AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗುವಾಗ ಅತಿಯಾಗಿ ಯೋಚಿಸುವುದರಿಂದ ಉಂಟಾಗುವ ಸಮಸ್ಯೆಗಳೇನು?

ರಾತ್ರಿ ದಿಂಬಿನ ಮೇಲೆ ತಲೆಯಿಟ್ಟು ಮಲಗಿದ ತಕ್ಷಣ ತಲೆಯಲ್ಲಿ ಅನೇಕಾರು ಯೋಚನೆಗಳು ಓಡಾಡಲು ಪ್ರಾರಂಭಿಸುತ್ತವೆ. ಏನೆನೋ ಕೆಟ್ಟ ಯೋಚನೆಗಳು ಬರುತ್ತವೆ. ನೀವು ಕೂಡ ಇದೇ ರೀತಿ ರಾತ್ರಿ ಮಲಗುವಾಗ ಅತಿಯಾಗಿ ಯೋಚಿಸುತ್ತೀರಾ, ತೀರಾ ಸಾಮಾನ್ಯದಂತೆ ಕಂಡರೂ ಈ ಅತಿಯಾಗಿ ಯೋಚಿಸುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆಂತೆ. ಅತಿಯಾಗಿ ಯೋಚಿಸುವುದರಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮಗಳು ಬೀರುತ್ತವೆ ಎಂಬುದನ್ನು ನೋಡೋಣ ಬನ್ನಿ.

ರಾತ್ರಿ ಮಲಗುವಾಗ ಅತಿಯಾಗಿ ಯೋಚಿಸುವುದರಿಂದ ಉಂಟಾಗುವ ಸಮಸ್ಯೆಗಳೇನು?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 04, 2026 | 7:44 PM

Share

ರಾತ್ರಿ ಮಲಗುವ (sleeping) ಮುನ್ನ ನಮಗೆ ಲೆಕ್ಕವಿಲ್ಲದಷ್ಟು ಆಲೋಚನೆಗಳು ಬರುತ್ತವೆ. ಇದರಿಂದ ಸಮಯಕ್ಕೆ ಸರಿಯಾಗಿ ನಿದ್ರೆ ಮಾಡಲು ಕಷ್ಟಕರವಾಗುತ್ತದೆ. ಒತ್ತಡ, ಆತಂಕ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಸಮಸ್ಯೆಗಳು ಸೇರಿದಂತೆ ಕೆಲವೊಂದು ಬಗೆಹರಿಯದ ಸಮಸ್ಯೆಗಳು ಅತಿಯಾಗಿ ಯೋಚಿಸುವುದಕ್ಕೆ ಕಾರಣವಾಗುತ್ತವೆ. ರಾತ್ರಿ ಮಲಗುವ ಸಮಯದಲ್ಲಿ ಈ ಅತಿಯಾದ ಯೋಚನೆಗಳು ತಲೆಯಲ್ಲಿ ಓಡಾಡುತ್ತಿರುತ್ತವೆ. ನಿಮಗೂ ಕೂಡ ಇದೇ ರೀತಿ ದಿಂಬಿನ ಮೇಲೆ ತಲೆಯಿಟ್ಟ ತಕ್ಷಣ ಹಲವು ಆಲೋಚನೆಗಳು ಮನದಲ್ಲಿ ಓಡಾಡುತ್ತಾ? ಈ ಅತಿಯಾದ ಆಲೋಚನೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ತಿಳಿಯಿರಿ.

ರಾತ್ರಿಯಲ್ಲಿ ಅತಿಯಾಗಿ ಯೋಚಿಸುವುದರಿಂದಾಗುವ ತೊಂದರೆಗಳೇನು?

ನಿದ್ರಾಹೀನತೆ: ರಾತ್ರಿ ಮಲಗುವಾಗ  ಅತಿಯಾದ ಯೋಚನೆಯಲ್ಲಿ ಮುಳುಗಿದರೆ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಇದು ನಿದ್ರಾಹೀನತೆಗೆ ಕಾರಣವಾಗಬಹುದು. ಹೀಗೆ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗದಿದ್ದಾಗ, ಮರುದಿನ ಆಕ್ಟಿವ್‌ ಆಗಿರಲು ಸಹ ಆಗುವುದಿಲ್ಲ.

ಹೃದಯ ಮೇಲೆ ಪರಿಣಾಮ ಬೀರುತ್ತದೆ: ರಾತ್ರಿ ಮಲಗಿದ ಸಂದರ್ಭದಲ್ಲಿ ಅತಿಯಾಗಿ ಯೋಚಿಸುವ ಅಭ್ಯಾಸ ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಹೃದಯ ಬಡಿತ ಹೆಚ್ಚಾಗಲು, ಕೈಕಾಲುಗಳಲ್ಲಿ ನಡುಕ ಉಂಟಾಗಲು ಕಾರಣವಾಗಬಹುದು. ಅಲ್ಲದೆ ದೀರ್ಘಕಾಲ ಎಚ್ಚರವಾಗಿರುವುದರಿಂದ ಮಲಬದ್ಧತೆ, ಹೊಟ್ಟೆ ನೋವು, ವಾಕರಿಕೆ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಆತಂಕ ಹೆಚ್ಚಾಗುತ್ತದೆ: ರಾತ್ರಿ ಮಲಗುವ ಸಂದರ್ಭದಲ್ಲಿ ಅತಿಯಾಗಿ ಯೋಚಿಸುವುದರಿಂದ ಒತ್ತಡ, ಆತಂಕದ ಮಟ್ಟ ಹೆಚ್ಚಾಗುತ್ತದೆ. ಈ ಪರಿಸ್ಥಿತಿಯಲ್ಲಿ, ವ್ಯಕ್ತಿಯು ನಿರಂತರವಾಗಿ ಚಿಂತೆಗೀಡಾಗುತ್ತಾನೆ, ಇದು ಪ್ಯಾನಿಕ್ ಅಟ್ಯಾಕ್‌ಗೂ ಕಾರಣವಾಗಬಹುದು.

ಖಿನ್ನತೆಗೆ ಕಾರಣವಾಗಬಹುದು: ರಾತ್ರಿಯಿಡೀ ನಕಾರಾತ್ಮಕ ಆಲೋಚನೆಗಳನ್ನು ತಲೆಯಲ್ಲಿ ತುಂಬಿಕೊಂಡರೆ ನಂತರದಲ್ಲಿ ಇದರಿಂದ ಖಿನ್ನತೆ ಜಾರುವ ಸಾಧ್ಯತೆಯೂ ಇರುತ್ತದೆ.  ಅಲ್ಲದೆ ಅತಿಯಾಗಿ ಯೋಚಿಸುವುದರಿಂದ ಮಾನಸಿಕವಾಗಿ ದಣಿದ ಅನುಭವವಾಗುತ್ತದೆ.

ಇದನ್ನೂ ಓದಿ: ದೈಹಿಕ, ಮಾನಸಿಕ ದಣಿವನ್ನು ನಿವಾರಿಸಲು ಈ ಸುಲಭ ತಂತ್ರಗಳನ್ನು ತಪ್ಪದೇ ಪಾಲಿಸಿ

ರಾತ್ರಿಯಲ್ಲಿ ಅತಿಯಾಗಿ ಯೋಚಿಸುವುದನ್ನು ತಪ್ಪಿಸುವುದು ಹೇಗೆ?

  • ನಿಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.
  • ಮಲಗುವ ಮುನ್ನ ಕನಿಷ್ಠ 10-15 ನಿಮಿಷಗಳ ಕಾಲ ಧ್ಯಾನ ಮಾಡಿ, ಇದು ಮನಸ್ಸನ್ನು ಶಾಂತಗೊಳಿಸುತ್ತದೆ.
  • ಹಾಸಿಗೆಯ ಮೇಲೆ ನೇರವಾಗಿ ಮಲಗಿ, ನಿಮ್ಮ ದೇಹವನ್ನು ಸಂಪೂರ್ಣವಾಗಿ ಸಡಿಲಗೊಳಿಸಿ ಮತ್ತು ನಿಮ್ಮ ಉಸಿರಾಟದ ಮೇಲೆ ಗಮನಹರಿಸಿ.
  • ತಜ್ಞರ ಪ್ರಕಾರ, ಎಡಮಗ್ಗುಲಾಗಿ ಮಲಗುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ದೇಹ ಮತ್ತು ಮನಸ್ಸಿಗೆ ತ್ವರಿತ ವಿಶ್ರಾಂತಿ ದೊರೆಯುತ್ತದೆ.
  • ಅಗತ್ಯವಿದ್ದರೆ, ತಜ್ಞರನ್ನು ಸಂಪರ್ಕಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್