AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ? ಅದರ ಪ್ರಯೋಜನಗಳೇನು?

ಕಾಫಿ ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳಲ್ಲಿ ಒಂದಾಗಿದ್ದು, ಎಲ್ಲಾ ವಯಸ್ಸಿನ ಜನರು ಇದನ್ನು ಕುಡಿಯಲು ಇಷ್ಟಪಡುತ್ತಾರೆ. ಅನೇಕರು ತಮ್ಮ ದಿನವನ್ನು ಆರಂಭಿಸುವುದೇ ಒಂದು ಕಪ್‌ ಕಾಫಿ ಜೊತೆ. ಮಿತವಾದ ಕಾಫಿ ಸೇವನೆ ಆರೋಗ್ಯಕ್ಕೂ ಪ್ರಯೋಜನಕಾರಿ, ಆದರೆ ಅದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡುವುದು ಅಷ್ಟೇ ಮುಖ್ಯ. ಇಲ್ಲದಿದ್ದರೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದು. ಕಾಫಿ ಕುಡಿಯಲು ಸರಿಯಾದ ಸಮಯ ಯಾವುವು ಅದರ ಪ್ರಯೋಜನಗಳೇನು ತಿಳಿದುಕೊಳ್ಳಿ.

ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ? ಅದರ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 22, 2026 | 6:29 PM

Share

ಚಹಾದಂತೆ ಕಾಫಿಯೂ (coffee) ಜನಪ್ರಿಯ ಪಾನೀಯವಾಗಿದ್ದು, ಅನೇಕರಿಗೆ ಕಾಫಿ ಕುಡಿಯೋದು ಅಂದ್ರೆ ಸಖತ್‌ ಇಷ್ಟ. ನಮ್ಮಲ್ಲಿ ಅನೇಕರಿಗೆ ಒಂದು ಕಪ್‌ ಸ್ಟ್ರಾಂಗ್ ಕಾಫಿ ಇಲ್ಲದೆ ದಿನವೇ ಆರಂಭವಾಗೋದಿಲ್ಲ. ಅದರಲ್ಲೂ ಕೆಲವರಂತೂ ಬೆಳಗ್ಗೆ, ಮಧ್ಯಾಹ್ನ, ಸಂಜೆ ಅಂತೆಲ್ಲಾ ದಿನದ ಮೂರು ಹೊತ್ತು ಕಾಫಿ ಕುಡಿತಾರೆ. ಕಾಫಿಯ ಮಿತವಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಆದರೆ ಕಾಫಿ ಕುಡಿಯಲು ಸಮಯದ ಮಿತಿಯೂ ಇದೆ, ಹೊತ್ತಲ್ಲದ ಹೊತ್ತಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಹಾಗಿದ್ದರೆ ಯಾವ ಸಮಯದಲ್ಲಿ ಕಾಫಿ ಕುಡಿದರೆ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ.

ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು?

ಕಾಫಿ ಕುಡಿಯಲು ಉತ್ತಮ ಸಮಯ ಬೆಳಿಗ್ಗೆ 9:30 ರಿಂದ 11:30 ರ ನಡುವೆ. ಈ ಸಮಯದಲ್ಲಿ ದೇಹದ ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾಗಿರುತ್ತವೆ. ಕಾರ್ಟಿಸೋಲ್ ಅನ್ನು ಒತ್ತಡದ ಹಾರ್ಮೋನ್ ಎಂದು ಕರೆಯಲಾಗುತ್ತದೆ. ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾದಾಗ, ಕಾಫಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ. ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಮೆದುಳನ್ನು ಚುರುಕುಗೊಳಿಸುತ್ತದೆ. ಒತ್ತಡದಲ್ಲಿದ್ದಾಗ ಕಾಫಿ ಕುಡಿದರೆ ಕಾರ್ಟಿಸೋಲ್‌ ಮಟ್ಟ ಇನ್ನಷ್ಟು ಹೆಚ್ಚಾಗುತ್ತದೆ. ಮಧ್ಯಾಹ್ನ 2 ರಿಂದ 4 ಗಂಟೆಯ ನಡುವೆ ಕಾಫಿ ಕುಡಿಯುವುದು ಒಳ್ಳೆಯದು. ಇದು ಆಲಸ್ಯವನ್ನು ಕಡಿಮೆ ಮಾಡಲು ಹಾಗೂ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ.

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯಬೇಡಿ: ಅನೇಕ ಜನರು ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ದೇಹದಲ್ಲಿ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ನಿಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ  ಆಮ್ಲೀಯತೆ, ಆಮ್ಲತೆ, ಮಲಬದ್ಧತೆ ಮತ್ತು ಇತರ ಹೊಟ್ಟೆ ಸಂಬಂಧಿತ  ಸಮಸ್ಯೆಗಳಿಗೆ ಕಾರಣವಾಗಬಹುದು.

ಸಂಜೆ ತಡವಾಗಿ ಕಾಫಿ ಕುಡಿಯುವುದು ಒಳ್ಳೆಯದಲ್ಲ: ಸಂಜೆ 4 ಗಂಟೆಯ ನಂತರ ಕಾಫಿ ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಕಾಫಿಯಲ್ಲಿರುವ ಕೆಫೀನ್‌ ಅಂಶ ದೇಹದಲ್ಲಿ 6 ರಿಂದ 8 ಗಂಟೆಗಳ ಕಾಲ ಇರುವುದರಿಂದ ಇದು ನಿದ್ರೆಗೆ ಅಡ್ಡಿಪಡಿಸಬಹುದು. ಅಲ್ಲದೆ ಸಂಜೆ ತಡವಾಗಿ ಕಾಫಿ ಕುಡಿಯುವುದರಿಂದ ನಿಮ್ಮ ಹಸಿವು ಕಡಿಮೆಯಾಗುತ್ತದೆ.

ಇದನ್ನೂ ಓದಿ: ನಾನ್‌ವೆಜ್‌ ಊಟ ಸೇವನೆ ಮಾಡಿದ ತಕ್ಷಣವೇ ಈ ಆಹಾರಗಳನ್ನು ತಿನ್ನಬಾರದು; ಏಕೆ ಗೊತ್ತಾ?

ಹಿತಮಿತ ಕಾಫಿ ಸೇವನೆಯ ಪ್ರಯೋಜನಗಳೇನು?

  • ಕಾಫಿಯಲ್ಲಿರುವ ಕೆಫೀನ್ ಮೆದುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ಆಯಾಸ ಕಡಿಮೆ ಮಾಡುತ್ತದೆ. ಕೆಫೀನ್ ಮನಸ್ಥಿತಿಯನ್ನು ಸುಧಾರಿಸುತ್ತದೆ.
  • ಮಿತವಾದ ಕಾಫಿ ಸೇವನೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಕಾಫಿ ಕುಡಿಯುವುದರಿಂದ ಅಲ್ಝೈಮರ್‌ ಕಾಯಿಲೆಯನ್ನು ಶೇ 65ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳಿವೆ.
  • ಕಾಫಿಯಲ್ಲಿ ಪ್ರಬಲ ಆಂಟಿಆಕ್ಸಿಡೆಂಟ್‌ ಅಂಶಗಳಿದ್ದು, ಇದು ದೇಹದಲ್ಲಿ ಕ್ಯಾನ್ಸರ್‌ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ ಎಂದು ಹೇಳಲಾಗುತ್ತದೆ.
  • ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ.
  • ಮನಸ್ಥಿತಿಯನ್ನು ಸುಧಾರಿಸುತ್ತದೆ.
  • ಖಿನ್ನತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
  • ಮಿತವಾದ ಕಾಫಿ ಸೇವನೆ ತೂಕ ನಿಯಂತ್ರಣಕ್ಕೆ ಸಹಕಾರಿ.
  • ಇದು ಟೈಪ್-2‌ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತಂತೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ