
ಆರೋಗ್ಯಕರ ಜೀವನ ನಡೆಸಲು ಉತ್ತಮ ಜೀವನಶೈಲಿಯನ್ನು ಪಾಲಿಸುವುದರ ಜೊತೆಗೆ ದೈಹಿಕವಾಗಿ ಸದೃಢ ಮತ್ತು ಸಕ್ರಿಯವಾಗಿರುವುದು ಮುಖ್ಯ. ಯೋಗವು (yoga) ನಮ್ಮನ್ನು ದೈಹಿಕವಾಗಿ ಸಕ್ರಿಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೌದು ನಿಯಮಿತ ಯೋಗಾಭ್ಯಾಸದಿಂದ ಅನೇಕ ಆರೋಗ್ಯ ಪ್ರಯೋಜನಗಳು ಲಭಿಸುತ್ತದೆ. ಇದು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆ, ಜೀರ್ಣಕ್ರಿಯೆನ್ನು ಸುಧಾರಿಸುತ್ತದೆ. ಹೀಗೆ ಯೋಗ ಮಾಡುವುದರಿಂದ ಸಾಕಷ್ಟು ಆರೋಗ್ಯ ಲಾಭವನ್ನು ಪಡೆಯಬಹುದು. ಆದರೆ ಇಂದಿನ ಜಡಜೀವನಶೈಲಿಯ ಕಾರಣದಿಂದಾಗಿ ಅನೇಕರು ಯೋಗ ಅಥವಾ ಇನ್ಯಾವುದೇ ದೈಹಿಕ ಚಟುವಟಿಕೆಗಳತ್ತ ಗಮನ ನೀಡುತ್ತಿಲ್ಲ. ಈ ಉದಾಸೀನತೆಯನ್ನು ಬಿಟ್ಟು ಜಸ್ಟ್ 10 ಹತ್ತೇ ಹತ್ತು ನಿಮಿಷಗಳ ಕಾಲ ಪ್ರತಿನಿತ್ಯ ಬೆಳಗ್ಗೆ ಯೋಗಭ್ಯಾಸ ಮಾಡಿ. ನೀವು ಅಳವಡಿಸಿಕೊಳ್ಳುವ ಈ ಸಣ್ಣ ಅಭ್ಯಾಸ ದೇಹಕ್ಕೆ ಏನೆಲ್ಲಾ ಪ್ರಯೋಜನಗಳನ್ನು ಒದಗಿಸಿಕೊಡುತ್ತದೆ ಎಂಬ ಪೂರ್ಣ ವಿವರ ಇಲ್ಲಿದೆ.
ಬೆಳಿಗ್ಗೆ ಯೋಗ ಮತ್ತು ಸ್ಟ್ರೆಚಿಂಗ್ ಮಾಡುವುದರಿಂದ ನಿಮ್ಮ ಸ್ನಾಯುಗಳು ಮತ್ತು ಕೀಲುಗಳನ್ನು ನಿಧಾನವಾಗಿ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಇದು ಬಿಗಿತವನ್ನು ಕಡಿಮೆ ಮಾಡಲು ಮತ್ತು ದಿನವನ್ನು ಹೆಚ್ಚು ಸರಾಗವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ.
ಯೋಗವನ್ನು ನಿಮ್ಮ ದೈನಂದಿನ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳುವುದರಿಂದ ನಿಮ್ಮ ಮನಸ್ಸನ್ನು ಶಾಂತಗೊಳಿಸಬಹುದು ಮತ್ತು ಒತ್ತಡವನ್ನು ಕಡಿಮೆ ಮಾಡಬಹುದು, ಇದು ಹೆಚ್ಚು ನಿರಾಳತೆಯನ್ನು ನೀಡುತ್ತದೆ. ಇತ್ತೀಚಿನ ದಿನಗಳಲ್ಲಿ ಒತ್ತಡ ಸಾಮಾನ್ಯವಾಗಿದೆ ಮತ್ತು ಅದನ್ನು ಕಡಿಮೆ ಮಾಡಲು ಯೋಗವು ಅತ್ಯುತ್ತಮ ಮಾರ್ಗವಾಗಿದೆ. ಭ್ರಮರಿ ಪ್ರಾಣಾಯಾಮ, ಆಳವಾದ ಉಸಿರಾಟ ಮತ್ತು ಅನುಲೋಮ-ವಿಲೋಮವನ್ನು ಅಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡವನ್ನು ನಿವಾರಿಸಬಹುದು.
ಜಂಕ್ ಫುಡ್‌ಗಳು, ಕಳಪೆ ಜೀವನಶೈಲಿ ಮತ್ತು ನಿರಂತರ ಒತ್ತಡ ಇವೆಲ್ಲವೂ ತೂಕ ಹೆಚ್ಚಾಗಲು ಕಾರಣವಾಗಬಹುದು. ಇದು ಚಯಾಪಚಯ ಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಮತ್ತು ತ್ವರಿತ ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಆದ್ದರಿಂದ ನಿತ್ಯ ಬೆಳಗ್ಗೆ 10 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ಇದು ತೂಕವನ್ನು ನಿಯಂತ್ರಿಸಲು ತುಂಬಾನೇ ಸಹಕಾರಿ.
ಯೋಗವು ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.
ಬೆಳಗಿನ ಯೋಗಾಸನ ನಿಮ್ಮ ನರಮಂಡಲವನ್ನು ಸಕ್ರಿಯಗೊಳಿಸುತ್ತವೆ, ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಏಕಾಗ್ರತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಒಂದು ನಿರ್ದಿಷ್ಟ ವಯಸ್ಸಿನ ನಂತರ, ಹಾರ್ಮೋನುಗಳು ಬದಲಾಗಲು ಪ್ರಾರಂಭಿಸುತ್ತವೆ. ಇದು ತೂಕ ಹೆಚ್ಚಾಗುವುದು, ಮನಸ್ಥಿತಿ ಬದಲಾವಣೆಗಳು ಮತ್ತು ಆಯಾಸದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಯಮಿತವಾಗಿ ಯೋಗಾಭ್ಯಾಸ ಮಾಡಿ.
ಇದನ್ನೂ ಓದಿ: ಒಂದು ತಿಂಗಳು ಸಕ್ಕರೆ ಸೇವಿಸುವುದನ್ನು ಬಿಟ್ಟರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳನ್ನು ಸಂಭವಿಸುತ್ತವೆ ಗೊತ್ತಾ?
ನಿಯಮಿತ ಯೋಗಾಭ್ಯಾಸವು ನಿಮಗೆ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಯೋಗಾಭ್ಯಾಸವು ನಿಮ್ಮ ನಿದ್ರೆಯ ಚಕ್ರವನ್ನು ಸುಧಾರಿಸುತ್ತದೆ ಮತ್ತು ನಿಮಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ.
ದಿನವಿಡೀ ಕೆಲವು ನಿಮಿಷಗಳ ಯೋಗವು ದಿನದ ಚಿಂತೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ, ಮನಸ್ಥಿತಿ ಸುಧಾರಣೆಯಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ