AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದರೆ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದರ್ಥ

ಮಕ್ಕಳನ್ನು ಬೆಳೆಸುವುದು ಕಷ್ಟದ ಕೆಲಸ. ಈಗಿನ ಮಕ್ಕಳಿಗೆ ಪೋಷಕರು ಹಾಗೂ ಶಿಕ್ಷಕರು ಬೈಯುವಂತಿಲ್ಲ. ಮೊಬೈಲ್ ಕೊಡಲಿಲ್ಲವೆಂದು, ಶಿಕ್ಷಕರು ಬೈದರೆಂದು, ಗೆಳೆಯ ದೂರಾದನೆಂದು ಹೀಗೆ ಸಣ್ಣ ಪುಟ್ಟ ವಿಷಯಗಳಿಗೆ ಆತ್ಮಹತ್ಯಾಯಂತಹ ಆಲೋಚನೆಗಳನ್ನು ಮಾಡುತ್ತಾರೆ. ಸಣ್ಣ ಸಣ್ಣ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಕೊನೆಯ ಪರಿಹಾರ ಎನ್ನುವ ತೀರ್ಮಾನಕ್ಕೆ ಬರುತ್ತಾರೆ. ಒಂದು ವೇಳೆ ಹದಿಹರೆಯದ ವಯಸ್ಸಿನ ಮಕ್ಕಳಲ್ಲಿ ಈ ಲಕ್ಷಣಗಳು ಕಂಡು ಬಂದರೆ ಈ ಬಗ್ಗೆ ಪೋಷಕರು ಜಾಗೃತರಾಗುವುದು ಮುಖ್ಯ. ಕೆಟ್ಟ ಅಲೋಚನೆಗಳು ಕಂಡು ಬಂದರೆ ಆ ತಕ್ಷಣವೇ ಸೂಕ್ತ ಮನೋವೈದ್ಯರನ್ನು ಭೇಟಿ ನೀಡುವುದು ಮುಖ್ಯ, ಈ ಕುರಿತಾದ ಮಾಹಿತಿ ಇಲ್ಲಿದೆ.

ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದರೆ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದರ್ಥ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Mar 17, 2025 | 12:52 PM

Share

ಇತ್ತೀಚೆಗಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಂದಲೇ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ (World Health Organization) ಯ ಅಂಕಿಅಂಶಗಳ ಪ್ರಕಾರ, ಪ್ರತಿ ವರ್ಷ ವಿಶ್ವದಲ್ಲಿ ಸುಮಾರು 7.20 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಭಾರತದಲ್ಲಿ ಈ ಸಂಖ್ಯೆಯೂ 1.75 ಲಕ್ಷದವರೆಗೆ ದಾಟಿದೆ. ಇದರ ಪ್ರಕಾರ, ಜಾಗತಿಕ ಮಟ್ಟದಲ್ಲಿ, ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಓದುತ್ತಿರುವ ಮಕ್ಕಳು ಹಾಗೂ ಹದಿಹರೆಯದ ಮಕ್ಕಳಲ್ಲಿ ಆತ್ಮಹತ್ಯೆಯಂತಹ ಆಲೋಚನೆಗಳನ್ನು ಕಂಡು ಹಿಡಿಯುವುದು ಹೇಗೆ? ಚೈಲ್ಡ್‌ಲೈನ್ ನಿರ್ದೇಶಕ ಶಾನ್ ಫ್ರಿಯೆಲ್ (Childline Director Shaun Friel) ಅವರು, ಮಕ್ಕಳಲ್ಲಿ ಆತ್ಮಹತ್ಯೆಯ ಆಲೋಚನೆಗಳು ಕಂಡು ಬಂದರೆ, ಈ ಮೂಲಕ ನೀವು ಅದನ್ನು ಕಂಡುಹಿಡಿಯಬಹುದು ಎಂದಿದ್ದಾರೆ.

ಮಕ್ಕಳಲ್ಲಿ ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳನ್ನು ಕಂಡು ಹಿಡಿಯುವುದು ಹೇಗೆ?

  • ಓದು, ಶಾಲಾ ಚಟುವಟಿಕೆಯಲ್ಲಿ ಯಾವುದೇ ಆಸಕ್ತಿ ಇಲ್ಲದೇ ಇರುವುದು. ದಿನ ಕಳೆಯುತ್ತ ಹೋದಂತೆ ಶಾಲಾ ತೊಡಗುವಿಕೆಯಲ್ಲಿ ಕಳಪೆ ಮಟ್ಟದ ಪ್ರದರ್ಶನ.
  • ಕುಟುಂಬದಿಂದ ದೂರವಿರುವುದು, ಸ್ನೇಹಿತರನ್ನು ಭೇಟಿಯಾಗುವುದನ್ನು ನಿಲ್ಲಿಸುವುದು, ತಮಗೆ ಇಷ್ಟವಾದ ಕೆಲಸಗಳನ್ನು ಮಾಡುವುದನ್ನು ನಿಲ್ಲಿಸಬಹುದು.
  • ರಾತ್ರಿಯಲ್ಲಿ ಕಡಿಮೆ ನಿದ್ರೆ ಮಾಡುವುದು ಅಥವಾ ಬೆಳಿಗ್ಗೆ ಹೊತ್ತು ಹೆಚ್ಚು ನಿದ್ರಿಸುವುದು.
  • ಯಾವುದೋ ವಿಷಯದ ಬಗ್ಗೆ ಹೆಚ್ಚು ಯೋಚಿಸುತ್ತಲೇ ಇರುವುದು. ದುಃಖ, ಖಿನ್ನತೆ ಅಥವಾ ಬೇಜಾರಿನಿಂದ ಕೂಡಿದ ಭಾವನೆಯ ಬಗ್ಗೆಯೇ ಹೆಚ್ಚು ಮಾತನಾಡುವುದು.
  • ಮಾದಕ ದ್ರವ್ಯ ಸೇವನೆ ಅಥವಾ ಮದ್ಯಪಾನದಂತಹ ಅಪಾಯಕಾರಿ ಅಭ್ಯಾಸಗಳಲ್ಲಿ ತೊಡಗಿಕೊಳ್ಳುವುದು.
  • ತುಂಬಾ ಹಸಿವು ಇಲ್ಲವಾದರೆ ಕಡಿಮೆ ಹಸಿವಿನ ಭಾವನೆಯನ್ನು ಹೊಂದಿರುವುದು.
  • ಸ್ವಯಂ ಕಾಳಜಿ ವಹಿಸುವುದಿಲ್ಲ. ಉದಾಹರಣೆಗೆ ಸ್ನಾನ, ಊಟ ತಿಂಡಿಯ ಬಗ್ಗೆ ನಿರ್ಲಕ್ಷ್ಯ ವಹಿಸುವುದು, ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ.
  • ಅವಮಾನ ಅಥವಾ ಅಪರಾಧಿ ಭಾವನೆಯೂ ಪದೇ ಪದೇ ಕಾಡುವುದು. ಕುಟುಂಬ ಅಥವಾ ಸ್ನೇಹಿತರಿಗೆ ತಾನು ಹೊರೆ ಎಂದು ಭಾವಿಸುವುದು..
  • ಜೀವ ಕಳೆದುಕೊಳ್ಳುವುದರ ಬಗ್ಗೆ ಹೆಚ್ಚು ಮಾತನಾಡುವುದು, ಏನನ್ನಾದರೂ ಮಾತನಾಡುವಾಗ ಇದ್ದಕ್ಕಿದ್ದಂತೆ ಮೌನವಹಿಸುವುದು.
  • ತಮ್ಮ ಹೆಚ್ಚಿನ ಸಮಯವನ್ನು ಒಂಟಿಯಾಗಿಯೇ ಕಳೆಯಲು ಇಷ್ಟ ಪಡುವುದು.
  • ಗೂಗಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ ಎನ್ನುವ ಬಗ್ಗೆ ಹೆಚ್ಚು ಹುಡುಕುವುದು.
  • ನಾನು ಸಾಯುವುದು ಒಳ್ಳೆಯದು, ನನಗೆ ಬದುಕಲು ಇಷ್ಟವಿಲ್ಲ ಅಥವಾ ಯಾರೂ ನನ್ನನ್ನು ಮಿಸ್ ಮಾಡಿಕೊಳ್ಳುವುದಿಲ್ಲ ಎಂಬಂತಹ ವಿಷಯಗಳನ್ನು ಪದೇ ಪದೇ ಹೇಳುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ