National Sports Day 2023: ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಹಿಂದಿನ ಇತಿಹಾಸವೇನು?

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 26, 2023 | 6:31 PM

ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ನೆನಪಿಗಾಗಿ ಪ್ರತಿವರ್ಷ ಆಗಸ್ಟ್ 29 ರಂದು ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಯು ವಹಿಸುವ ಮಹತ್ತರವಾದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.

National Sports Day 2023: ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಹಿಂದಿನ ಇತಿಹಾಸವೇನು?
ಸಾಂದರ್ಭಿಕ ಚಿತ್ರ
Follow us on

ಒಬ್ಬ ವ್ಯಕ್ತಿಯನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ ಕ್ರೀಡೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ರೀಡೆಗಳು ನಮ್ಮನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುವುದು ಮಾತ್ರವಲ್ಲದೆ ಅದು ನಮ್ಮನ್ನು ಕ್ರೀಯಾಶೀಲರನ್ನಾಗಿಸುತ್ತದೆ ಮತ್ತು ನಮ್ಮನ್ನು ಚುರುಕಾಗಿರಿಸುತ್ತದೆ. ಹಾಗಾಗಿ ಯುವಕರನ್ನು, ಮತ್ತು ಶಾಲಾ ಮಕ್ಕಳನ್ನು ಕ್ರೀಡೆಯತ್ತಾ ಆಕರ್ಷಿತರನ್ನಾಗಿ ಮಾಡಲು ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು (National Sports Day) ರಾಷ್ಟ್ರದ ಕ್ರೀಡಾಪಟುಗಳಿಗೆ ಸಮರ್ಪಿಸಲಾಗಿದೆ. ಈ ದಿನ ದೇಶಕ್ಕೆ ಪ್ರಶಸ್ತಿಗಳನ್ನು ತರವಲ್ಲಿ ಅವರ ಕೊಡುಗೆ ಮತ್ತು ಸಮರ್ಪಣೆಯನ್ನು ಗೌರವಿಸಲಾಗುತ್ತದೆ. ರಾಷ್ಟ್ರೀಯಾ ಕ್ರೀಡಾ ದಿನದ ಆಚರಣೆಯ ಹಿಂದಿನ ಇತಿಹಾಸದ ಕುರಿತ ಮಾಹಿತಿ ಇಲ್ಲಿದೆ.

ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ:

ಹಾಕಿ ಮಾಂತ್ರಿಕ ಹಾಗೂ ಶ್ರೇಷ್ಠ ಕ್ರೀಡಾಪಟು ಧ್ಯಾನ್ ಚಂದ್ ಅವರ ಮಹಾನ್ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ಭಾರತ ಸರ್ಕಾರವು 2012 ರಲ್ಲಿ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಗುತ್ತದೆ. ಈ ದಿನ ಸರ್ಕಾರವು ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ರಾಷ್ಟ್ರೀಯ ಕ್ರೀಡಾ ದಿನದಂದು ಅತ್ಯುತ್ತಮ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇವುಗಳಲ್ಲಿ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ರಾಜೀವ್ ಗಾಂಧಿ ಕೇಲ್ ರತ್ನ, ದ್ರೋಣಾಚಾರ್ಯ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಮುಂತಾದವು ಸೇರಿವೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಯವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ.

ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ:

ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಒಬ್ಬರ ಜೀವನದಲ್ಲಿ ಅದು ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ತಿಳಿಸಲು ಈ ವಿಶೇಷ ದಿನ ಶೈಕ್ಷಣಿಕ ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ:ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಬಗ್ಗೆ ನಿಮಗೆಷ್ಟು ಗೊತ್ತು?

ಮೇಜರ್ ಧ್ಯಾನಚಂದ್ ಅವರ ಬಗ್ಗೆ:

ಮೇಜರ್ ಧ್ಯಾನಚಂದ್ ಅವರು ಅಲಹಬಾದ್ ನಲ್ಲಿ 29 ಆಗಸ್ಟ್ 1905 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪಡೆದ ನಂತರ ಧ್ಯಾನ್ ಚಂದ್ 1922 ರಲ್ಲಿ ಬ್ರಿಟೀಷ್ ಇಂಡಿಯನ್ ಆರ್ಮಿ ರೆಜಿಮೆಂಟಲ್ ಸ್ಕ್ವಾಡ್ ಗೆ ಸೇರುವ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಅಲ್ಲದೆ ಇವರೊಬ್ಬ ಶ್ರೇಷ್ಠ ಹಾಕಿ ಕ್ರೀಡಾಪಟುವಾಗಿದ್ದು, ಅವರನ್ನು ವಿಝಾರ್ಡ್ ಆಫ್ ಹಾಕಿ (ಹಾಕಿ ಮಾಂತ್ರಿಕ) ಎಂದು ಕರೆಯಲಾಗುತ್ತಿತ್ತು. 1928 ರಲ್ಲಿ ಭಾರತವು ತನ್ನ ಮೊದಲ ಒಪಿಂಲಿಕ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಧ್ಯಾನ್ ಚಂದ್ 1926 ರಿಂದ 1949 ರ ವರೆಗೆ ಭಾರತಕ್ಕಾಗಿ ಹಾಕಿ ಆಡಿದರು. ಅವರ ವೃತ್ತಿ ಜೀವನದ ಅವಧಿಯಲ್ಲಿ 1928, 1932, 1936 ರಲ್ಲಿ ಭಾರತಕ್ಕೆ ಒಲಿಂಪಿಕ್ ಪದವನ್ನು ತಂದುಕೊಟ್ಟಿದ್ದಾರೆ. ಅವರು ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 185 ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರು ಹಾಕಿಯಲ್ಲಿ ಎಷ್ಟು ಸಮರ್ಪಿತಾರಾಗಿದ್ದರು ಎಂದರೆ ಅವರು ಬೆಳದಿಂಗಳ ರಾತ್ರಿಯಲ್ಲಿ ಹಾಕಿ ಆಟವನ್ನು ಅಭ್ಯಾಸ ಮಾಡುತ್ತಿದ್ದರು. ಅದು ಅವರಿಗೆ ಧ್ಯಾನ್ ಚಂದ್ ಎಂಬ ಹೆಸರನ್ನು ತಂದುಕೊಟ್ಟಿತು.
ಮೇಜರ್ ಧ್ಯಾನ್ ಚಂದ್ ಅವರು 1956 ರಲ್ಲಿ ಭಾರತೀಯ ಸೇನೆಯ ಪಂಜಾಬ್ ರೆಜಿಮೆಂಟ್ ನಿಂದ ನಿವೃತ್ತರಾಧ ನಂತರ, ಭಾರತ ಸರ್ಕಾರವು ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: