AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು?

ಹವಾಮಾನ ಬದಲಾವಣೆಯೊಂದಿಗೆ, ನಮ್ಮ ತ್ವಚೆಯೂ ಅನೇಕ ಬದಲಾವಣೆಗಳಿಗೆ ಒಳಗಾಗುತ್ತದೆ. ಅದರಲ್ಲೂ ಈ ಮಳೆಗಾಲದಲ್ಲಿ ಹೆಚ್ಚಿನವರು ಎಣ್ಣೆಯುಕ್ತ ಚರ್ಮದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಸ್ಯೆಯ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ, ಇದು ಮೊಡವೆ, ದದ್ದುಗಳು ಕಾಣಿಸಿಕೊಳ್ಳಲು ಕಾರಣವಾಗಬಹುದು. ಮಳೆಗಾಲದಲ್ಲಿ ಚರ್ಮ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿಪಡೆಯೋದೇಕೆ ಎಂಬುದರ ಮಾಹಿತಿಯನ್ನು ತಿಳಿಯಿರಿ.

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 16, 2026 | 7:56 PM

Share

ಮಾನ್ಸೂನ್‌ನಲ್ಲಿ ವಾತಾವರಣ ಆಹ್ಲಾದಕರವಾಗಿದ್ದು, ಮಳೆ ಮತ್ತು ತೇವಾಂಶದ ಕಾರಣದಿಂದ ಈ ಋತುವಿನಲ್ಲಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಯೂ ಒಂದು. ಹೌದು ಈ ಸಮಯದಲ್ಲಿ ಕೆಲವರ ತ್ವಚೆ ಸಾಮಾನ್ಯಕ್ಕಿಂತ ಹೆಚ್ಚು ಎಣ್ಣೆಯುಕ್ತವಾಗುತ್ತದೆ. ಈ ಎಣ್ಣೆಯುಕ್ತ ಚರ್ಮದ (oily skin) ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಇದು ಮೊಡವೆ, ದದ್ದುಗಳು ಮೂಡಲು ಕಾರಣವಾಗಬಹುದು. ಹಾಗಿದ್ದರೆ ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿ ಪಡೆಯೋದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗಲು ಕಾರಣವೇನು?

ಎಣ್ಣೆಯುಕ್ತ ಚರ್ಮವು ಸಾಮಾನ್ಯ ತ್ವಚೆಯ ಸಮಸ್ಯೆಯಾಗಿದ್ದು, ಈ ಸ್ಥಿತಿಯು ವಿಶೇಷವಾಗಿ ಮಳೆಗಾಲದಲ್ಲಿ ಉಲ್ಬಣಗೊಳ್ಳುತ್ತದೆ. ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯು ಸಾಕಷ್ಟು ಪ್ರಮಾಣದಲ್ಲಿರದಿದ್ದರೆ, ಹೆಚ್ಚುವರಿ ಎಣ್ಣೆ ಸಂಗ್ರಹವಾಗುತ್ತದೆ. ಮೇದೋಗ್ರಂಥಿಗಳ ಸ್ರಾವವು ನಿಮ್ಮ ಮುಖದ ಮೇಲಿನ ಸೆಬಾಸಿಯಸ್ ಗ್ರಂಥಿಗಳಿಂದ ಉತ್ಪತ್ತಿಯಾಗುತ್ತದೆ. ಇದರ ಸ್ರವಿಸುವಿಕೆಯು ಮುಖದ ಮೇಲೆ ರಕ್ಷಣಾತ್ಮಕ ಪದರವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಚರ್ಮವನ್ನು ರಕ್ಷಿಸುವುದಲ್ಲದೆ, ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಅವುಗಳ ಕಾರ್ಯವು ಸೂಕ್ತವಾಗಿಲ್ಲದಿದ್ದರೆ, ಅತಿಯಾದ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆ ಸಂಭವಿಸುತ್ತದೆ. ಇದರಿಂದಾಗಿ ಚರ್ಮ ಸಾಕಷ್ಟು ಎಣ್ಣೆಯುಕ್ತವಾಗಿ ಕಾಣಿಸುತ್ತದೆ.

ಇದಲ್ಲದೆ ಆನುವಂಶಿಕ ಕಾರಣ, ಹಾರ್ಮೋನ್  ಅಸಮತೋಲನ ಮತ್ತು ಪರಿಸರ ಅಂಶಗಳು ಸೇರಿದಂತೆ ಹಲವು ಅಂಶಗಳು ಮೇದೋಗ್ರಂಥಿಗಳ ಸ್ರಾವದ ಮೇಲೆ ಪರಿಣಾಮ ಬೀರಬಹುದು. ಇನ್ನೊಂದು ಪ್ರಮುಖ ಅಂಶವೆಂದರೆ, ಬೇಸಿಗೆ ಮತ್ತು ಮಳೆಗಾಲದಲ್ಲಿ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆ ಹೆಚ್ಚಾಗುತ್ತದೆ. ಮಳೆಗಾಲ ಅತ್ಯಂತ ಆರ್ದ್ರವಾಗಿರುತ್ತವೆ, ಇದರಿಂದಾಗಿ ಬೆವರು ಆವಿಯಾಗುವುದು ಕಡಿಮೆಯಾಗುತ್ತದೆ ಇದರಿಂದ ಚರ್ಮ ಎಣ್ಣೆಯುಕ್ತವಾಗಿರುತ್ತದೆ.

ಮಳೆಗಾಲದಲ್ಲಿ ದೇಹವು ಹೆಚ್ಚು ಬೆವರು ಉತ್ಪಾದಿಸುತ್ತದೆ. ಚರ್ಮದ ಮೇಲೆ ಹೆಚ್ಚುವರಿ ಎಣ್ಣೆ ಮತ್ತು ಬೆವರು ಸಂಗ್ರಹವಾದಾಗ, ತ್ವಚೆ ಎಣ್ಣೆಯುಕ್ತವಾಗಿ ಕಾಣಲು ಪ್ರಾರಂಭಿಸುತ್ತದೆ. ಧೂಳು, ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಸಂಗ್ರಹವಾದರೆ, ಮೊಡವೆಗಳ ಅಪಾಯ ಹೆಚ್ಚಾಗುತ್ತದೆ. ಇದಲ್ಲದೆ ಚರ್ಮವು ಅನೇಕ ಪ್ರಯೋಜನಕಾರಿ ಮತ್ತು ಸಾಮಾನ್ಯ ಸೂಕ್ಷ್ಮಜೀವಿಗಳನ್ನು ಹೊಂದಿರುತ್ತದೆ. ಹೆಚ್ಚುವರಿ ಎಣ್ಣೆ ಮತ್ತು ತೇವಾಂಶವು ಈ ಸಮತೋಲನವನ್ನು ಅಡ್ಡಿಪಡಿಸಬಹುದು. ಇದರಿಂದ ಕೆಲವು ಬ್ಯಾಕ್ಟೀರಿಯಾ ಮತ್ತು ಯೀಸ್ಟ್‌ಗಳು ಹೆಚ್ಚಾಗುತ್ತವೆ, ಇದು ಶಿಲೀಂಧ್ರಗಳ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಹೀಗೆ ಮಳೆಗಾಲದಲ್ಲಿ ಚರ್ಮವು ಅನೇಕ ಸವಾಲುಗಳನ್ನು ಎದುರಿಸುತ್ತದೆ. ಹಾಗಾಗಿ ಈ ಋತುವಿನಲ್ಲಿ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು.

ಇದನ್ನೂ ಓದಿ: ಜಪಾನೀಯರ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯವಂತರಾಗಿ ನೂರ್ಕಾಲ ಬಾಳಿ

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮವನ್ನು ಹೇಗೆ ಆರೈಕೆ ಮಾಡಬೇಕು?

  • ದಿನಕ್ಕೆ ಎರಡು ಬಾರಿ ಸ್ಯಾಲಿಸಿಲಿಕ್ ಆಮ್ಲವನ್ನು ಹೊಂದಿರುವ ಫೇಸ್ ವಾಶ್ ನಿಂದ ನಿಮ್ಮ ಮುಖವನ್ನು ಸ್ವಚ್ಛಗೊಳಿಸಿ.
  • ಚರ್ಮವನ್ನು ಸಮತೋಲನದಲ್ಲಿಡಲು ಹಗುರವಾದ, ಎಣ್ಣೆ ರಹಿತ ಮತ್ತು ಜೆಲ್ ಆಧಾರಿತ ಮಾಯಿಶ್ಚರೈಸರ್ ಬಳಸಿ.
  • ಹೊರಗೆ ಹೋಗುವಾಗ, ಜೆಲ್ ಆಧಾರಿತ ಅಥವಾ ಮ್ಯಾಟ್-ಫಿನಿಶ್ ಹೊಂದಿರುವ ಸನ್‌ಸ್ಕ್ರೀನ್ ಅನ್ನು ಹಚ್ಚಿ, ಇದು ಜಿಗುಟುತನವನ್ನು ಕಡಿಮೆ ಮಾಡುತ್ತದೆ.
  • ವಾರಕ್ಕೆ 1-2 ಬಾರಿ ಮುಲ್ತಾನಿ ಮಿಟ್ಟಿ ಮತ್ತು ರೋಸ್ ವಾಟರ್ ನ ಫೇಸ್ ಪ್ಯಾಕ್ ಹಚ್ಚಿಕೊಳ್ಳಿ. ಕಡ್ಲೆಹಿಟ್ಟಿನ ಫೇಸ್‌ ಪ್ಯಾಕ್‌ ಕೂಡ ಹಚ್ಚಿಕೊಳ್ಳಬಹುದು.
  • ಸೌತೆಕಾಯಿ ರಸ ಮತ್ತು ಅಲೋವೆರಾ ಜೆಲ್ ನಂತಹ ಮನೆಮದ್ದುಗಳು ಚರ್ಮವನ್ನು ತಂಪಾಗಿಸುತ್ತವೆ, ತೇವಗೊಳಿಸುತ್ತವೆ ಮತ್ತು ರಿಫ್ರೆಶ್ ಮಾಡುತ್ತವೆ.
  • ಎಣ್ಣೆಯುಕ್ತ ಚರ್ಮವನ್ನು ತಪ್ಪಿಸಲು, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ. ದಿನವಿಡೀ ಸಾಕಷ್ಟು ಪ್ರಮಾಣದ ನೀರು ಕುಡಿಯಿರಿ. ಕಲ್ಲಂಗಡಿ ಇತ್ಯಾದಿ ನೀರಿನಾಂಶವಿರುವ ಹಣ್ಣುಗಳನ್ನು ಸೇವಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ