Fearful Memories: ಭಯಾನಕ ನೆನಪುಗಳು ನಮ್ಮನ್ನು ಪದೇ ಪದೇ ಕಾಡುತ್ತವೆ ಏಕೆ? ವಿಜ್ಞಾನಿಗಳು ಏನಂತಾರೆ?

ಭಯ ಎಂದರೆ ಹಾಗೆ ಸಂತೋಷದ ನೆನಪುಗಳು ಮನಸ್ಸಿನಲ್ಲಿ ಉಳಿಯುವುದಕ್ಕಿಂತ ಆಳವಾಗಿ ಈ ಭಯವು ಉಳಿದುಬಿಡುತ್ತದೆ. ಎಷ್ಟೇ ವರ್ಷ ಕಳೆದರೂ ಆ ಆಘಾತಕಾರಿ ಕ್ಷಣದ ನೆನಪು ಮರುಕಳಿಸುತ್ತಲೇ ಇರುತ್ತವೆ.

Fearful Memories: ಭಯಾನಕ ನೆನಪುಗಳು ನಮ್ಮನ್ನು ಪದೇ ಪದೇ ಕಾಡುತ್ತವೆ ಏಕೆ? ವಿಜ್ಞಾನಿಗಳು ಏನಂತಾರೆ?
Memories
Follow us
TV9 Web
| Updated By: ನಯನಾ ರಾಜೀವ್

Updated on: Sep 06, 2022 | 11:02 AM

ಭಯ ಎಂದರೆ ಹಾಗೆ ಸಂತೋಷದ ನೆನಪುಗಳು ಮನಸ್ಸಿನಲ್ಲಿ ಉಳಿಯುವುದಕ್ಕಿಂತ ಆಳವಾಗಿ ಈ ಭಯವು ಉಳಿದುಬಿಡುತ್ತದೆ. ಎಷ್ಟೇ ವರ್ಷ ಕಳೆದರೂ ಆ ಆಘಾತಕಾರಿ ಕ್ಷಣದ ನೆನಪು ಮರುಕಳಿಸುತ್ತಲೇ ಇರುತ್ತವೆ. ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ.

ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.

ಭಯದ ನೆನಪುಗಳು ನಮ್ಮ ಮನಸ್ಸಿನಲ್ಲಿ ಪದೇ ಪದೇ ಏಕೆ ಮೂಡುತ್ತವೆ ಎಂಬುದನ್ನು ಅಧ್ಯಯನ ತಿಳಿಸಿದೆ. ಈಗ, ಟುಲೇನ್ ಯೂನಿವರ್ಸಿಟಿ ಸ್ಕೂಲ್ ಆಫ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಮತ್ತು ಟಫ್ಟ್ಸ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರು ಒಂದು ಹೆಜ್ಜೆ ಮುಂದಿರಿಸಿದ್ದಾರೆ.

ಅವರು ನಮ್ಮ ಮೆದುಳಿನ ಭಾವನಾತ್ಮಕ ಕೇಂದ್ರದಲ್ಲಿ ಭಯದ ನೆನಪುಗಳ ರಚನೆಯನ್ನು ಅಧ್ಯಯನ ಮಾಡುತ್ತಿದ್ದಾರೆ. ಒತ್ತಡದ ನ್ಯೂರೋ ಟ್ರಾನ್ಸ್​ಮಿಟರ್ ನೋರ್​ಪೈನ್​ಪ್ರಿನ್ ಮೆದುಳಿನಲ್ಲಿ ಭಯವನ್ನು ಹುಟ್ಟುಹಾಕುತ್ತದೆ.

ಅಮಿಗ್ಡಾಲಾದಲ್ಲಿ ಮೆದುಳಿನ ತರಂಗವು ಸಿಡಿಯುವ ಮಾದರಿಯಲ್ಲಿದ್ದಾಗ ಭಯ ಸೃಷ್ಟಿಯಾಗುತ್ತದೆ, ಬಳಿಕ ವಿಶ್ರಾಂತಿ ಸ್ಥಿತಿಗೆ ಪ್ರಚೋದಿಸುತ್ತದೆ. ಹೀಗಾಗಿ ಆ ಶಾಕ್​ನಿಂದ ಅಷ್ಟು ಸುಲಭವಾಗಿ ಹೊರಬರಲು ಸಾಧ್ಯವಾಗುವುದಿಲ್ಲ.

ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಎಂದರೇನು ಎಂದು ಹೇಳಲು ಸಾರ್ದಯವಿಲ್ಲ, ಆದರೆ ಅದನ್ನು ಒಂದಿಲ್ಲೊಂದು ಸಂದರ್ಭದಲ್ಲಿ ನಾವು ಅನುಭವಿಸುತ್ತೇವೆ. ಇದು ಮನಸ್ಸಿನ ನಕಾರಾತ್ಮಕ ಭಾವನೆ.

ಭಯ ಎಂದರೇನು?

ನಮ್ಮ ಶಕ್ತಿಗೆ ಮೀರಿದ ಅಸಂಭಾವ್ಯ ವಿಚಾರವು ನಮ್ಮ ಮನಸ್ಸಿಗೆ ಹೊಕ್ಕಿತೆಂದರೆ ಆಗ ನಮ್ಮಲ್ಲಿ ನಾವು ಏನೋ ಕಲ್ಪಿಸಿಕೊಳ್ಳುತ್ತೇವೆ. ಇಂತಹ ವಾಸ್ತವವಲ್ಲದ ಕಲ್ಪನೆಗಳಿಗೆ ಒಂದು ಸ್ಪಷ್ಟ ಚಿತ್ರಣವನ್ನು ಸೃಷ್ಟಿಸಿಕೊಂಡು ನೋಡಲು

ಶುರು ಮಾಡುತ್ತೇವೆ. ಆಗ ಮನದಲ್ಲಿ ಸಾವಕಾಶವಾಗಿ ಭಯವು ಆವರಿಸಕೊಳ್ಳತೊಡಗುತ್ತದೆ. ನಾವು ಸೃಷ್ಟಿಸಿಕೊಂಡ ಕಾಲ್ಪನಿಕ ಚಿತ್ರಣವು ಕ್ರಮೇಣ ತನ್ನ ಬಹಳಷ್ಟು ಬಾರಿ ಭಯವು ನಮ್ಮ ಭ್ರಮೆಯೇ ಆಗಿರುತ್ತದೆ. ಇಲ್ಲದ್ದನ್ನು ಇದ್ದ ಹಾಗೆ ತಿಳಿದುಕೊಳ್ಳುತ್ತೇವೆ. ಇದು ಒಂದು ಭಾವನಾತ್ಮಕ ಅನುಭವ.

ಮನಸ್ಸಿನಲ್ಲಿ ಆತಂಕ ಭಾವ ಸೃಷ್ಟಿ ಮಾಡಿ, ಭಾವನಾತ್ಮಕ ಅಡಚಣೆಯನ್ನುಂಟು ಮಾಡುತ್ತದೆ. ಭಯದಿಂದಾಗಿ ನಮ್ಮ ಜಾಗೃತ ಮನಸ್ಸು ನೋವನ್ನು ಅನುಭವಿಸುತ್ತದೆ. ನೋವಿನಿಂದ ಹೊರಬರಲು ನಮ್ಮ ಮನಸ್ಸು ಒದ್ದಾಡುತ್ತದೆ. ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ಎಚ್ಚರಿಕೆಯ ಸಂಕೇತವಾಗಿ ವರ್ತಿಸುತ್ತದೆ. ಇಲ್ಲವಾದಲ್ಲಿ ಮಾನಸಿಕ ವ್ಯಾಧಿಯಾಗಿ ಕಾಡುತ್ತದೆ.

ಭಯ ಉಂಟಾಗೋದು ಯಾವಾಗ? ನಾಳೆ ಏನಾಗುತ್ತದೆಯೋ ಏನೊ ಎಂಬ ಚಿಂತೆಯು ಭಯವಾಗಿ ಪರಿವರ್ತನೆಯಾಗುತ್ತದೆ. ಯಾವುದೇ ವಿಷಯದ ಬಗೆಗೆ ನಿರಾಶಾದಾಯಕವಾಗಿ ಆಲೋಚಿಸುವದು, ಸುಮ್ಮನೆ ಏನನ್ನೋ ಇಲ್ಲದ್ದನ್ನು ಊಹಿಸಿಕೊಳ್ಳುವದು,ಹಿಂದೆ ನಡೆದು ಹೋದ ಕಹಿ ಘಟನೆಗಳನ್ನು ಮೇಲಿಂದ ಮೇಲೆ ನೆನಪು ಮಾಡಿಕೊಳ್ಳುವದು, ನಾನೆಲ್ಲಿ ಸೋತು ಹೋಗುತ್ತೇನೋ ಎಂಬ ಸೋಲಿನ ಆತಂಕ, ನನಗಾರೂ ಇಲ್ಲ ನಾನು

ಏಕಾಂಗಿ ಎಂಬ ಭಾವ, ಪರರು ನನಗಿಂತ ಮುಂದೆ ಹೋಗುತ್ತಿದ್ದಾರೆ ಎಂಬ ಮತ್ಸರ ಭಾವ ನಮ್ಮಲ್ಲಿ ಭಯವನ್ನು ಹುಟ್ಟು ಹಾಕುತ್ತವೆ. ನಾವು ಅಪಾಯದಲ್ಲಿ ದ್ದಾಗ ನಮ್ಮ ಜೀವನದ ಬಗ್ಗೆ ಹೆದರಿಕೆಯಾಗುತ್ತದೆ.

ಚಿಕ್ಕ ಪುಟ್ಟ ವಿಷಯಗಳಿಗೂ ಮನಸ್ಸು ಭಯಗೊಳ್ಳುತ್ತದೆ. ಇದು ಒಂದು ತೆರನಾದ ಮಾನಸಿಕ ಸಂಘರ್ಷ. ಇದಕ್ಕೆ ಫೋಬಿಯೋ ಅಂತಲೂ ಕರೆಯುತ್ತಾರೆ. ಕೆ ಲವರಿಗೆ ಕಾಡುಪ್ರಾಣಿಗಳೆಂದರೆ ಭಯ. ಇನ್ನೂ ಕೆಲವರಿಗೆ ಸಾಕು ಪ್ರಾಣಿಗಳಾದ ನಾಯಿ ಬೆಕ್ಕು ಕಂಡರೂ ಭಯ. ಮಳೆ ಗುಡುಗು ಮಿಂಚಿಗೂ ಹೆದರುತ್ತಾರೆ.

ವಿಚಿತ್ರವೆಂದರೆ ಕೆಲವರು ಜನರನ್ನು ಕಂಡರೆ ಕಾಡು ಪ್ರಾಣಿ ನೋಡಿದ ಥರ ಭಯಗೊಳುತ್ತಾರೆ. ಆಹಾರದ ಭಯ, ಎತ್ತರ ಜಾಗದ ಭಯ, ಬಸ್ಸಿನಲ್ಲಿ , ರೈಲಿನಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ

ಭಯ ಇನ್ನು ಕೆಲವರು ನೀರು ಕಂಡರೆ ಹೆದರುತ್ತಾರೆ. ಅಂದರೆ ಭಯ ಎಲ್ಲ ಹಂತಗಳಲ್ಲಿ ಇದ್ದೇ ಇರುತ್ತದೆ.ಒಬ್ಬೊಬ್ಬರಿಗೆ ಒಂದೊಂದನ್ನು ಕಂಡರೆ ಭಯ. ಆಫೀಸಿಗೆ ಹೋದ ಗಂಡ, ಸ್ಕೂಲಿಗೆ ಹೋದ ಮಕ್ಕಳು ಮನೆಗೆ ಸರಿಯಾದ ಸಮಯಕ್ಕೆ ಮರಳಿ

ಬರದಿದ್ದರೂ ಭಯಗೊಳ್ಳುವ ಪ್ರಸಂಗಗಳಿವೆ. ನಾವು ಧೈರ್ಯವಂತರು ಎಂದು ಎಷ್ಟೋ ಜಂಭ ಕೊಚ್ಚಿಕೊಂಡರೂ ಭಯಗೊಳ್ಳುತ್ತೇವೆ ಎಲ್ಲಕ್ಕಿಂತ ದೊಡ್ಡ ಭಯ ಎಂದರೆ ಸಾವಿನ ಭಯ.

ಈ ಭಯ ನಮ್ಮ ಅಸ್ತಿತ್ವಕ್ಕೆ ಸಂಬಂಧಿಸಿದ್ದು. ಎಲ್ಲಿ ನಮ್ಮ ಪ್ರಾಣಕ್ಕೆ ಸಂಚಕಾರ ಬರುತ್ತೇನೋ ಎಂದು ಎಷ್ಟೋ ಬಾರಿ ಭಯಗೊಳ್ಳುತ್ತೇವೆ.

ಭಯದ ಲಕ್ಷಣಗಳೇನು?

ಭಯವುಂಟಾದಾಗ ಮೈಂಡ್ ಫುಲ್ ಬ್ಲಾಂಕ್ ಆಗಿರುತ್ತೆ ಯಾವುದೇ ವಿಚಾರಗಳು ಆಲೋಚನೆಗಳು ಹೊಳೆಯುವುದಿಲ್ಲ. ಮೈಯೆಲ್ಲ ಬೆವರುತ್ತೆ. ಕೈ ಕಾಲುಗಳಲ್ಲಿ ಶಕ್ತಿಯಿಲ್ಲದಂತೆ ಭಾಸವಾಗುತ್ತೆ. ಮಾತೇ ಹೊರಡೋದಿಲ್ಲ. ಹೊರಡಿದರೂ ತೊದಲುತ್ತೆ. ಭಯದ ವಿಚಾರವನ್ನು ಹೊರತುಪಡಿಸಿ ಬೇರೆ ಯಾವ ವಿಚಾರಗಳು ಮನಸ್ಸಿನಲ್ಲಿ

ಸುಳಿಯಲಾರವು. ವಿಚಾರಗಳೆಲ್ಲ ಅಸ್ತವ್ಯಸ್ತವಾಗುವುವು. ಅಂದುಕೊಂಡ ಯಾವ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಸಣ್ಣ ಪುಟ್ಟ ವಿಷಯಗಳಿಗೆ ಬೆಚ್ಚಿ ಬೀಳುವುದು ಅಥವಾ ಇದಕ್ಕೆ ತದ್ವಿರುದ್ಧವಾಗಿ ಗಂಭೀರ ವಿಷಯಗಳಿಗೂ ಪ್ರತಿಕ್ರಿಯಿಸದೆ ಮೌನವಾಗಿರುವದು ಇವೆಲ್ಲ ಭಯದ ಮುಖ್ಯ ಲಕ್ಷಣಗಳು.

ಭಯ ತಡೆಯೋಕೆ ಏನು ಉಪಾಯ ? ಪ್ರತಿಯೊಂದು ಭಯದಿಂದಲೂ ನಾವು ಮುಕ್ತರಾಗಬಹುದು. ಭಯ ತಡೆಯುವ ಉಪಾಯಗಳು ಕಠಿಣವೆನಿಸಿದರೂ ಅಸಾಧ್ಯವೇನಲ್ಲ. ನಾವು ಭಯಗೊಳ್ಳುತ್ತೇವೆ ಎನ್ನುವ ಸಂಗತಿಯನ್ನು ಒಪ್ಪಿಕೊಳ್ಳುವುದು.ಯಾವ ವಿಷಯದ ಬಗ್ಗೆ ಭಯವಿದೆಯೋ ಎಂಬುನ್ನು ತಿಳಿದು ಅದನ್ನು ಮುಕ್ತವಾಗಿ ಆತ್ಮೀಯರೊಂದಿಗೆ ಚರ್ಚಿಸುವದು. ಯಾವಾಗಲೂ ಕೆಲಸದಲ್ಲಿ ತೊಡಗಿಸಿಕೊಳ್ಳುವದು. ಮೂಢನಂಬಿಕೆ ಮತ್ತು ಅಪಶಕುನಗಳನ್ನು ನಂಬದೆ ಇರುವುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ