AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ ಯಾವ ರೀತಿಯ ಪಾನೀಯವನ್ನು ಕುಡಿಯಬೇಕು! ಇವು ತೂಕ ಇಳಿಕೆಗೆ ಹೇಗೆ ಸಹಾಯ ಮಾಡಲಿದೆ ಇಲ್ಲಿದೆ ಮಾಹಿತಿ

ನೀವು ದಿನದ ಆರಂಭದಲ್ಲಿ ಕುಡಿಯುವ ಮತ್ತು ತಿನ್ನುವ ಆಹಾರವು, ಒಟ್ಟಾರೆ ನಿಮ್ಮ ಆರೋಗ್ಯ ಮತ್ತು ತೂಕದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ತೂಕ ಇಳಿಸಿಕೊಳ್ಳುವ ಹಂಬಲವಿದ್ದಲ್ಲಿ ಆ ಪ್ರಕ್ರಿಯೆಗೆ ಸಹಾಯ ಮಾಡುವ ಪಾನೀಯಗಳನ್ನು ಕುಡಿಯುವುದು ಬಹಳ ಮುಖ್ಯ. ತೂಕ ಇಳಿಕೆಗೆ ಸಹಾಯ ಮಾಡುಲು, ಮುಂಜಾನೆ ನೀವು ಕುಡಿಯಬಹುದಾದ ಪಾನೀಯಗಳ ಬಗ್ಗೆ ಇಲ್ಲಿದೆ ಮಾಹಿತಿ.

ಮುಂಜಾನೆ ಯಾವ ರೀತಿಯ ಪಾನೀಯವನ್ನು ಕುಡಿಯಬೇಕು! ಇವು ತೂಕ ಇಳಿಕೆಗೆ ಹೇಗೆ ಸಹಾಯ ಮಾಡಲಿದೆ ಇಲ್ಲಿದೆ ಮಾಹಿತಿ
weight loss
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on:May 23, 2023 | 5:44 PM

Share

ನೀವು ದಿನದ ಆರಂಭದಲ್ಲಿ ಕುಡಿಯುವ ಮತ್ತು ತಿನ್ನುವ ಆಹಾರವು ಒಟ್ಟಾರೆ ನಿಮ್ಮ ಆರೋಗ್ಯ ಮತ್ತು ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿರಬಹುದು. ಇದರಲ್ಲಿ ವ್ಯತ್ಯಾಸ ವಾಗುವುದರಿಂದ ತೂಕ ಹೆಚ್ಚಾಗುತ್ತದೆ. ಹಾಗಾಗಿ ಜನರು ತಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಪಡುತ್ತಾರೆ. ಆಹಾರಕ್ರಮದಿಂದ ಹಿಡಿದು ವ್ಯಾಯಾಮಗಳವರೆಗೆ, ಜನರು ತಮ್ಮ ಆಹಾರಕ್ರಮಕ್ಕೆ ಸಹಾಯ ಮಾಡುವ ವಿಭಿನ್ನ ಮಾರ್ಗಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಆದರೆ ಇದೆಲ್ಲದಕ್ಕಿಂತ ಮುಖ್ಯವಾದದ್ದು ಬೆಳಿಗ್ಗೆ ನೀವು ಏನನ್ನು ಸೇವಿಸುತ್ತೀರಿ ಮತ್ತು ಯಾವ ರೀತಿಯ ಪಾನೀಯಗಳನ್ನು ಕುಡಿಯುತ್ತೀರಿ ಎಂಬುದು.

ಅಂದರೆ ನೀವು ದಿನದಲ್ಲಿ ಮೊದಲ ಬಾರಿಗೆ ಸೇವಿಸುವ ಆಹಾರವು ನಿಮ್ಮ ಆರೋಗ್ಯದ ಮೇಲೆ ಮತ್ತು ನಿಮ್ಮ ತೂಕದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ ಆಹಾರವನ್ನು ಕುಡಿಯುವುದು ಅಥವಾ ತಿನ್ನುವುದರ ಜೊತೆಗೆ ದಿನವನ್ನು ಪ್ರಾರಂಭಿಸುವುದು ಉತ್ತಮ ಮಾರ್ಗವಾಗಿದೆ. ತೂಕ ಇಳಿಕೆಗೆ ಜನರು ಬೆಳಿಗ್ಗೆ ಪಾನೀಯದ ಆಯ್ಕೆಯೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸಬಹುದು. ಇವು ನಿಮ್ಮ ತೂಕ ನಷ್ಟಕ್ಕೆ ಸಹಾಯ ಮಾಡಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಅಜ್ವೈನ್ ಬೆರೆಸಿದ ನೀರು:

ಕ್ಯಾರಮ್ ಸೀಡ್ ವಾಟರ್ ಎಂದೂ ಕರೆಯಲ್ಪಡುವ ಇದು ನಿಮ್ಮ ತೂಕ ಇಳಿಕೆಗೆ ಪ್ರಯೋಜನಕಾರಿಯಾದ ಪಾನೀಯವಾಗಿದೆ. ಅಜ್ವೈನ್ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಹೊಟ್ಟೆಯ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಹೊಟ್ಟೆಯ ಸುತ್ತ ಬೇಡದ ಬೊಜ್ಜು ಕರಗುತ್ತಿದ್ದಂತೆ ದೇಹದ ತೂಕ ಕಡಿಮೆಯಾಗುತ್ತದೆ. ಇದನ್ನು ಹೇಗೆ ಮಾಡುವುದೆಂದರೆ, ಕುದಿಯುವ ನೀರಿಗೆ ಒಂದು ಟೀ ಸ್ಪೂನ್ ಅಜ್ವೈನ್ ಸೇರಿಸಿ ಮತ್ತು ಈ ಮಿಶ್ರಣವನ್ನು 3 ರಿಂದ 4 ನಿಮಿಷಗಳ ಕಾಲ ಕುದಿಯಲು ಬಿಡಿ. ಅದನ್ನು ಸೋಸಿ ನೀರು ಕುಡಿಯಿರಿ.

ಆಪಲ್ ಸೈಡರ್ ವಿನೆಗರ್:

ಈ ಪಾನೀಯವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ಆಪಲ್ ಸೈಡರ್ ವಿನೆಗರ್ ಕೇವಲ ತೂಕ ನಷ್ಟಕ್ಕೆ ಸಹಾಯ ಮಾಡುವುದಲ್ಲದೆ, ಇದು ನಿಮ್ಮ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಆದರೆ ಆಪಲ್ ಸೈಡರ್ ವಿನೆಗರ್ ಅನ್ನು ಸೀಮಿತ ಪ್ರಮಾಣದಲ್ಲಿ ಸೇವಿಸುವುದು ಮುಖ್ಯ ಏಕೆಂದರೆ ಅದು ಇತರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ವೈದ್ಯರ ಸಲಹೆ ತೆಗೆದುಕೊಳ್ಳಿ.

ಶುಂಠಿ ಚಹಾ:

ಶುಂಠಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ಅಂತೆಯೇ, ಶುಂಠಿ ಚಹಾ ಕೂಡ ತೂಕ ನಷ್ಟಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆಗಳು ತಿಳಿಸಿವೆ. ನಿಮ್ಮ ಚಹಾಕ್ಕೆ ಸ್ವಲ್ಪ ಜೇನುತುಪ್ಪವನ್ನು ಸೇರಿಸಿ ಕುಡಿಯುವುದು ಇನ್ನೂ ಒಳ್ಳೆಯದು. ಇದು ಅಜೀರ್ಣವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಇದನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯಶಕ್ತಿ ಹೆಚ್ಚುವುದರ ಜೊತೆಗೆ ಹೊಟ್ಟೆಯ ಉಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಉತ್ತಮ ಆರೋಗ್ಯಕ್ಕಾಗಿ ಅಲೋವೆರಾ ಜ್ಯೂಸ್: ಕಹಿಯನ್ನು ಹೇಗೆ ಕಡಿಮೆ ಮಾಡುವುದು ಎಂದು ತಿಳಿಯಿರಿ

ನಿಂಬೆ ನೀರಿನ ಮಿಶ್ರಣ:

ಬೆಳಿಗ್ಗೆ ನಿಂಬೆ ಬೆರೆಸಿದ ನೀರನ್ನು ಕುಡಿಯುವುದರಿಂದ ದೇಹದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ಪಾನೀಯವು ತೂಕ ನಷ್ಟಕ್ಕೆ ಸಹಾಯ ಮಾಡುವುದರ ಜೊತೆಗೆ ಚಯಾಪಚ ಕ್ರಿಯೆಯನ್ನು ಹೆಚ್ಚಿಸುತ್ತದೆ. ನಿಂಬೆಹಣ್ಣಿನಲ್ಲಿರುವ ವಿಟಮಿನ್ ಸಿ ಸಹ ನಿಮ್ಮ ರೋಗನಿರೋಧಕ ಶಕ್ತಿಗೆ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸ ಬೆರೆಸಿದ ನೀರನ್ನು ಕುಡಿಯುವುದರಿಂದ ನಿಮ್ಮ ದೇಹದಿಂದ ವಿಷ ಹೊರಹಾಕಲು ಮತ್ತು ಯಾವುದೇ ರೀತಿಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕೊತ್ತಂಬರಿ ಬೆರೆಸಿದ ನೀರು:

ಈ ಪಾನೀಯವು ತೂಕ ನಷ್ಟಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಜೊತೆಗೆ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ. ಕೊತ್ತಂಬರಿ ಬೀಜ ಅಥವಾ ಧನಿಯಾವನ್ನು ರಾತ್ರಿಯಿಡೀ ನೆನೆಸಿ ಬಳಿಕ ಮರುದಿನ ಬೆಳಿಗ್ಗೆ ಆ ನೀರನ್ನು ಸೊಸಿ ಈ ಪಾನೀಯವನ್ನು ಕುಡಿಯಬಹುದು. ಇದು ಬೇಸಿಗೆ ಕಾಲದಲ್ಲಿ ದೇಹಕ್ಕೂ ಒಳ್ಳೆಯದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 5:44 pm, Tue, 23 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ