Silent Walking: ಮೌನ ನಡಿಗೆ ಎಂದರೇನು? ಅದು ನಿಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನ? 

ಮೌನದಲ್ಲಿ ದೊಡ್ಡ ಶಕ್ತಿ ಇದೆ ಎಂದು ಹೇಳಲಾಗುತ್ತದೆ. ಬೆಳಗ್ಗೆ ಅಥವಾ ಸಂಜೆ ವಾಕಿಂಗ್ ಮಾಡುವಾಗ ನೀವು ಈ ಮೌನವನ್ನು ಪಾಲಿಸಿದರೆ, ನೀವು ಯೋಚಿಸದಿರುವ ಅನೇಕ ಪ್ರಯೋಜನಗಳನ್ನು ನೀವು ಪಡೆಯಬಹುದು. ವಾಸ್ತವವಾಗಿ ಶಾಂತವಾದ ನಡಿಗೆಯು ಮಾನಸಿಕ, ಭಾವನಾತ್ಮಕ ಮತ್ತು ದೈಹಿಕ ಆರೋಗ್ಯಕ್ಕೂ ತುಂಬಾ ಒಳ್ಳೆಯುದು. 

Silent Walking: ಮೌನ ನಡಿಗೆ ಎಂದರೇನು? ಅದು ನಿಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನ? 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 03, 2023 | 6:24 PM

ದೇಹದಾರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಬಹಳ ಮುಖ್ಯ. ವಾಕಿಂಗ್​​ ಕೂಡ ಒಂದು ರೀತಿಯ ಚಟುವಟಿಕೆಯಾಗಿದ್ದು, ಇದು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.  ಅನೇಕ ಜನರು ಮುಂಜಾನೆ ಅಥವಾ ಮುಸ್ಸಂಜೆ ವಾಕಿಂಗ್ ಹೋಗುವ ಅಭ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಇದೇ ರೀತಿ ಇತ್ತೀಚಿನ ದಿನಗಳಲ್ಲಿ ʼಸೈಲೆಂಟ್ ವಾಕಿಂಗ್ʼ ಕೂಡ ಟ್ರೆಂಡ್ ಆಗಿದೆ. ಟಿಕ್ ಟಾಕ್ ತಾರೆ ಮ್ಯಾಡಿ ಮಾವೋ ಎಂಬವರು ಅರ್ಧ ಗಂಟೆಯ ಮೌನ ನಡಿಗೆಯ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು,  ಈ ವೀಡಿಯೋ ಬಹುಬೇಗ ವೈರಲ್ ಆಗಿ ಟ್ರೆಂಡ್ ಆಗಿದೆ.  ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದೆ.  ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮೌನ ನಡಿಗೆ ತುಂಬಾ ಪ್ರಯೋಜನಕಾರಿ ಇದು ಎಂದು ಹೇಳಲಾಗುತ್ತದೆ. ಹಾಗಾದರೆ ಮೌನ ನಡಿಗೆ ಎಂದರೇನು ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಮೌನ ನಡಿಗೆ ಅಥವಾ ಸೈಲೆಂಟ್ ವಾಕಿಂಗ್ ಎಂದರೇನು?

ಸೈಲೆಂಟ್ ವಾಕಿಂಗ್ ಎಂದರೆ ನಡೆಯುವಾಗ ಯಾವುದೇ ರೀತಿಯ ಕೃತಕ ಶಬ್ದವಿಲ್ಲದೆ ಒಬ್ಬಂಟಿಯಾಗಿ ನಡೆಯುವುದು. ಕೆಲವರು ವಾಕಿಂಗ್, ಜಾಗಿಂಗ್ ಮಾಡುವಂತಹ ಸಂದರ್ಭದಲ್ಲಿ ಕಿವಿಯಲ್ಲಿ ಹೆಡ್ಫೋನ್ ಇಟ್ಟು ಸಂಗೀತವನ್ನು ಆಳಿಸುತ್ತಾ ವಾಕಿಂಗ್ ಮಾಡುತ್ತಾರೆ.  ಆದರೆ ಈ ನಡಿಗೆಯಿಂದ ಯಾವುದೇ ಪ್ರಯೋಜನವಿಲ್ಲ. ಏಕೆಂದರೆ ಇದರಿಂದ ನಿಮ್ಮ ಗಮನವು ವಿಚಲಿತವಾಗುತ್ತದೆ. ಅದಕ್ಕೆ ಬದಲಾಗಿ ಯಾವುದೇ ಸದ್ದುಗದ್ದಲವಿಲ್ಲದೆ 30 ನಿಮಿಷಗಳ ಕಾಲ ಶಾಂತಿಯುತವಾದ ಪರಿಸರದಲ್ಲಿ ಒಂಟಿಯಾಗಿ ಮೌನ ನಡಿಗೆಯನ್ನು ಅಭ್ಯಾಸ ಮಾಡಬೇಕು. ಇದರಿಂದ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಮೌನ ನಡಿಗೆಯ ಪ್ರಯೋಜನಗಳು:

ಮಾನಸಿಕ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ: ದಿ ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ನಿಯತಕಾಲಿಕೆಯಲ್ಲಿ ಪ್ರಕಟವಾದ ಅಧ್ಯಯನವು ಮೌನ ನಡಿಗೆ ಮಾನಸಿಕ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಿದೆ. ಪ್ರಕೃತಿಯ ಮಡಿಲಲ್ಲಿ ಕೆಲವು ನಿಮಿಷಗಳ ಕಾಲ ಶಾಂತವಾಗಿ ಮತ್ತು ಒಂಟಿಯಾಗಿ ನಡೆಯುವುದರಿಂದ ಒತ್ತಡವನ್ನು ಕಡಿಮೆ ಮಾಡಬಹುದು. ಈ ಅಭ್ಯಾಸವನ್ನು ಪ್ರತಿದಿನ ಮಾಡುವುದರಿಂದ ಮಾನಸಿಕ ಕಾಯಿಲೆಗಳು ಬಾರದಂತೆ ನೋಡಿಕೊಳ್ಳಬಹುದು. ಅಲ್ಲದೆ ಇದು ಒತ್ತಡ ಮತ್ತು ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಓಡುವುದಕ್ಕಿಂತ ನಡೆಯುವುದು ಉತ್ತಮ: ತಜ್ಞರು ಏನು ಹೇಳುತ್ತಾರೆ?

ನಿಮ್ಮನ್ನು ನೀವು ಸಂತೋಷವಾಗಿರಿಸಬಹುದು: ಏಕಾಂತವಾದ ಮೌನ ನಡಿಗೆಯು ನಮಗೆ ತುಂಬಾ ಸಂತೋಷವನ್ನು ನೀಡುತ್ತದೆ. ಶಾಂತವಾಗಿ ನಡೆಯುವುದು ಧ್ಯಾನದಂತೆ ಎಂದು  ಮನೋವೈದ್ಯ ಡಾ. ರಫಾತ್ ಡಬ್ಲ್ಯೂ. ಗಿರ್ಗಿಸ್ ಅವರು ಹೇಳುತ್ತಾರೆ.  ವಾಸ್ತವವಾಗಿ ಹೊರಗಿನ ಶಬ್ದಗಳು ಮನಸ್ಸನ್ನು ಪ್ರವೇಶಿಸಿದಾಗ ಒತ್ತಡ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಶಾಂತವಾದ ಸ್ಥಳದಲ್ಲಿ ಮೌನ ನಡಿಗೆಯನ್ನು ಅಭ್ಯಾಸ ಮಾಡುವುದರಿಂದ ಒತ್ತಡವು ನಿವಾರಣೆಯಾಗಿ ಮನಸ್ಸು ಸಂತೋಷವಾಗಿರುತ್ತದೆ.

ಉತ್ತಮ ವ್ಯಾಯಾಮವಾಗಿದೆ: ನೀವು ಯಾವುದೇ ದೈಹಿಕ ಚಟುವಟಿಕೆಗಳನ್ನು ಮಾಡುವಾಗ ನಿಮ್ಮ ಸಂಪೂರ್ಣ ಗಮನವನ್ನು  ಆ ಕೆಲಸದ ಕಡೆಗೆ ನೀಡಿದರೆ ಅದರ ಫಲಿತಾಂಶವು ಉತ್ತಮವಾಗಿರುತ್ತದೆ. ಆದರೆ ನೀವು ಒಂದೇ ಬಾರಿಗೆ 2 ಅಥವಾ ಹೆಚ್ಚಿನ ಕೆಲಸಗಳನ್ನು ಮಾಡುತ್ತಿದ್ದರೆ, ಅಂದರೆ ವಾಕಿಂಗ್ ಮಾಡುವಾಗ ಸಂಗೀತವನ್ನು ಆಲಿಸುವುದು ಅಥವಾ ಮಾತನಾಡಿದರೆ ಅದು ನಿಮ್ಮನ್ನು ಗೊಂದಲಕ್ಕೆ ದೂಡಬಹುದು. ಅದರ ಬದಲಾಗಿ ಯಾವುದೇ ಶಬ್ದವಿಲ್ಲದ ಪ್ರಶಾಂತವಾದ ವಾತಾವರಣದಲ್ಲಿ ಏಕಾಂಗಿಯಾಗಿ ನಡೆಯುವುದರಿಂದ ದೇಹಕ್ಕೆ ಉತ್ತಮ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅಲ್ಲದೆ ಇದು ಉತ್ತಮ ವ್ಯಾಯಾಮವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ