೆ. ಅಲ್ಲದೆ ಈ ಅಭ್ಯಾಸವನ್ನು ಮಾಡುವುದರಿಂದ ನೀವು ದಿನವಿಡೀ ಕ್ರಿಯಾಶೀಲರಾಗಿರುತ್ತೀರಿ.
ಪ್ರತಿದಿನ ಯೋಗ ಮಾಡಿ: ಹೆಚ್ಚುತ್ತಿರುವ ತೂಕ ಮತ್ತು ಕಳಪೆ ಮಟ್ಟದ ಜೀವನಶೈಲಿಯ  ಬಗ್ಗೆ ನೀವು ಯೋಚನೆ ಮಾಡುತ್ತಿದ್ದರೆ, ಪ್ರತಿದಿನ  ಯೋಗವನ್ನು ಮಾಡಲು ಪ್ರಾರಂಭಿಸಿ. ಇದು ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ಒತ್ತಡದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತದೆ. ಅಲ್ಲದೆ ಯೋಗವು ದೇಹ ರಚನೆ ಮತ್ತು ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.
ಆಹಾರ ಮತ್ತು ವ್ಯಾಯಾಮದತ್ತ ಗಮನ ಹರಿಸಿ: ಫಿಟ್ ಮತ್ತು ಆರೋಗ್ಯಕರವಾಗಿರಲು ಆರೋಗ್ಯಕರ ಆಹಾರ ಮತ್ತು ವ್ಯಾಯಾಮದ ಮೇಲೆ ಸಂಪೂರ್ಣ ಗಮನವನ್ನು ನೀಡಬೇಕು. ಆಹಾರವು ಸರಿಯಾಗಿದ್ದರೆ ಅದು ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯಾವಾಗಲೂ ಆರೋಗ್ಯಕರ ಆಹಾರವನ್ನು ಸೇವನೆ ಮಾಡಬೇಕು. ಇದರೊಂದಿಗೆ ಪ್ರತಿದಿನ ವ್ಯಾಯಾಮವನ್ನು ಮಾಡಬೇಕು. ಇದರಿಂದ ಒತ್ತಡ ಮತ್ತು ಖಿನ್ನತೆಯಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ