AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ 5 ನಿಮಿಷ ಈ ಆಸನ ಮಾಡಿ; ಹೊಟ್ಟೆಯ ಬೊಜ್ಜು ಕರಗಿಸಿ

ಪ್ರತಿನಿತ್ಯ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರಿಗೆ ಭುಜಂಗಾಸನ ತುಂಬಾ ಉಪಯುಕ್ತ. ಇದು ಬೆನ್ನುನೋವಿನಿಂದಲೂ ಪರಿಹಾರ ನೀಡುತ್ತದೆ.ಯಾವುದೇ ವಯಸ್ಸಿನವರು ಈ ಆಸನವನ್ನು ಸುಲಭವಾಗಿ ಮಾಡಬಹುದು. ಇದರ ಇತರ ಪ್ರಯೋಜನಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಪ್ರತಿದಿನ 5 ನಿಮಿಷ ಈ ಆಸನ ಮಾಡಿ; ಹೊಟ್ಟೆಯ ಬೊಜ್ಜು ಕರಗಿಸಿ
Bhujangasana
ಅಕ್ಷತಾ ವರ್ಕಾಡಿ
|

Updated on:Feb 09, 2024 | 6:37 PM

Share

ಯೋಗದಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅದಲ್ಲದೆ ಯೋಗದಿಂದ ಸೌಂದರ್ಯವನ್ನೂ ಹೆಚ್ಚಿಸಬಹುದು. ಯೋಗದಲ್ಲಿ ನೂರಾರು ವಿಧದ ಆಸನಗಳಿವೆ. ನೀವು ಯೋಗದಲ್ಲಿ ಕೆಲವು ರೀತಿಯ ಆಸನಗಳನ್ನು ನಿಯಮಿತವಾಗಿ ಅಭ್ಯಾಸ ಮಾಡಿದರೆ, ಸಾಕಷ್ಟು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಪ್ರತಿದಿನ ಕಾಲು ಗಂಟೆ ಭುಜಂಗಾಸನ ಮಾಡಿದರೆ ಕೆಲವೇ ದಿನಗಳಲ್ಲಿ ಹೊಟ್ಟೆ ಚಪ್ಪಟೆಯಾಗುತ್ತದೆ. ‘ಯಾವುದೇ ವಯಸ್ಸಿನವರು ಈ ಆಸನವನ್ನು ಸುಲಭವಾಗಿ ಮಾಡಬಹುದು. ಇದರ ಇತರ ಪ್ರಯೋಜನಗಳೇನು ಎಂಬುದನ್ನು ಈಗ ನೋಡೋಣ.

ಭುಜಂಗಾಸನ ಮಾಡುವುದು ಹೇಗೆ?

ಮೊದಲು ಶಾಂತವಾಗಿ ಕುಳಿತುಕೊಳ್ಳಿ. ಅದರ ನಂತರ ನೆಲಕ್ಕೆ ಮುಖ ಮಾಡಿ ಮಲಗಿ. ಈಗ ಎದೆಯ ಭಾಗವನ್ನು ಕೈಗಳ ಮೇಲೆ ಇಟ್ಟುಕೊಂಡು ನಿಧಾನವಾಗಿ ಮೇಲಕ್ಕೆತ್ತಿ. ಅದರ ನಂತರ, ತಲೆ ಎತ್ತಿ ನೋಡಿ. ಇದು ಐದು ನಿಮಿಷ ಇರಬೇಕು. ಅದರ ನಂತರ ಸಾಮಾನ್ಯ ಸ್ಥಿತಿಗೆ ಬನ್ನಿ. ನಿಮ್ಮ ಭಂಗಿಯು ಮೇಲಿನ ಚಿತ್ರದಲ್ಲಿ ನೋಡಿದಂತೆ ಇರಬೇಕು.

ಇದನ್ನೂ ಓದಿ: ವಾಕಿಂಗ್​ನಿಂದ ಆಗುವ ಪ್ರಯೋಜನೆಗಳೇನು?; ನಡಿಗೆಯನ್ನು ಹೆಚ್ಚಿಸುವುದು ಹೇಗೆ?

ಭುಜಂಗ ಆಸನದ ಪ್ರಯೋಜನಗಳು:

  • ಈ ಆಸನ ಮಾಡುವುದರಿಂದ ಭುಜ ಮತ್ತು ಕತ್ತಿನ ಭಾಗಗಳು ವಿಶ್ರಾಂತಿ ಪಡೆಯುತ್ತವೆ. ಯಾವುದೇ ನೋವು ಇದ್ದರೆ, ನೀವು ಅದರಿಂದ ಪರಿಹಾರವನ್ನು ಪಡೆಯುತ್ತೀರಿ.
  • ಪ್ರತಿನಿತ್ಯ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರಿಗೆ ಈ ಆಸನ ತುಂಬಾ ಉಪಯುಕ್ತ. ಇದು ಬೆನ್ನುನೋವಿನಿಂದಲೂ ಪರಿಹಾರ ನೀಡುತ್ತದೆ.
  • ಈ ಆಸನ ಮಾಡುವುದರಿಂದ ಎದೆ ಮತ್ತು ಹೊಟ್ಟೆಯ ಸ್ನಾಯುಗಳು ಬಲಗೊಳ್ಳುತ್ತವೆ. ಇದು ಕಿಬ್ಬೊಟ್ಟೆಯ ಸ್ನಾಯುಗಳ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಹೊಟ್ಟೆಯ ಬಳಿ ಇರುವ ಕೊಬ್ಬು ಕರಗುತ್ತದೆ. ಈ ಆಸನವನ್ನು ಒಂದು ತಿಂಗಳು ಮಾಡಿದರೆ ಹೊಟ್ಟೆ ತುಂಬಾ ಕುಗ್ಗುತ್ತದೆ.
  • ಆದರೆ, ಉಸಿರಾಟದ ತೊಂದರೆ ಇರುವವರು ಮತ್ತು ಕೈಯಲ್ಲಿ ತೀವ್ರ ನೋವು ಇರುವವರು ಈ ಆಸನವನ್ನು ಮಾಡಬಾರದು. ಈ ಆಸನವನ್ನು ಬೇರೆ ಯಾರು ಬೇಕಾದರೂ ಮಾಡಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 9 February 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್