AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?

ಚಳಿಗಾಲವಿರಲಿ, ಬೇಸಿಗೆಯಿರಲಿ, ಮಳೆಗಾಲವಿರಲಿ ಕೆಲವರಂತೂ ದೇಹ ತುಂಬಾನೇ ರಿಲ್ಯಾಕ್ಸ್‌ ಆಗುತ್ತೆ ಅನ್ನೋ ಕಾರಣಕ್ಕೆ ಪ್ರತಿನಿತ್ಯ ಅತಿಯಾದ ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಹೀಗೆ ಸುಡು ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಆರೋಗ್ಯ ತಜ್ಞರ ಪ್ರಕಾರ ಬಿಸಿ ನೀರಿನ ಸ್ನಾನ ಎಷ್ಟು ಅಪಾಯಕಾರಿ, ಅದರಿಂದ ಉಂಟಾಗುವ ತೊಂದರೆಗಳೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 23, 2026 | 6:17 PM

Share

ನೈರ್ಮಲ್ಯದ ದೃಷ್ಟಿಯಿಂದ ಪ್ರತಿನಿತ್ಯ ಸ್ನಾನ ಮಾಡುವುದು ತುಂಬಾನೇ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ತಪ್ಪದೇ ಸ್ನಾನ ಮಾಡ್ತಾರೆ. ಕೆಲವರು ತಣ್ಣೀರಿನಿಂದ, ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿದ್ರೆ, ಇನ್ನೂ ಕೆಲವರು ಚಳಿಗಾಲ ಮಾತ್ರವಲ್ಲ ಬೇಸಿಗೆಕಾಲದಲ್ಲೂ ಸುಡು ಬಿಸಿ ನೀರಿನಿಂದಲೇ (Hot Water) ಸ್ನಾನ ಮಾಡುತ್ತಾರೆ. ಹೀಗೆ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ದೇಹಕ್ಕೆ ರಿಲ್ಯಾಕ್ಸ್‌ ಸಿಗಬಹುದು, ಸ್ನಾಯುಗಳ ಬಿಗಿತದಿಂದ ಪರಿಹಾರ ದೊರೆಯಬಹುದು. ಆದರೆ ಹೆಚ್ಚು ಬಿಸಿನೀರಿನಿಂದ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಇದು ಚರ್ಮ ಹಾಗೂ ಕೂದಲಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಂತೆ. ಹಾಗಾದರೆ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಆಗುವ ತೊಂದರೆಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಉಂಟಾಗುವ ಪರಿಣಾಮಗಳೇನು?

ಚರ್ಮ ಒಣಗುತ್ತದೆ: ಬಿಸಿನೀರಿನ ಸ್ನಾನ ಚರ್ಮದ ನೈಸರ್ಗಿಕ ತೇವಾಂಶ ಮತ್ತು ರಕ್ಷಣಾತ್ಮಕ ತೈಲಗಳನ್ನು ತೆಗೆದುಹಾಕುತ್ತದೆ. ಇದು ಚರ್ಮವನ್ನು ಒಣಗಿಸುತ್ತದೆ, ತುರಿಕೆ , ಕಿರಿಕಿರಿ ಇತ್ಯಾದಿ ಸಮಸ್ಯೆಗಳನ್ನು ಉಂಟು ಮಾಡುತ್ತದೆ.  

ಕೂದಲು ಮತ್ತು ನೆತ್ತಿಗೆ ಹಾನಿ: ಬಿಸಿನೀರು ಚರ್ಮಕ್ಕೆ ಮಾತ್ರವಲ್ಲದೆ ಕೂದಲು ಮತ್ತು ನೆತ್ತಿಗೂ ಹಾನಿಕಾರಕವಾಗಿದೆ. ಇದು ನೆತ್ತಿಯ ನೈಸರ್ಗಿಕ ಎಣ್ಣೆಯನ್ನು ತೆಗೆದುಹಾಕುತ್ತದೆ, ಇದು ಒಣಗಲು ಕಾರಣವಾಗುತ್ತದೆ ಮತ್ತು ತಲೆಹೊಟ್ಟು ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ. ಅಲ್ಲದೆ ಇದು ಕೂದಲಿನ ಹೊರಪೊರೆಗಳನ್ನು ಹಾನಿಗೊಳಿಸುತ್ತದೆ, ಕೂದಲು ಉದುರುವಿಕೆಯ ಸಮಸ್ಯೆಯನ್ನೂ ಹೆಚ್ಚಿಸುತ್ತದೆ.

ರಕ್ತದೊತ್ತಡ: ಸುಡು ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದ ರಕ್ತನಾಳಗಳು ಹಿಗ್ಗುತ್ತವೆ, ಇದು ಹಠಾತ್ ರಕ್ತದೊತ್ತಡ ಕಡಿಮೆಯಾಗಿ ತಲೆತಿರುಗುವಿಕೆ ಅಥವಾ ಆಯಾಸಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡ ಕಡಿಮೆಯಾಗುತ್ತದೆಯೇ? ತಜ್ಞರು ಬಗ್ಗೆ ಏನೆನ್ನುತ್ತಾರೆ

ಕಣ್ಣಿನ ಸಮಸ್ಯೆಗಳು: ಬಿಸಿನೀರಿನ ಆವಿಯ ನೇರ ಸಂಪರ್ಕವು ಕಣ್ಣುಗಳ ನೈಸರ್ಗಿಕ ತೇವಾಂಶವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಕಣ್ಣುಗಳು ಕೆಂಪಾಗುತ್ತವೆ ಮತ್ತು ತುರಿಕೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ತಾಪಮಾನ ಅಸಮತೋಲನ: ಬಿಸಿನೀರಿನ ಅಭ್ಯಾಸವು ದೇಹದ ನೈಸರ್ಗಿಕ ತಾಪಮಾನವನ್ನು ಕಾಯ್ದುಕೊಳ್ಳುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ಶೀತ ಹವಾಮಾನವನ್ನು ಎದುರಿಸುವ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ.

ಹಾಗಾಗಿ ಸ್ನಾನಕ್ಕೆ ಯಾವಾಗಲೂ ಉಗುರು ಬೆಚ್ಚಗಿನ ನೀರನ್ನು ಬಳಸಿ, ಇದರಿಂದ ಚರ್ಮ ಒಣಗುವುದಿಲ್ಲ ಮತ್ತು ಅದರ ನೈಸರ್ಗಿಕ ಎಣ್ಣೆಗಳು ಹಾಗೆಯೇ ಉಳಿಯುತ್ತವೆ. ಜೊತೆಗೆ ಕೂದಲಿಗೂ ಯಾವುದೇ ರೀತಿಯ ಹಾನಿ ಉಂಟಾಗುವುದಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!