International Anti-Corruption Day: ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಇತಿಹಾಸ ಮತ್ತು ಪ್ರಾಮುಖ್ಯತೆ

ಪ್ರಸ್ತುತ ಇಡೀ ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ.  ಇದು ಒಂದು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ದುರ್ಬಲಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಮಾಜದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರವನ್ನು  ನಿಲ್ಲಿಸುವುದು ಮತ್ತು ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಡಿಸೆಂಬರ್ 09 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 

International Anti-Corruption Day: ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಇತಿಹಾಸ ಮತ್ತು ಪ್ರಾಮುಖ್ಯತೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 08, 2023 | 4:04 PM

ಭ್ರಷ್ಟಾಚಾರ ಎಂಬುದು ಇಡೀ ಸಮಾಜವನ್ನೇ  ಆರ್ಥಿಕವಾಗಿ ದುರ್ಬಲಗೊಳಿಸುವ ಗೆದ್ದಲು ಇದ್ದ ಹಾಗೆ.  ಈ ಭ್ರಷ್ಟಾಚಾರ  ಒಂದು  ಸಾಮಾಜಿಕ ಪಿಡುಗಾಗಿದ್ದು,  ಇದರಿಂದ ದೇಶದ ಅಭಿವೃದ್ಧಿ  ಕುಂಠಿತವಾಗುವುದು ಮಾತ್ರವಲ್ಲದೆ   ಇದು ದೇಶದ ಸಾಮಾಜಿಕ ಮತ್ತುಆರ್ಥಿಕ ಅಭಿವೃದ್ಧಿಯನ್ನು ದುರ್ಬಲಗೊಳಿಸುತ್ತದೆ.  ಮತ್ತು ಭ್ರಷ್ಟಚಾರದ ಕಾರಣದಿಂದ ಸಮಾಜ ಒಂದು ವರ್ಗ ಮಾತ್ರ ಶ್ರೀಮಂತವಾಗುತ್ತದೆ, ಬಡವರು ಬಡವರಾಗಿಯೇ ಉಳಿಯಬೇಕಾಗುತ್ತದೆ. ಪ್ರಸ್ತುತ ಈ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ಕೃತ್ಯಗಳು ನಡೆಯುತ್ತಿದೆ. ಇದರಿಂದ ದೇಶಗಳ ಆರ್ಥಿಕತೆಗೆ ತೀವ್ರವಾದ ಪೆಟ್ಟು ಬೀಳುತ್ತಿದ್ದು, ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಾಗೂ ಭ್ರಷ್ಟಚಾರ ಕೃತ್ಯಗಳಲ್ಲಿ ತೊಡಗಿಕೊಳ್ಳದಿರುವಂತೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 09 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.  ಈ ದಿನದ ಇತಿಹಾಸ ಮತ್ತು ಮಹತ್ವ ಏನು ಎಂಬುದನ್ನು ತಿಳಿಯೋಣ.

ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಇತಿಹಾಸ:

ಭ್ರಷ್ಟಚಾರ ಯಾವುದೋ ಒಂದು ದೇಶದ ಸಮಸ್ಯೆಯಲ್ಲ, ಬದಲಾಗಿ ಇದು ಇಡೀ ಪ್ರಪಂಚದಲ್ಲಿರುವ ಬಹುತೇಕ ಎಲ್ಲಾ ದೇಶಗಳು ಎದುರಿಸುತ್ತಿರುವ ಒಂದು ಬಹುದೊಡ್ಡ  ಸಮಸ್ಯೆಯಾಗಿದೆ.  ಈ ಒಂದು ಸಮಸ್ಯೆಯಿಂದ ಇಂದಿಗೂ ಅದೆಷ್ಟೋ ದೇಶಗಳು ಜಗತ್ತಿನಲ್ಲಿ ಆರ್ಥಿಕವಾಗಿ ದುರ್ಬಲವಾಗಿದೆ. ಹಾಗಾಗಿ ಈ ಭ್ರಷ್ಟಾಚಾರವನ್ನು ತಡೆಗಟ್ಟಬೇಕು, ಜನರು, ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು  ಎಂದು ಪ್ರತಿಯೊಬ್ಬರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದೊಂದಿಗೆ ಅಕ್ಟೋಬರ್ 31, 2003 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಅಂತರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲು ಅಂಗೀಕಾರವನ್ನು ನೀಡಿತು. ಮತ್ತು ಡಿಸೆಂಬರ್ 09 ರಂದು ಈ ವಿಶೇಷ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ  ಪ್ರತಿ ವರ್ಷವೂ ಡಿಸೆಂಬರ್ 09 ರಂದು ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತರಾಷ್ಟ್ರೀಯ ಭ್ರಷ್ಟಾಚಾರ ದಿನದ ಮಹತ್ವ:

ಪ್ರಸ್ತುತ ಈ ಪ್ರಪಂಚದಲ್ಲಿ ಹೆಚ್ಚಿನ ದೇಶಗಳು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ. ಇದರ ಕಾರಣದಿಂದ ಅದೆಷ್ಟೋ ದೇಶಗಳ ಆರ್ಥಿಕತೆ ಹಿಂದುಳಿದಿದೆ. ಭ್ರಷ್ಟಾಚಾರದ ಕಾರಣದಿಂದ ಸಮಾಜದ ಕೆಲವು ಜನರು ಮಾತ್ರ ಹಣವನ್ನು ಲೂಟಿ ಹೊಡೆದು ಮೋಜು ಮಾಡುತ್ತಿದ್ದಾರೆ. ಇದರಿಂದ ಶ್ರೀಮಂತರು ಶ್ರೀಮಂತರಾಗುತ್ತಲೇ ಇದ್ದಾರೆ, ಬಡವರು ಬಡವರಾಗಿಯೇ ಉಳಿದಿದ್ದಾರೆ, ಇಂತಹ ಪರಿಸ್ಥಿತಿಯಲ್ಲಿ ಸಮಾಜದ ವಂಚಿತ ವರ್ಗದ ಕಲ್ಯಾಣಕ್ಕಾಗಿ ಭ್ರಷ್ಟಾಚಾರವನ್ನು ಕೊನೆಗೊಳಿಸುವುದು ಬಹಳ ಮುಖ್ಯ.  ಈ ನಿಟ್ಟಿನಲ್ಲಿ ಭ್ರಷ್ಟಾಚಾರದ ಬಗ್ಗೆ ಪ್ರತಿಯೊಬ್ಬ ನಾಗರಿಕರಲ್ಲೂ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ:ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ, ಅಂತರಾಷ್ಟ್ರೀಯ ದಿನಾಚರಣೆ

ವರದಿಯೊಂದರ ಪ್ರಕಾರ ಪ್ರತಿವರ್ಷ ಇಡೀ ವಿಶ್ವದಲ್ಲಿ 1 ಟ್ರಿಲಿಯನ್ ಲಂಚವನ್ನು ಸ್ವೀಕರಿಸಲಾಗುತ್ತಿದೆಯಂತೆ. ಇಂತಹ ಸಂದರ್ಭದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತಹದ್ದು, ಹಾಗೂ ಅದರಲ್ಲಿ ನಮ್ಮನ್ನು ನಾವು ತೊಡಗಿಕೊಳ್ಳದಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಕಷ್ಟವಾಗಿರಬಹುದು ಆದರೆ ಅದು ಅಸಾಧ್ಯವಲ್ಲ. ಯಾರಾದರೂ ಲಂಚವನ್ನು ಸ್ವೀಕರಿಸುತ್ತಿದ್ದರೆ ಅಥವಾ ಲಂಚ ನೀಡುತ್ತಿರುವುದನ್ನು ನೀವು ಗಮನಿಸಿದರೆ ಅದನ್ನು ಕಾನೂನು ರೀತಿಯಲ್ಲಿ ಅಥವಾ ನಿಮ್ಮದೇ ರೀತಿಯಲ್ಲಿ ತಡೆಯಲು ಪ್ರಯತ್ನಿಸಬಹುದು.  ಹೀಗೆ ಭ್ರಷ್ಟಾಚಾರವನ್ನು ತೊಡೆದುಹಾಕುವ ಮೂಲಕ  ಅಭಿವೃದ್ಧಿಯ ಕಡೆಗೆ ಉತ್ತಮ ಕೆಲಸವನ್ನು ಮಾಡಬಹುದು.

ಅಲ್ಲದೆ ಭ್ರಷ್ಟಾಚಾರವನ್ನು ತೊಡೆದುಹಾಕಲು   ಪ್ರತಿಯೊಂದು ದೇಶದ  ಸರ್ಕಾರಿ ಅಧಿಕಾರಿಗಳು, ನಾಗರಿಕ ಸೇವಕರು, ಕಾನೂನು ಜಾರಿ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಖಾಸಗಿ ವಲಯ, ನಾಗರಿಕ ಸಮಾಜ, ಶಿಕ್ಷಣ ತಜ್ಞರು, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾಗಿದೆ. ಆಗ ಮಾತ್ರ ಒಂದು ದೇಶವು ಭ್ರಷ್ಟಚಾರ  ಮುಕ್ತವಾಗಿ ಅಭಿವೃದ್ಧಿಯ ಕಡೆಗೆ ಮುಂದುವರೆಯಲು ಸಾಧ್ಯ ಎಂಬ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ  ಆಚರಣೆಯ ಮುಖ್ಯ ಉದ್ದೇಶವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:04 pm, Fri, 8 December 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ