International Women’s Day: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಯಾವಾಗ?; ಇದು ಶುರುವಾಗಿದ್ದು ಹೇಗೆ?

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರತಿ ವರ್ಷ ಮಾರ್ಚ್ 8ರಂದು ಆಚರಿಸಲಾಗುತ್ತದೆ. ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಎಲ್ಲೆಡೆ ಈ ದಿನವನ್ನು ಮಹಿಳೆಯರ ವಿಶೇಷ ದಿನವಾಗಿ ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆಯ ಇತಿಹಾಸವೇನು? ಇದು ಶುರುವಾಗಿದ್ದು ಹೇಗೆ? ಈ ದಿನದ ವಿಶೇಷತೆಯೇನು? ಎಂಬಿತ್ಯಾದಿ ವಿಷಯಗಳ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

International Women's Day: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಯಾವಾಗ?; ಇದು ಶುರುವಾಗಿದ್ದು ಹೇಗೆ?
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆImage Credit source: iStock
Follow us
|

Updated on: Mar 06, 2024 | 4:51 PM

ಮಾರ್ಚ್ 8ರಂದು ಪ್ರತಿ ವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day 2024) ಆಚರಿಸಲಾಗುತ್ತದೆ. ಈ ದಿನ, ಅನೇಕ ದೇಶಗಳಲ್ಲಿ ಬೀದಿಗಳು, ಮಾರುಕಟ್ಟೆಗಳು, ಕಚೇರಿಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳು ಗುಲಾಬಿ ಮತ್ತು ನೇರಳೆ ಬಣ್ಣದಲ್ಲಿ ಅಲಂಕರಿಸಲ್ಪಟ್ಟಿರುತ್ತವೆ. ಅಂತಾರಾಷ್ಟ್ರೀಯ ಮಹಿಳಾ ದಿನ ಹೇಗೆ ಶುರುವಾಗಿದ್ದು ಎಂಬುದರ ಬಗ್ಗೆ ಹಲವು ಗೊಂದಲಗಳಿವೆ. ನ್ಯೂಯಾರ್ಕ್‌ನಲ್ಲಿ ಸಮಾಜವಾದಿ ಮಹಿಳೆಯರು ಮತ್ತು ಜವಳಿ ಮಹಿಳಾ ಕಾರ್ಮಿಕರು ಕಡಿಮೆ ಗಂಟೆಗಳ ಕೆಲಸ, ಹೆಚ್ಚಿನ ವೇತನ ಮತ್ತು ಮತದಾನದ ಅವಕಾಶಕ್ಕೆ ಒತ್ತಾಯಿಸಿ ಮೆರವಣಿಗೆ ನಡೆಸಿದಾಗ 1909ರಲ್ಲಿ ಮಹಿಳಾ ದಿನಾಚರಣೆ ಪ್ರಾರಂಭವಾಯಿತು ಎಂದು ಕೆಲವರು ಹೇಳುತ್ತಾರೆ. ಕೆಲವು ಇತರ ಮೂಲಗಳು ಅದರ ಮೂಲವನ್ನು ಫ್ಯಾಸಿಸ್ಟ್ ವಿರೋಧಿ ಮತ್ತು ಸಮಾಜವಾದಿ ಜರ್ಮನ್ ನಾಯಕಿ ಕ್ಲಾರಾ ಜೆಟ್ಕಿನ್​ಗೆ ಕಾರಣವೆಂದು ಹೇಳುತ್ತವೆ.

ಯುರೋಪಿಯನ್ ಕಾರ್ಯಕರ್ತರು ಮಹಿಳೆಯರಿಗೆ ಪ್ರತ್ಯೇಕ ದಿನವನ್ನು ನಿಗದಿ ಮಾಡಬೇಕೆಂದು ಅಭಿಯಾನ ಪ್ರಾರಂಭಿಸಿದರು. ಸಮಾನ ವೇತನ ಮತ್ತು ಕೆಲಸದ ಹಕ್ಕುಗಳಿಗಾಗಿ ಮತದಾನ ಮತ್ತು ಮುನ್ನಡೆಸುವ ಹಕ್ಕನ್ನು ಒತ್ತಾಯಿಸಿದರು. ವರದಿಯ ಪ್ರಕಾರ, 1 ದಶಲಕ್ಷಕ್ಕೂ ಹೆಚ್ಚು ಜನರು ಈ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ವಿಶ್ವಸಂಸ್ಥೆಯು 1975ರಲ್ಲಿ ಈ ಸಂದರ್ಭವನ್ನು ಗುರುತಿಸಲು ಪ್ರಾರಂಭಿಸಿತು.

ಇದನ್ನೂ ಓದಿ: Hormonal Imbalance: ಮಹಿಳೆಯರಲ್ಲಿ ಹಾರ್ಮೋನುಗಳ ಅಸಮತೋಲನದ ಲಕ್ಷಣಗಳಿವು

1945ರಲ್ಲಿ ವಿಶ್ವಸಂಸ್ಥೆಯ ಚಾರ್ಟರ್ ಪುರುಷರು ಮತ್ತು ಮಹಿಳೆಯರ ನಡುವಿನ ಸಮಾನತೆಯ ತತ್ವವನ್ನು ದೃಢೀಕರಿಸುವ ಮೊದಲ ಅಂತಾರಾಷ್ಟ್ರೀಯ ಒಪ್ಪಂದವಾಯಿತು. ನಂತರ, ಮಾರ್ಚ್ 8, 1975ರಂದು ಅಂತಾರಾಷ್ಟ್ರೀಯ ಮಹಿಳಾ ವರ್ಷದಲ್ಲಿ ವಿಶ್ವ ಸಂಸ್ಥೆ ತನ್ನ ಮೊದಲ ಅಧಿಕೃತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು.

ಇತ್ತೀಚಿನ ವರ್ಷಗಳಲ್ಲಿ ಮಹಿಳಾ ದಿನವು ಅನೇಕ ದೇಶಗಳಲ್ಲಿ ಸಾರ್ವಜನಿಕ ರಜಾದಿನವಾಗಿ ಮಾರ್ಪಟ್ಟಿದೆ. ಇನ್ನು ಕೆಲವೆಡೆ ಮಹಿಳೆಯರಿಗೆ ಮಾತ್ರ ರಜಾ ದಿನ ನೀಡಲಾಗುತ್ತದೆ. ರಷ್ಯಾದಂತಹ ಹಲವಾರು ದೇಶಗಳು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಆಚರಿಸುತ್ತವೆ. ಚೀನಾದಂತಹ ಕೆಲವು ರಾಷ್ಟ್ರಗಳಲ್ಲಿ ಈ ಸಂದರ್ಭದಲ್ಲಿ ಅನೇಕ ಮಹಿಳೆಯರು ಕೆಲಸದಿಂದ ಅರ್ಧ ದಿನ ರಜೆ ತೆಗೆದುಕೊಳ್ಳುತ್ತಾರೆ. ಇಟಲಿಯಲ್ಲಿ, ಮಿಮೋಸಾ ಹೂವುಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಅಮೆರಿಕಾದಲ್ಲಿ ಮಾರ್ಚ್ ತಿಂಗಳನ್ನು ಮಹಿಳಾ ಇತಿಹಾಸದ ತಿಂಗಳು ಎಂದು ಆಚರಿಸಲಾಗುತ್ತದೆ. ಪ್ರತಿ ವರ್ಷ ಮಾರ್ಚ್‌ನಲ್ಲಿ ಅಧ್ಯಕ್ಷೀಯ ಘೋಷಣೆಯು ಅಮೇರಿಕನ್ ಮಹಿಳೆಯರು ಮಾಡಿದ ಸಾಧನೆಗಳನ್ನು ಸ್ಮರಿಸುತ್ತದೆ.

ಇದನ್ನೂ ಓದಿ: Women Health: ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ತಲೆನೋವು ಬರಲು ಕಾರಣವೇನು?

ಮಹಿಳಾ ದಿನಾಚರಣೆಯ ಮಹತ್ವ:

ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಲಿಂಗ ಸಮಾನತೆಯ ಸಂದೇಶವನ್ನು ಹರಡಲು ಲಿಂಗ ಪಕ್ಷಪಾತ ಮುಕ್ತ ಸಮಾಜವನ್ನು ನಿರ್ಮಿಸಲು ಆಚರಿಸಲಾಗುತ್ತದೆ. ದಿನವು ಮಹಿಳೆಯರನ್ನು ಆಚರಿಸುತ್ತದೆ ಮತ್ತು ಮಹಿಳೆಯರ ಸಮಾನ ಹಕ್ಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಸಂತಾನೋತ್ಪತ್ತಿ ಹಕ್ಕುಗಳಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್