Infant  Protection Day 2023: ಶಿಶು ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮಹತ್ವ ಇಲ್ಲಿದೆ 

ನವಜಾತ ಶಿಶುವಿನ ಸುರಕ್ಷತೆ ಮತ್ತು ಸರಿಯಾದ ಆರೈಕೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನವೆಂಬರ್ 07 ರಂದು  ಶಿಶು ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

Infant  Protection Day 2023: ಶಿಶು ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 06, 2023 | 5:10 PM

ಮಕ್ಕಳೇ ನಾಳಿನ ಭವಿಷ್ಯವಾಗಿದ್ದು, ತಮ್ಮ ಮಕ್ಕಳನ್ನು ಸಾಧ್ಯವಿರುವ ಎಲ್ಲಾ ರೀತಿಯಲ್ಲಿ ರಕ್ಷಿಸುವ ಜವಬ್ದಾರಿ ಎಲ್ಲಾ ಪೋಷಕರ ಮೇಲಿದೆ. ಅದರಲ್ಲೂ  ನವಜಾತ ಶಿಶುಗಳ ಆರೋಗ್ಯ ರಕ್ಷಣೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಇಂದಿಗೂ ಅದೆಷ್ಟೋ ನವಜಾತ ಶಿಶುಗಳು ಸರಿಯಾದ ಆರೈಕೆಯ ಕೊರತೆಯಿಂದಾಗಿ ಸಾವನ್ನಪ್ಪುತ್ತಿವೆ.  ಆದ್ದರಿಂದ ಈ ಪುಟ್ಟ ಜೀವಗಳನ್ನು ಉಳಿಸಲು ನವಜಾತ ಶಿಶುಗಳ ಆರೈಕೆ ಮತ್ತು ರಕ್ಷಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ನವೆಂಬರ್ 07 ರಂದು ಶಿಶು ಸಂರಕ್ಷಣಾ ದಿನವನನ್ನು ಆಚರಿಸಲಾಗುತ್ತದೆ.

ಶಿಶು ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ?

ಸರಿಯಾದ ಆರೈಕೆಯ ಕೊರತೆಯಿಂದಾಗಿ ಪ್ರಪಂಚದಾದ್ಯಂತ ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ನವಜಾತ ಶಿಶುಗಳು ಸಾವವನ್ನಪ್ಪುತ್ತಿವೆ.  ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ, 2019 ರಲ್ಲಿ ಜನನದ ನಂತರ ಒಂದು ತಿಂಗಳೊಳಗೆ 2.4 ಮಿಲಿಯನ್ ಶಿಶುಗಳು ಸಾವನ್ನಪ್ಪಿವೆ. ಅಲ್ಲದೆ ಪ್ರತಿದಿನ 7000 ಕ್ಕಿಂತ ಹೆಚ್ಚು ಶಿಶುಗಳು  ಮರಣಹೊಂದುತ್ತಿವೆ. ಹಾಗೂ  5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣವು 47% ರಷ್ಟಿದೆ. ಆದ್ದರಿಂದ ನವಜಾತ ಶಿಶುಗಳ ಆರೈಕೆಯ ಬಗ್ಗೆ ಕಾಳಜಿ ವಹಿಸುವುದು ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಸಾರ್ವಜನಿಕ ಹಿತಾಸಕ್ತಿಯಿಂದ ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೂ ಹೆಚ್ಚುತ್ತಿರುವ ಜನಸಂಖ್ಯೆ, ಮೂಲ ಆರೋಗ್ಯ ಸೇವೆಗಳ ಕೊರತೆ ಮತ್ತು ಜನರಲ್ಲಿ ಅರಿವಿನ ಕೊರತೆಯಿಂದಾಗಿ ಇಂದಿಗೂ ಶಿಶು ಮರಣ ದರ ಪ್ರಮಾಣ ಕಡಿಮೆಯಾಗಿಲ್ಲ.  ಆದ್ದರಿಂದ ಪುಟ್ಟ ಜೀವಗಳ ಆರೋಗ್ಯ ರಕ್ಷಣೆಗಾಗಿ ಸಂಬಂಧಿಸಿದ ಜಾಗೃತಿಯನ್ನು ಹರಡುವ ಉದ್ದೇಶದಿಂದ ಶಿಶು ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ:

ಶಿಶು ಸಂರಕ್ಷಣಾ ದಿನದ ಇತಿಹಾಸ:

1990 ರ ವೇಳೆಯಲ್ಲಿ ನವಜಾತ ಶಿಶುಗಳ ಸರಿಯಾದ ಆರೈಕೆ ಮತ್ತು ರಕ್ಷಣೆಯ ಬಗೆಗಿನ ಅರಿವಿನ ಕೊರತೆಯಿಂದಾಗಿ ಸುಮಾರು 5 ಮಿಲಿಯನ್ ಶಿಶುಗಳು ಸಾವನ್ನಪ್ಪಿದವು. ಈ ಘಟನೆ ಶಿಶುಗಳ ಆರೋಗ್ಯ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಶಿಶು ಮರಣ ದರ ಪ್ರಮಾಣವನ್ನು  (IMR) ಕಡಿಮೆ ಮಾಡಲು ಹಲವು ದೇಶಗಳನ್ನು ಪ್ರೇರೇಪಿಸಿತು. ಈ ನಿಟ್ಟಿನಲ್ಲಿ ಯುರೋಪ್ ಮೊದಲ ಬಾರಿಗೆ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ  ಅಭಿಯಾನವನ್ನು ಪ್ರಾರಂಭಿಸಿತು. ನಂತರ ಶಿಶು ಆರೈಕೆ, ಆರೋಗ್ಯ ರಕ್ಷಣಾ  ಸೇವೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಶಿಶು ಮರಣ ದರ ಪ್ರಮಾಣವನ್ನು ಕಡಿಮೆ ಮಾಡಲು ಶಿಶು ಸಂರಕ್ಷಣಾ ದಿನವನ್ನು ಸ್ಥಾಪಿಸಲಾಯಿತು.

ಇದನ್ನೂ ಓದಿ: ವಿಶ್ವ ಅಸ್ವಸ್ಥರ ದಿನದ ಇತಿಹಾಸ ಮತ್ತು ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಶಿಶು ಸಂರಕ್ಷಣಾ ದಿನದ ಮಹತ್ವ:

ನವಜಾತ ಶಿಶುಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು  ಸರಿಯಾದ ಆರೋಗ್ಯ ರಕ್ಷಣೆ ಮತ್ತು ಆರೈಕೆಯ ಮೂಲಕ  ಪುಟ್ಟ ಜೀವಗಳನ್ನು ರಕ್ಷಿಸುವುದು ಈ ಆಚರಣೆಯ ಮುಖ್ಯ ಗುರಿಯಾಗಿದೆ.ಆರೋಗ್ಯ ವೃತ್ತಿಪರರರು, ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ವಿಶ್ವದಾದ್ಯಂತ ಶಿಶು ಮರಣ ದರ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆರೋಗ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ  ಕಾರ್ಯಕ್ರಮಗಳು ಮತ್ತು ನೀತಿಗಳನ್ನು ರೂಪಿಸಿವೆ.

ಮುಖ್ಯವಾಗಿ ಈ ದಿನ ಪ್ರತಿ ಮಗುವಿಗೆ  ಬಲವಾದ ಆರೋಗ್ಯ ಮತ್ತು ರೋಗನಿರೋಧಕ ಶಕ್ತಿಯನ್ನು ಒದಗಿಸಲು ಪ್ರಯತ್ನಿಸುತ್ತದೆ. ಮತ್ತು ಈ ದಿನದಂದು ಶಿಶುಗಳಿಗೆ ಅಗತ್ಯವಿರುವ ರಕ್ಷಣೆ ಮತ್ತು ಪೋಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 5:07 pm, Mon, 6 November 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ