Small Industries Day 2023: ಭಾರತದಲ್ಲಿ ಸಣ್ಣ ಕೈಗಾರಿಕೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಈ ಆಚರಣೆಯ ಇತಿಹಾಸ ಮತ್ತು ಮಹತ್ವ ಇಲ್ಲಿದೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 28, 2023 | 5:58 PM

ಸಣ್ಣ, ಮಧ್ಯಮ ಮತ್ತು ಗುಡಿ ಕೈಗಾರಿಕೆಗಳು ಭಾರತದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಇವುಗಳು ಅನೇಕ ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುವುದರ ಜೊತೆಗೆ ದೇಶದ ಆರ್ಥಿಕತೆಗೂ ಕೂಡ ತನ್ನ ಕೊಡುಗೆಯನ್ನು ನೀಡುತ್ತಿದೆ. ಮಾತ್ರವಲ್ಲದೆ ಇದು ಉದ್ಯಮಶೀಲತೆಯ ಮೂಲಕ ಆರ್ಥಿಕ ಬೆಳವಣಿಗಯನ್ನು ಉತ್ತೇಜಿಸುವ ಭಾರತೀಯ ಆರ್ಥಿಕತೆಯ ಬೆನ್ನೆಲುಬಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಆರ್ಥಿಕತೆಗೆ ಸಣ್ಣ ಕೈಗಾರಿಕೆಗಳ ಕೊಡುಗೆಯನ್ನು ಗುರುತಿಸುವ ಉದ್ದೇಶದಿಂದ ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 30 ರಂದು ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿಂದಿನ ಇತಿಹಾಸವೇನು ಎಂಬುದನ್ನು ನೋಡೋಣ.

Small Industries Day 2023: ಭಾರತದಲ್ಲಿ ಸಣ್ಣ ಕೈಗಾರಿಕೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಈ ಆಚರಣೆಯ ಇತಿಹಾಸ ಮತ್ತು ಮಹತ್ವ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us on

ಭಾರತದಲ್ಲಿ ಅದೆಷ್ಟೋ ಸಣ್ಣ, ಮಧ್ಯಮ ಮತ್ತು ಗುಡಿ ಕೈಗಾರಿಕೆಗಳಿವೆ. ಇವುಗಳು ಅನೇಕ ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುವುದರ ಜೊತೆಗೆ ದೇಶದ ಆರ್ಥಿಕತೆಗೂ ಕೂಡ ತನ್ನ ಕೊಡುಗೆಯನ್ನು ನೀಡುತ್ತಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ಉತ್ತಮ ಗುಣಮಟ್ಟದ ಸರಕುಗಳನ್ನು ಉತ್ಪಾದಿಸುತ್ತಿವೆ. ಇದು ನಗರ ಮತ್ತು ಗ್ರಾಮೀಣ ಪ್ರದೇಶದ ಹಲವಾರು ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುತ್ತಿದೆ. ಮುಖ್ಯವಾಗಿ ಇದು ದೇಶದ ಆರ್ಥಿಕತೆಗೆ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಹಾಗಾಗಿ ರಾಷ್ಟ್ರದ ಆರ್ಥಿಕತೆಗೆ ಸಣ್ಣ ಕೈಗಾರಿಕೆಗಳ ಕೊಡುಗೆಯನ್ನು ಗುರುತಿಸುವ ಉದ್ದೇಶದಿಂದ ಹಾಗೂ ಯುವ ಉದ್ಯಮಿಗಳು ತಮ್ಮದೇ ಆದ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 30ರಂದು ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯನ್ನು ಯಾವಾಗ ಪ್ರಾರಂಭಿಸಲಾಯಿತು ಅದರ ಹಿನ್ನೆಲೆ ಏನೆಂಬುದನ್ನು ನೋಡೋಣ.

ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನದ ಇತಿಹಾಸ:

ಆಗಸ್ಟ್ 30, 2000ನೇ ಇಸವಿಯಲ್ಲಿ ಆಗಿನ ಕೇಂದ್ರ ಸರ್ಕಾರವು ಭಾರತದಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಸಮಗ್ರ ನೀತಿ ಪ್ಯಾಕೇಜ್​​​ನ್ನು ಸಿದ್ಧಪಡಿಸಿತು. ಅದೇ ದಿನವನ್ನು ಸಣ್ಣ ಕೈಗಾರಿಕೆಗಳ ದಿನವನ್ನಾಗಿ ಆಚರಿಸಲು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯವು ನಿರ್ಧರಿಸಿತು. ಇದರ ನಂತರ ಮೊದಲ ಬಾರಿಗೆ ಆಗಸ್ಟ್ 30, 2001ರಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯವು ನವದೆಹಲಿಯಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿನ ಉದ್ಯಮಿಗಳಿಗಾಗಿ ಸಮ್ಮೇಳನವನ್ನು ಆಯೋಜಿಸಿತು. ಮತ್ತು ಈ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿಗಳನ್ನು ಕೂಡಾ ನೀಡಲಾಯಿತು. ಅಂದಿನಿಂದ ಪ್ರತಿವರ್ಷ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗಾರಿಕಾ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಹಿಂದಿನ ಇತಿಹಾಸವೇನು?

ಈ ವಿಶೇಷ ದಿನದ ಗುರಿ ಮತ್ತು ಉದ್ದೇಶ:

ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನದ ಮುಖ್ಯ ಉದ್ದೇಶವು ರಾಷ್ಟ್ರಾದ್ಯಂತ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸುವುದು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸುವುದಾಗಿದೆ. ಅಲ್ಲದೆ ಈ ದಿನವು ಭಾರತದಲ್ಲಿ ಸಣ್ಣ ಕೈಗಾರಿಕೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಮಹತ್ವದ್ದಾಗಿದೆ.

ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ನಡಸುತ್ತಿರುವ ಮತ್ತು ಅವುಗಳಲ್ಲಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಲು, ಅವರಿಗೆ ಉತ್ತಮ ವೇದಿಕೆಯನ್ನು ಒದಗಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಮತ್ತು ಯುವ ಉದ್ಯಮಿಗಳು ತಮ್ಮದೇ ಆದ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹವನ್ನು ನೀಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: