AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Mental Health Day 2023: ಮಾನಸಿಕ ಆರೋಗ್ಯ ದಿನವನ್ನು ಏಕೆ ಆರಿಸಲಾಗುತ್ತದೆ? ಅದರ ಇತಿಹಾಸ, ಮಹತ್ವ ಇಲ್ಲಿದೆ 

ಮಾನಸಿಕ ಅಸ್ವಸ್ಥತೆಗಳು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ, ಇದು ನಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮವನ್ನು ಬೀರಬಹುದು. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಖಿನ್ನತೆ ಹಾಗೂ ಒತ್ತಡ ಇತ್ಯಾದಿ ಮಾನಸಿಕ ಆರೋಗ್ಯ ಸಂಬಂಧಿ ಕಾಯಿಲೆಗಳ ಪ್ರಕರಣಗಳು ಹೆಚ್ಚು ಕೇಳಿ ಬರುತ್ತಿವೆ. ಹಾಗಾಗಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಲು ಹಾಗೂ ಅದರ ಬಗ್ಗೆ ಶಿಕ್ಷಣ ಮತ್ತು ಜಾಗೃತಿಯನ್ನು ಮೂಡಿಸುವ  ಉದ್ದೇಶದಿಂದ ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. 

World Mental Health Day 2023: ಮಾನಸಿಕ ಆರೋಗ್ಯ ದಿನವನ್ನು ಏಕೆ ಆರಿಸಲಾಗುತ್ತದೆ? ಅದರ ಇತಿಹಾಸ, ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 09, 2023 | 5:34 PM

Share

ಇಂದಿನ ಕಾಲಘಟ್ಟದಲ್ಲಿ ಖಿನ್ನತೆ, ಆತಂಕ ಮತ್ತು ಒತ್ತಡ ಮುಂತಾದ ಮಾನಸಿಕ ಆರೋಗ್ಯ (Mental Health) ಸಂಬಂಧಿ ಸಮಸ್ಯೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಮಾನಸಿಕ ಅಸ್ವಸ್ಥತೆಗಳು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ, ಇದು ನಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮವನ್ನು ಬೀರಬಹುದು. ಅನೇಕ ಜನರು ಖಿನ್ನತೆ ಮತ್ತು ಒತ್ತಡವನ್ನು ಆರೋಗ್ಯ ಸಂಬಂಧಿ ಸಮಸ್ಯೆಗಳೆಂದು ಪರಿಗಣಿಸುವುದಿಲ್ಲ ಹಾಗೂ ಅದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ಸಮಸ್ಯೆಗಳು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಇಂದು ಬದಲಾಗುತ್ತಿರುವ ಜೀವನಶೈಲಿಯ ನಡುವೆ ಮಾನಸಿಕ ಆರೋಗ್ಯ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಪ್ರತಿ ವರ್ಷ ನೂರಾರು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ  ಮಾನಸಿಕ ಆರೋಗ್ಯದ ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಶಿಕ್ಷಣ ಮತ್ತು ಜಾಗೃತಿಯನ್ನು ಮೂಡಿಸಲು ಪ್ರತಿವರ್ಷ ಅಕ್ಟೋಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಯಾವಾಗ ಪ್ರಾರಂಭವಾಯಿತು, ಅದರ ಪ್ರಾಮುಖ್ಯತೆ ಏನು ಎಂಬುದನ್ನು ನೋಡೋಣ.

ವಿಶ್ವ ಮಾನಸಿಕ ಆರೋಗ್ಯ ದಿನದ ಇತಿಹಾಸ:

ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ (WFMH) ಸಂಸ್ಥೆಯ ಉಪಕ್ರಮದ ಮೇರೆಗೆ ಅಕ್ಟೋಬರ್ 10, 1992 ರಲ್ಲಿ ವಿಶ್ವಸಂಸ್ಥೆಯು ವಿಶ್ವ ಮಾನಸಿಕ ಆರೋಗ್ಯ  ದಿನವನ್ನು ಆಚರಿಸಲು ಪ್ರಾರಂಭಿಸಿತು.  ಜಾಗತಿಕವಾಗಿ ಈ ದಿನವನ್ನು ಆಚರಿಸುವ ಮುಖ್ಯ  ಉದ್ದೇಶವು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ಮಾನಸಿಕ ಆರೋಗ್ಯ ಸಂಬಂಧಿತ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಶಿಕ್ಷಣ ನೀಡುವುದಾಗಿದೆ.

ಇದನ್ನೂ ಓದಿ: ಮಾನಸಿಕ ಆರೋಗ್ಯ ವಿಮೆ ಮಾಡಿಸುತ್ತೀರಾ? ಈ ವಿಷಯಗಳು ನಿಮಗೆ ತಿಳಿದಿರಲಿ

ವಿಶ್ವ ಮಾನಸಿಕ ಆರೋಗ್ಯ  ದಿನದ ಆಚರಣೆಯ ಮಹತ್ವ:

ಅನೇಕ ಜನರು ಖಿನ್ನತೆ ಮತ್ತು ಒತ್ತಡವನ್ನು ಸಣ್ಣ ಸಮಸ್ಯೆ ಎಂದು ಪರಿಗಣಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ತುಂಬಾ ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಇದರಿಂದಾಗಿ ಪ್ರತಿ ವರ್ಷ ನೂರಾರು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ  ಉತ್ತಮ ಮಾನಸಿಕ ಆರೋಗ್ಯದ ಪ್ರಾಮುಖ್ಯತೆ ಮತ್ತು ಮಾನಸಿಕ ಆರೋಗ್ಯವನ್ನು ರಕ್ಷಿಸುವ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಉತ್ತಮ ಕಾಳಜಿ ವಹಿಸುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಮಾನಸಿಕ ಆರೋಗ್ಯ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ.  ಈ ವಿಶೇಷ  ದಿನದ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಮತ್ತು ಈ ಸಮಸ್ಯೆಗಳನ್ನು  ನಿರ್ವಹಿಸುವ ಮತ್ತು ತಡೆಗಟ್ಟುವ ವಿವಿಧ ವಿಧಾನಗಳ ಕುರಿತು ಸೆಮಿನಾರ್, ಕಾರ್ಯಗಾರಗಳು, ಕಾರ್ಯಕ್ರಮಗಳು ಮತ್ತು ಸಮ್ಮೇಳನಗಳಂತಹ ವಿವಿಧ ಚಟುವಟಟಿಕೆಗಳನ್ನು ಜಾಗತಿಕವಾಗಿ ನಡೆಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ