Weight Loss: ತೂಕ ಇಳಿಕೆಗೆ ಈ ಸಿಂಪಲ್​​ ಟಿಪ್ಸ್​​ ಅನುಸರಿಸಿ; ಒಂದೇ ವಾರದಲ್ಲಿ ಬದಲಾವಣೆ ಕಂಡುಕೊಳ್ಳುವಿರಿ

ನೀವು ಸಹ ತೂಕ ಇಳಿಕೆಗೆ ಪ್ರಯತ್ನಿಸುತ್ತಿದ್ದರೆ ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ. ನೀವು ವೇಗವಾಗಿ ಮತ್ತು ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಬಯಸಿದರೆ, ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಆಹಾರ ಪದಾರ್ಥಗಳು ಮತ್ತು ಸರಿಯಾದ ಸಮಯದಲ್ಲಿ ತಿನ್ನುವುದು ಮುಖ್ಯ.

Weight Loss: ತೂಕ ಇಳಿಕೆಗೆ ಈ ಸಿಂಪಲ್​​ ಟಿಪ್ಸ್​​ ಅನುಸರಿಸಿ; ಒಂದೇ ವಾರದಲ್ಲಿ ಬದಲಾವಣೆ ಕಂಡುಕೊಳ್ಳುವಿರಿ
Weight loss
Follow us
ಅಕ್ಷತಾ ವರ್ಕಾಡಿ
|

Updated on: Mar 17, 2024 | 8:39 PM

ಸ್ಥೂಲಕಾಯತೆಯು ನಿಮ್ಮ ದೇಹದ ಆಕಾರವನ್ನು ಕೆಡಿಸುವುದಲ್ಲದೇ, ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಸಮಯೋಚಿತ ತೂಕ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇಂದು ಪ್ರಪಂಚದಾದ್ಯಂತ ವಯಸ್ಕರು ಮತ್ತು ಮಕ್ಕಳು ಸ್ಥೂಲಕಾಯತೆಗೆ ಬಲಿಯಾಗುತ್ತಿದ್ದಾರೆ. ತೂಕವನ್ನು ನಿಯಂತ್ರಿಸಲು ಜನರು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ನೀವು ಸಹ ತೂಕ ಇಳಿಕೆಗೆ ಪ್ರಯತ್ನಿಸುತ್ತಿದ್ದರೆ ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ. ನೀವು ವೇಗವಾಗಿ ಮತ್ತು ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಬಯಸಿದರೆ, ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಆಹಾರ ಪದಾರ್ಥಗಳು ಮತ್ತು ಸರಿಯಾದ ಸಮಯದಲ್ಲಿ ತಿನ್ನುವುದು ಮುಖ್ಯ.

ಸಾಕಷ್ಟು ನೀರು ಕುಡಿಯಿರಿ:

ತೂಕವನ್ನು ಕಳೆದುಕೊಳ್ಳಲು ನೀವು ಬಯಸಿದರೆ ಯಾವಾಗಲೂ ನಿಮ್ಮ ದೇಹವನ್ನು ತೇವಾಂಶದಿಂದಿರಿಸಿ. ಇದಕ್ಕಾಗಿ ನೀವು ನಿಮ್ಮ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಮತ್ತು ಹಣ್ಣಿನ ರಸಗಳನ್ನು ಕುಡಿಯುವ ಮೂಲಕ ದಿನ ಪ್ರಾರಂಭಿಸಿ. ಇದಲ್ಲದೇ ದಿನಕ್ಕೆ ಎರಡರಿಂದ ಮೂರು ಲೀಟರ್​​ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.

ಆಹಾರ ಸೇವಿಸುವ ಸಮಯ:

ತೂಕ ಇಳಿಸಿಕೊಳ್ಳಲು ಪ್ರಾರಂಭಿಸಿದ ದಿನದಿಂದ ಬೆಳಿಗ್ಗೆ 8 ರಿಂದ 9 ಗಂಟೆಯ ಒಳಗೆ ಉಪಹಾರ ಸೇವಿಸಿ. ಉಪಹಾರದಲ್ಲಿ ನೀವು ಮೊಸರು, ಗಂಜಿ, ಓಟ್ಸ್, ಧಾನ್ಯ, ಬೀಜಗಳು, ಗ್ರೀನ್​​ ಟೀ ಸೇರಿಸಿಕೊಳ್ಳಿ. ಮಧ್ಯಾಹ್ನ 1 ರಿಂದ 2 ರ ನಡುವೆ ಊಟ ಮಾಡಿ ಮತ್ತು ಬೇಳೆಕಾಳುಗಳು, ಮಿಶ್ರ ತರಕಾರಿಗಳು, ರೊಟ್ಟಿ ಮತ್ತು ಪ್ರೋಟೀನ್ ಭರಿತ ಆಹಾರವನ್ನು ಸೇರಿಸಿ. ರಾತ್ರಿ 7 ರಿಂದ 8 ರವರೆಗೆ ರಾತ್ರಿಯ ಊಟಕ್ಕೆ ಸಲಾಡ್ ಮತ್ತು ಲಘು ಊಟವನ್ನು ಸೇವಿಸಿ. ಇದರ ನಂತರ ನೀವು ಒಂದು ಕಪ್ ಕ್ಯಾಮೊಮೈಲ್ ಚಹಾವನ್ನು ಕುಡಿಯಬಹುದು.

ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ:

ಆರೋಗ್ಯಕರ ಆಹಾರ ಯೋಜನೆಯನ್ನು ಅನುಸರಿಸುವುದರ ಜೊತೆಗೆ, ಮಾರುಕಟ್ಟೆಯಲ್ಲಿ ಲಭ್ಯವಿರುವ ಹಣ್ಣಿನ ರಸಗಳು ಮತ್ತು ಶಕ್ತಿ ಪಾನೀಯಗಳನ್ನು ಸೇವಿಸದಂತೆ ಖಚಿತಪಡಿಸಿಕೊಳ್ಳಿ. ಅಲ್ಲದೆ, ಅನಾರೋಗ್ಯಕರ ಆಹಾರವನ್ನು ಸೇವಿಸಬೇಡಿ. ಕೆಫೀನ್ ಸೇವನೆಯನ್ನು ಮಿತಿಗೊಳಿಸಿ ಮತ್ತು ಉಪ್ಪು ಮತ್ತು ಸಕ್ಕರೆ ಅಧಿಕವಾಗಿರುವ ಆಹಾರವನ್ನು ತಪ್ಪಿಸಿ. ತಿನ್ನುವುದು ಮತ್ತು ಕುಡಿಯುವುದನ್ನು ಹೊರತುಪಡಿಸಿ, ರಾತ್ರಿಯಲ್ಲಿ ತಡವಾಗಿ ಎಚ್ಚರವಾಗಿರುವುದನ್ನು ತಪ್ಪಿಸಿ ಏಕೆಂದರೆ ನಿದ್ರಾಹೀನತೆ ನಿಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಅದು ತೂಕ ಹೆಚ್ಚಾಗಲು ಕಾರಣವಾಗಬಹುದು.

ಇದನ್ನೂ ಓದಿ: Okra Water: ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರನ್ನು ಕುಡಿದರೆ ಏನಾಗುತ್ತದೆ?

ವ್ಯಾಯಾಮ :

ತೂಕ ನಷ್ಟಕ್ಕೆ ನೀವು ಸರಿಯಾದ ಆಹಾರಕ್ರಮವನ್ನು ಅನುಸರಿಸುವುದು ಎಷ್ಟು ಮುಖ್ಯವೋ, ದೈಹಿಕ ಚಟುವಟಿಕೆಯತ್ತ ಗಮನ ಹರಿಸುವುದು ಅಷ್ಟೇ ಮುಖ್ಯ. ಆದ್ದರಿಂದ ನಿಮ್ಮ ದಿನಚರಿಯಲ್ಲಿ ವ್ಯಾಯಾಮ ಅಥವಾ ಯೋಗಕ್ಕಾಗಿ 30 ರಿಂದ 40 ನಿಮಿಷಗಳನ್ನು ಮೀಸಲಿಡಿ, ಏಕೆಂದರೆ ಆಹಾರ ಮತ್ತು ದೈಹಿಕ ಚಟುವಟಿಕೆಯ ಸರಿಯಾದ ಸಂಯೋಜನೆಯಿಂದ ಮಾತ್ರ ತೂಕವನ್ನು ನಿಯಂತ್ರಿಸಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು