AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ಪ್ರತಿದಿನ ಮಾಡುವ ‘ರನ್ನಿಂಗ್ ಮತ್ತು ಜಂಪಿಂಗ್​’ ವ್ಯಾಯಾಮ ನಿಮ್ಮ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕ

ಜಂಪಿಂಗ್ ಮತ್ತು ರನ್ನಿಂಗ್ ಎರಡೂ ವ್ಯಾಯಾಮ ಕೂಡಾ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಹಾಗಿರುವಾಗ ಪ್ರತಿನಿತ್ಯ ವ್ಯಾಯಾಮ ಮಅಡಿ ನಿಮ್ಮ ದೇಹವನ್ನು ಸದೃಢವಾಗಿರಿಸಿಕೊಳ್ಳಿ.

Weight Loss: ಪ್ರತಿದಿನ ಮಾಡುವ ‘ರನ್ನಿಂಗ್ ಮತ್ತು ಜಂಪಿಂಗ್​’ ವ್ಯಾಯಾಮ ನಿಮ್ಮ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕ
ಸಂಗ್ರಹ ಚಿತ್ರ
TV9 Web
| Updated By: preethi shettigar|

Updated on: Oct 23, 2021 | 9:05 AM

Share

ನಿಮ್ಮ ದೇಹವನ್ನು ಫಿಟ್ ಆಗಿರಿಸಲು ನೀವು ಯಾವಾಗಲೂ ಯೋಚಿಸುತ್ತೀರಿ. ದೇಹವು ಫಿಟ್ ಆಗಿದ್ದರೆ ರೋಗಗಳ ಅಪಾಯ ಕೂಡಾ ಕಡಿಮೆ ಜತೆಗೆ ಆರೋಗ್ಯವೂ ಸುಧಾರಿಸುತ್ತದೆ. ಹೀರುವಾಗ ನಿಮ್ಮ ದೇಹದ ತೂಕ ಇಳಿಸಿಕೊಳ್ಳಲು ನೀವು ಪ್ರಯತ್ನಿಸುತ್ತಿದ್ದರೆ ವಾಕಿಂಗ್, ರನ್ನಿಂಗ್ ಮತ್ತು ಜಂಪಿಂಗ್ ಸಹಾಯಕ. ಇದರ ಜೊತೆ ಜೊತೆಯಲ್ಲಿ ನಿಯಮಿತವಾದ ಇನ್ನಿತರ ವ್ಯಾಯಾಮ ಕೂಡಾ ಮುಖ್ಯ. ಹೀಗಿರುವಾಗ ಪ್ರತಿನಿತ್ಯ ರನ್ನಿಂಗ್​ ಮತ್ತು ಜಂಪಿಂಗ್​ ಮಾಡುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ತಿಳಿಯೋಣ.

ಸ್ನಾಯುಗಳನ್ನು ಬಲಪಡಿಸುತ್ತದೆ ಜಂಪಿಂಗ್ ಮತ್ತು ರನ್ನಿಂಗ್ ಎರಡೂ ಕೂಡಾ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಇದು ನಿಮ್ಮ ಬೆನ್ನು ಹುರಿ, ಸೊಂಟ, ಕೈಕಾಲುಗಳಿಗೆ ಸಂಬಂಧಿಸಿದೆ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಹಾಯಕವಾಗಿದೆ. ಜತೆಗೆ ನಿಮ್ಮ ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸಿಕೊಳ್ಳಲು ಸಹಾಯಕವಾಗಿದೆ.

ಹೆಚ್ಚುವರಿ ಕ್ಯಾಲೊರಿಗಳನ್ನು ಕರಗಿಸುತ್ತದೆ ಜಂಪಿಂಗ್ ಮತ್ತು ರನ್ನಿಂಗ್​ನಿಂದ ದೇಹದಲ್ಲಿ ಹೆಚ್ಚುವರಿ ಕೊಬ್ಬ ಕರಗುತ್ತದೆ. ಜತೆಗೆ ದೇಹದ ಫಿಟ್ನೆಸ್ ಕಾಯ್ದುಕೊಳ್ಳಬಹುದು. ನೀವು ಹೆಚ್ಚಿನ ತೂಕ ಹೊಂದಿದ್ದರೆ, ಪ್ರತಿನಿತ್ಯ ಜಂಪಿಂಗ್ ಮತ್ತು ರನ್ನಿಂಗ್ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳುವುದು ಉತ್ತಮ.

ಪ್ರಯೋಜನಗಳು ಜಂಪಿಂಗ್​ನಿಂದ ದೇಹದ ಕೊಬ್ಬು ಕರಗಿಸುವುದರ ಜತೆಗೆ ಇದು ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದರಿಂದ ಪಾದಗಳ ಉರಿಯೂತ, ಸೊಂಟ ನೋವುಗಳಂತಹ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳಬಹುದು. ಜಂಪಿಂಗ್ ಬದಲಿಗೆ ನೀವು ಸ್ಕಿಪ್ಪಿಂಗ್ ಕೂಡಾ ಮಾಡಬಹುದು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನವನ್ನು ನೀಡುತ್ತದೆ. ಪ್ರತಿನಿತ್ಯ 2 ರಿಂದ 3 ನಿಮಿಷದವರೆಗೆ ಸ್ಕಿಪ್ಪಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು.

ರನ್ನಿಂಗ್ ಮತ್ತು ಜಂಪಿಂಗ್ ಮಾಡುವುದರಿಂದ ಹೆಚ್ಚು ಬೆವರುತ್ತೀರಿ. ಇದರಿಂದ ದೇಹದಲ್ಲಿನ ಕಲ್ಮಶಗಳು ಹೊರಹೋಗಲು ಸಹಾಯಕವಾಗಿದೆ. ಚರ್ಮದ ಮೇಲಿನ ಧೂಳು, ಮಾಲಿನ್ಯಗಳು ಬೆವರಿನ ಮೂಲಕ ಹೊರಹೋಗುತ್ತವೆ. ಜತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

Weight Loss: ದೇಹದ ತೂಕ ಇಳಿಸಿಕೊಳ್ಳಲು ಸರಳ ಮಾರ್ಗಗಳು

Weight Loss: ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗ ಏಲಕ್ಕಿ ನೀರು ಸೇವನೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ