AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Changes: ಹಠಾತ್ ಹವಾಮಾನ ಬದಲಾವಣೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?

ವಾತಾವರಣದಲ್ಲಿ ತಾಪಮಾನ ಮತ್ತು ಗಾಳಿ ಹೆಚ್ಚಾದಾಗ ಹಠಾತ್ ಬದಲಾವಣೆಗಳು ಸಂಭವಿಸುತ್ತವೆ. ಹವಾಮಾನದಲ್ಲಿ ಆಗುವ  ಬದಲಾವಣೆಗಳು ಅನೇಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತವೆ.

Weather Changes: ಹಠಾತ್ ಹವಾಮಾನ ಬದಲಾವಣೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 19, 2022 | 8:56 PM

Share

ವಾತಾವರಣದಲ್ಲಿ ತಾಪಮಾನ ಮತ್ತು ಗಾಳಿ ಹೆಚ್ಚಾದಾಗ ಹಠಾತ್ (Weather Changes) ಬದಲಾವಣೆಗಳು ಸಂಭವಿಸುತ್ತವೆ. ಹವಾಮಾನದಲ್ಲಿ ಆಗುವ  ಬದಲಾವಣೆಗಳು ಅನೇಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತವೆ. ಹವಾಮಾನ ಬದಲಾದಾಗ ಅನೇಕ ಜನರು ಜ್ವರ, ಶೀತ ಸೋಂಕಿಗೆ ಒಳಗಾಗುತ್ತಾರೆ. ಹಾಗಾಗಿ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಈ ಸಮಯದಲ್ಲಿ ಬರುವ ಜ್ವರ ತೀವ್ರ ವೈರಲ್ ಜ್ವರವೇ ಆಗಬೇಕೆಂದಿಲ್ಲ. ನೆಗಡಿ, ಶೀತ, ಜ್ವರ, ಗಂಟಲು ನೋವು ಸಹ ಕಾಣಿಸಿಕೊಳ್ಳಬಹುದು. ತಣ್ಣನೆಯ ಗಾಳಿಯು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ. ಇದರಿಂದ ಶೀತ ಮತ್ತು ಜ್ವರದ ಅಪಾಯವನ್ನು ಹೆಚ್ಚಿಸುತ್ತದೆ. ಹವಾಮಾನ ಅಥವಾ ಪರಿಸರ ಬದಲಾವಣೆ ಸಮಯದಲ್ಲಿ ನೀವು ಅನಾರೋಗ್ಯಕ್ಕೆ ಒಳಗಾಗದಂತೆ ನಿಮ್ಮನ್ನು ನೀವು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ವಾತಾವರಣ ಬದಲಾವಣೆಯಾದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಹೇಗೆ?

ಸ್ವಚ್ಛತೆ ರೂಢಿಸಿಕೊಳ್ಳಿ:

ಇದೊಂದು ಸರಳ ಅಭ್ಯಾಸ. ರೋಗಾಣುಗಳು ಕೈಗಳ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ಕೈಗಳು ರೋಗದ ಮೂಲವಾಗಿದೆ. ಆಗಾಗ್ಗೆ ಕೈ ತೊಳೆಯದೆ ಬಾಯಿ, ಕಣ್ಣು ಅಥವಾ ಮೂಗನ್ನು ಸ್ಪರ್ಶಿಸುವ ಮೂಲಕ ರೋಗಕಾರಕಗಳು ದೇಹವನ್ನು ಪ್ರವೇಶಿಸುತ್ತವೆ. ಸೂಕ್ಷ್ಮಜೀವಿಗಳು ನಿಮ್ಮ ದೇಹವನ್ನು ಪ್ರವೇಶಿಸಬಹುದು ಮತ್ತು ಸೋಂಕನ್ನು ಉಂಟುಮಾಡಬಹುದು. ಆದ್ದರಿಂದ, ನಿಮ್ಮ ಕೈಗಳನ್ನು ತುಂಬಾ ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಮತ್ತು ನಿಮ್ಮನ್ನು ನೀವು ಸುರಕ್ಷಿತವಾಗಿರಿಸಿಕೊಳ್ಳಬಹುದು. ನಿಯಮಿತವಾಗಿ ಕೈ ತೊಳೆಯುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಕೆ ನಿಮ್ಮ ಕೈಗಳನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.

ಬಿಸಿ ನೀರು:

ಸ್ವಲ್ಪ ಬೆಚ್ಚಗಿನ ನೀರನ್ನು ಬಾಯಿಯಲ್ಲಿ ಗಾರ್ಗ್ಲ್ ಮಾಡುವುದರಿಂದ ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು. ಇನ್ಫ್ಲುಯೆನ್ಸ ಬಹಳ ಬೇಗನೆ ಹರಡುತ್ತದೆ. ಹಾಗಾಗಿ ನೀವು ಸ್ವಲ್ಪ ಬೆಚ್ಚಗಿನ ನೀರಿನಿಂದ ಗಾರ್ಗ್ಲಿಂಗ್ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೂಕ್ಷ್ಮಜೀವಿಗಳು ಮತ್ತು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ತಣ್ಣೀರಿನ ಬದಲು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಸೋಂಕುಗಳಿಂದ ದೂರವಿಡಬಹುದು. ಏಕೆಂದರೆ ಬಿಸಿನೀರು ನಿಮ್ಮ ದೇಹವನ್ನು ಪ್ರವೇಶಿಸುವ ರೋಗಾಣುಗಳನ್ನು ಕೊಲ್ಲುತ್ತದೆ. ಹಾಗಾಗಿ ಬಿಸಿ ನೀರು ದೇಹಕ್ಕೆ ಉತ್ತಮ.

ನಿಯಮಿತವಾಗಿ ವ್ಯಾಯಾಮ ಮಾಡಿ:

ವ್ಯಾಯಾಮವು ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ವ್ಯಾಯಾಮವು ನಿಮ್ಮ ದೇಹವನ್ನು ಶೀತ, ಜ್ವರ ಅಥವಾ ವೈರಲ್ ಜ್ವರಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ನಿಯಮಿತವಾಗಿ ವ್ಯಾಯಾಮ ಮಾಡುವ ಜನರು (ವಾರಕ್ಕೆ 3-5 ದಿನಗಳು 45 ನಿಮಿಷಗಳ ಕಾಲ) ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಅಧ್ಯಯನಗಳು ಹೇಳುತ್ತವೆ.

ನಿದ್ದೆ:

ವಾತಾವರಣ ಅಥವಾ ಪರಿಸರ ಬದಲಾವಣೆಯಿಂದ ನಿದ್ರಾಹೀನತೆಗೆ ಕಾರಣವಾಗಬಹುದು. ನಿದ್ರೆಯ ಕೊರತೆಯು ದೇಹದಲ್ಲಿ ಆಯಾಸವನ್ನು ಉಂಟುಮಾಡುತ್ತದೆ. ಸರಿಯಾಗಿ ನಿದ್ದೆ ಮಾಡದಿದ್ದರೆ ನಾನಾ ರೋಗಗಳು ಬರಬಹುದು. ನಿದ್ರೆಯ ಕೊರತೆಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಸಾಕಷ್ಟು ನಿದ್ದೆ ಮಾಡುವುದರಿಂದ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆಯಾಗುತ್ತದೆ. ಕಡಿಮೆ ನಿದ್ರೆ ಮಾಡುವವರಿಗೆ ಶೀತ ಮತ್ತು ಜ್ವರ ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ನೀವು ದಿನಕ್ಕೆ ಕನಿಷ್ಠ ಏಳು ಗಂಟೆಗಳ ಕಾಲ ನಿದ್ದೆ ಮಾಡಬೇಕು.

ಮತ್ತಷ್ಟು ಜೀವನಶೈಲಿ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Wed, 19 October 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ