Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ

ಇತ್ತೀಚೆಗಿನ ದಿನಗಳಲ್ಲಿ ಒತ್ತಡದ ಜೀವನ ಶೈಲಿ, ಕುಳಿತಲ್ಲಿಯೇ ಕೆಲಸ ಮಾಡುವುದು ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಅತಿಯಾದ ತೂಕ ಸಮಸ್ಯೆಯಿಂದ ಬಳಲುತ್ತಿರುವವರು ಸಂಖ್ಯೆಯೇ ಹೆಚ್ಚು. ಹೀಗಾಗಿ ಹೆಚ್ಚಿನವರು ತಾವು ತೆಳ್ಳಗಾಗಲು ಏನು ಮಾಡಬೇಕು ಎಂದು ಕೇಳುತ್ತಿರುತ್ತಾರೆ. ಹಾಗಾದ್ರೆ ಈ ಕೆಲವು ಪಾನೀಯಗಳನ್ನು ಕುಡಿದರೆ ತೂಕ ಇಳಿಕೆಯಾಗಿ ಬೊಜ್ಜು ಕರಗುವುದಲ್ಲದೆ ಸ್ಲಿಮ್ ಆಗಿ ಕಾಣಿಸಿಕೊಳ್ಳಬಹುದು

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 26, 2024 | 2:11 PM

ಅತಿಯಾದ ತೂಕವೆನ್ನುವುದು ಎಲ್ಲರ ಸಮಸ್ಯೆಯಾಗಿ ಬಿಟ್ಟಿದೆ. ಹೊಟ್ಟೆ ಕೊಬ್ಬು ಹಾಗೂ ತೂಕ ಇಳಿಕೆಗೆ ಮಾರ್ಗಗಳು ಹಲವರಿದ್ದರೂ ತುಂಬಾ ಸಮಯಗಳ ಕಾಲ ಕಳೆಯಬೇಕಾಗುತ್ತದೆ. ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರಿಳಿಸುವುದು, ಡಯಟ್ ಮಾಡುವ ಮೂಲಕ ತೂಕ ಇಳಿಕೆ ಮಾಡಿಕೊಳ್ಳಬಹುದು. ಅಷ್ಟು ಸಮಯವಾಗಲಿ ಹಾಗೂ ತಾಳ್ಮೆಯಾಗಲಿ ಇಂದಿನ ಜನರಿಗೆ ಇಲ್ಲ. ಮನೆಯಲ್ಲೇ ಪಾನೀಯಗಳನ್ನು ತಯಾರಿಸಿ ತೂಕ ಇಳಿಸುವುದು ಸುಲಭ ಮಾರ್ಗವಾಗಿದೆ. ಹೀಗಾಗಿ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿದರೆ ದೇಹದಲ್ಲಿ ಮ್ಯಾಜಿಕ್ ಆಗುತ್ತದೆ.

ತೂಕ ಇಳಿಕೆಗೆ ಉತ್ತಮ ಪಾನೀಯಗಳು:

ಮೆಂತ್ಯೆ ನೀರು : ರಾತ್ರಿಯ ಒಂದು ಲೋಟ ನೀರಿಗೆ ಮೆಂತ್ಯ ಕಾಳುಗಳನ್ನು ಹಾಕಿ ನೆನೆಸಿಟ್ಟು, ಈ ನೀರನ್ನು ಬಿಸಿ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ತೂಕ ಕಡಿಮೆಯಾಗುವುದಲ್ಲದೆ ಅಸಿಡಿಟಿಯಂತಹ ತೊಂದರೆಗಳು ಶಮನವಾಗುತ್ತದೆ.

ನಿಂಬೆ ನೀರು : ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರಿಗೆ ಅರ್ಧ ನಿಂಬೆ ಹಣ್ಣಿನ ರಸ ಹಾಗೂ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನಿಂಬೆ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಜೀರಿಗೆ ನೀರು : ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆಯನ್ನು ಹಾಕಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಈ ಜೀರಿಗೆ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತೂಕನಷ್ಟಕ್ಕೆ ಕಾರಣವಾಗುತ್ತದೆ.

ಪುದೀನಾ ನೀರು : ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ತೂಕ ನಷ್ಟಕ್ಕೆ ಸುಲಭ ಮಾರ್ಗವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಕಡಿಮೆಯಾಗುವಂತೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ