AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ

ಅಸಾಫೋಟಿಡಾ ಎಂದೂ ಕರೆಯಲ್ಪಡುವ ಇಂಗು ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಬಲವಾದ ಸುವಾಸನೆಯು ಸಾಂಬಾರ್‌, ರಸಂ ಇತ್ಯಾದಿ ಖಾದ್ಯಗಳ ರುಚಿಯನ್ನು ಹೆಚ್ಚಿಸುತ್ತದೆ. ಬರೀ ಇಷ್ಟೇ ಅಲ್ಲ ಅಡುಗೆಗೆ ಇಂಗು ಸೇರಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳೂ ಲಭಿಸುತ್ತವೆ. ಹಾಗಿದ್ದರೆ ಅಡುಗೆಗೆ ಹಾಕುವ ಚಿಟಿಕೆ ಇಂಗಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ನೋಡೋಣ ಬನ್ನಿ.

ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ
ಇಂಗುImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 16, 2026 | 8:21 PM

Share

ಭಾರತೀಯರ ಅಡುಗೆ ಮನೆಗಳಲ್ಲಿ ಇಂಗು (Asafoetida) ಇದ್ದೇ ಇರುತ್ತದೆ. ಸಣ್ಣ ಬಗೆಯ ಮಸಾಲೆಯಾಗಿರುವ ಇಂಗು ಅಡುಗೆಗೆ ವಿಭಿನ್ನ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಬೇಳೆ ಸಾರು, ರಸಂ, ಸಾಂಬಾರು ಸೇರಿದಂತೆ ಹೆಚ್ಚಿನ ತರಕಾರಿ ಪದಾರ್ಥಗಳಿಗೆ ಇಂಗು ಹಾಕಲಾಗುತ್ತದೆ. ಹೀಗೆ ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರವಹಿಸುವಂತಹ ಇಂಗಿಗೆ ಆಯುರ್ವೇದದಲ್ಲೂ ಮುಖ್ಯ ಸ್ಥಾನವಿದೆ. ಹೌದು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಇಂಗು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿ. ಒಟ್ಟಾರೆಯಾಗಿ ಅಡುಗೆಗೆ ಚಿಟಿಕೆ ಇಂಗು ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಇಂಗಿನ ಆರೋಗ್ಯ ಪ್ರಯೋಜನಗಳೇನು?

ಜೀರ್ಣಕ್ರಿಯೆಗೆ ಸಹಕಾರಿ: ಇಂಗು ಜೀರ್ಣಕ್ರಿಯೆಗೆ ಬೇಕಾಗುವಂತಹ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದರ ಆಂಟಿಸ್ಪಾಸ್ಮೊಡಿಕ್‌ ಮತ್ತು ಉರಿಯೂತ ನಿವಾರಕ ಗುಣಗಳು ಹೊಟ್ಟೆಯುಬ್ಬರ, ಗ್ಯಾಸ್‌, ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ತುಂಬಾನೇ ಸಹಕಾರಿ.

ಉಸಿರಾಟದ ಸಮಸ್ಯೆಯನ್ನು ನಿವಾರಿಸುತ್ತದೆ: ಇಂಗು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ಶ್ವಾಸಕೋಶಗಳಿಗೆ ಪ್ರಯೋಜನಕಾರಿಯಾಗಿದೆ. ಇದು ಆಸ್ತಮಾ, ಕೆಮ್ಮು ಮತ್ತು ಎದೆಯಿಂದ ಕಫವನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ, ಉಸಿರಾಟವನ್ನು ಸುಲಭಗೊಳಿಸುತ್ತದೆ.

ತಲೆನೋವನ್ನು ನಿವಾರಿಸುತ್ತದೆ: ಇಂಗುವಿನ ಉರಿಯೂತ ನಿವಾರಕ ಗುಣಗಳು ತಲೆಯಲ್ಲಿರುವ ರಕ್ತನಾಳಗಳ ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ವಲ್ಪ ಇಂಗನ್ನು  ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಮೈಗ್ರೇನ್ ಮತ್ತು ಒತ್ತಡದ ತಲೆನೋವಿನಿಂದ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಮುಟ್ಟಿನ ನೋವನ್ನು ನಿವಾರಿಸುತ್ತದೆ: ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ಮತ್ತು ಸೆಳೆತವನ್ನು ಅನುಭವಿಸುತ್ತಾರೆ. ಇಂತಹ ಸಂದರ್ಭದಲ್ಲಿ ನೀರಿನೊಂದಿಗೆ ಒಂದು ಚಿಟಿಕೆ ಇಂಗು ಬೆರೆಸಿ  ಸೇವಿಸಿದರೆ ನೋವು ನಿವಾರಣೆಯಾಗುತ್ತದೆ ಎಂದು ಹೇಳಲಾಗುತ್ತದೆ.

ಚರ್ಮಕ್ಕೆ ಪ್ರಯೋಜನಕಾರಿ: ಇಂಗು ವಯಸ್ಸಾಗುವಿಕೆ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಇಂಗಿನಲ್ಲಿ ಕೂಮರಿನ್ ಎಂಬ ಪದಾರ್ಥವಿದೆ. ಇದು ರಕ್ತ ತೆಳುವಾಗಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. ಇದು ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗೆ ಅಡುಗೆಗೆ ಒಂದು ಚಿಟಿಕೆ ಇಂಗು ಸೇರಿಸುವುದರಿಂದ ರುಚಿ ಮತ್ತು ಸುವಾಸನೆ ಎರಡನ್ನೂ ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ