International Men’s Day 2023: ಅಂತರಾಷ್ಟ್ರೀಯ ಪುರುಷರ ದಿನದ ಹಿನ್ನೆಲೆ, ಮಹತ್ವ ಇಲ್ಲಿದೆ 

ಸಮಾಜದಲ್ಲಿ ಪುರುಷರ ಮೇಲಿನ  ಶೋಷಣೆ, ಕಿರುಕುಳ, ತಾರತಮ್ಯ, ದೌರ್ಜನ್ಯದ ವಿರುದ್ದ ಧ್ವನಿ ಎತ್ತುಲು ಹಾಗೂ ಅವರಿಗೆ ಅವರ ಹಕ್ಕುಗಳನ್ನು ನೀಡಲು ಮತ್ತು  ಲಿಂಗ ಸಮಾನತೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19ರಂದು ಅಂತರಾಷ್ಟ್ರೀಯ ಪುರುಷರ ದಿನವನ್ನು (International Men's Day) ಆಚರಿಸಲಾಗುತ್ತದೆ. ಈ ದಿನಾಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ. 

International Men's Day 2023: ಅಂತರಾಷ್ಟ್ರೀಯ ಪುರುಷರ ದಿನದ ಹಿನ್ನೆಲೆ, ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 17, 2023 | 5:07 PM

ಈ ಸಮಾಜದಲ್ಲಿ ಪುರುಷರು ಹಾಗೂ  ಮಹಿಳೆಯರು  ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ. ಇವರಿಬ್ಬರೂ  ಇಲ್ಲದೆ ಈ ಜಗತ್ತು ಅಪೂರ್ಣ. ಈಗೀಗ ಒಂದೆಡೆ ಮಹಿಳೆಯರು ಸಬಲರಾಗುತ್ತಿದ್ದರೆ,  ಇನ್ನೊಂದೆಡೆ ಸಮಾಜದಲ್ಲಿ ಪುರುಷರ ಚಿತ್ರಣವೂ ಬದಲಾಗುತ್ತಿದೆ. ನಾವು ಕೆಲವು ವರ್ಷಗಳ ಹಿಂದಿನ ಘಟನೆಗಳ ಬಗ್ಗೆ ಮಾತನಾಡುವುದಾದರೆ, ಸಮಾಜದಲ್ಲಿ ಪುರುಷರ ಬಗ್ಗೆ ಅನೇಕ ಸಂಪ್ರದಾಯವಾದಿ ದೃಷ್ಟಿಕೋನಗಳು ಇದ್ದವು, ಅವರು ಮಹಿಳೆಯರನ್ನು ಶೋಷಣೆ ಮಾಡುತ್ತಾರೆ ಮತ್ತು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ನೀಡುವುದಿಲ್ಲ ಎಂದು ಹೇಳಲಾಗುತ್ತಿತ್ತು.   ಇನ್ನೊಂದು ಪ್ರಮುಖ ವಿಷಯದ ಬಗ್ಗೆ ಮಾತನಾಡುವುದಾದರೆ, ಪುರುಷರು ತುಂಬಾ ಬಲಿಷ್ಠರು ಅವರು ಭಾವನಾತ್ಮಕವಾಗಿ ಅಷ್ಟು ಬೇಗ ನೊಂದುಕೊಳ್ಳುವುದಿಲ್ಲ ಎಂದು ಹೆಚ್ಚಿನವರು ಹೇಳುತ್ತಾರೆ. ಪುರುಷರು ನೋವು ಅನುಭವಿಸುವುದಿಲ್ಲ, ಅವರು ಎಂದಿಗೂ ಅಳುವದಿಲ್ಲ, ಭಾವನೆಗಳನ್ನು ವ್ಯಕ್ತಪಡಿಸುವುದಿಲ್ಲ, ಪುರುಷರಾಗಿ ನೀವು ಮಹಿಳೆಯರಂತೆ ಏಕೆ ಅಳುತ್ತೀರಿ ಎಂದು ಜನರು ಹೇಳುವ ಮಾತುಗಳನ್ನು ನೀವು ಆಗಾಗ್ಗೆ ಕೇಳಿರಬಹುದು.  ಏಕೆ ಪುರುಷರು ನೋವನ್ನು ಅನುಭವಿಸುವುದಿಲ್ಲವೇ, ಆತನಿಗೂ ಭಾವನೆಗಳಿಲ್ಲವೇ?, ಆತ ತನ್ನ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಏನು ಕೊಡುಗೆ ನೀಡುವುದಿಲ್ಲವೇ?  ಹೀಗೆ ಈ  ಸಮಾಜದಲ್ಲಿ ಪುರುಷರ ಮೇಲಿನ  ಶೋಷಣೆ, ತಾರತಮ್ಯ, ಕಿರುಕುಳ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವ ಸಲುವಾಗಿ  ಪ್ರತಿವರ್ಷ ನವೆಂಬರ್ 19 ರಂದು ಅಂತರಾಷ್ಟ್ರೀಯ ಪುರುಷರ (International Men’s Day) ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಪುರುಷರ ದಿನಾಚರಣೆಯ ಇತಿಹಾಸ:

ಅಂತರಾಷ್ಟ್ರೀಯ ಪುರುಷರ ದಿನಾಚರಣೆಯನ್ನು ಮೊದಲ ಬಾರಿಗೆ 1992 ರಲ್ಲಿ ಥಾಮಸ್ ಓಸ್ಟರ್ ಎಂಬವರು ಆಚರಿಸಿದರು ಎಂದು ಹೇಳಲಾಗುತ್ತದೆ. ಸಮಾಜದಲ್ಲಿ ಪುರುಷರು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಅವರು ಜಾರಿಗೆ ತಂದರು. ಆದರೆ ಈ ಆಚರಣೆಗೆ ಅಷ್ಟೇನೂ ಪ್ರೋತ್ಸಾಹ ದೊರೆಯದ ಕಾರಣ 1995 ರಲ್ಲಿ ನಿಲ್ಲಿಸಬೇಕಾಯಿತು.

ನಂತರ 1999 ರಲ್ಲಿ ಮತ್ತೊಮ್ಮೆ ಪುರುಷರ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು. ವಾಸ್ತವವಾಗಿ ಈ ದಿನ ವೆಸ್ಟ್ ಇಂಡೀಸ್ನ ಭಾರತೀಯ ಮೂಲದ ಪ್ರೊಫೆಸರ್ ಡಾ. ಜೊರೋಮ್ ತಿಲಕ್ ಸಿಂಗ್ ಎಂಬವರು 1999 ನವೆಂಬರ್ 19 ರಂದು ತಮ್ಮ ತಂದೆಯ ಜನ್ಮ ದಿನವನ್ನು ಅಂತರಾಷ್ಟ್ರೀಯ ಪುರುಷರ ದಿನವನ್ನಾಗಿ ಆಚರಿಸಿದರು.  ಲಿಂಗ ಸಮಾನತೆಯನ್ನು ಉತ್ತೇಜಿಸಲು, ಪುರುಷರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಈ ಸಮಾಜದಲ್ಲಿ ಧ್ವನಿ ಎತ್ತಬೇಕು ಎಂದು ಈ ಆಚರಣೆಯನ್ನು ಪ್ರಾರಂಭಿಸಿದರು. ಅಂದಿನಿಂದ ಪ್ರತಿವರ್ಷ ನವೆಂಬರ್ 19 ರಂದು ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಅಂತರಾಷ್ಟ್ರೀಯ ಪುರುಷರ ದಿನದ ಆಚರಣೆ ಯಾವಾಗ  ಪ್ರಾರಂಭವಾಯಿತು?

ಭಾರತದಲ್ಲಿ ಅಂತರಾಷ್ಟ್ರೀಯ ಪುರುಷರ ದಿನಾಚರಣೆಯನ್ನು ಆಚರಿಸಲು ಹಲವು ವರ್ಷಗಳೇ ಬೇಕಾಯಿತು. 2007 ರ ನವೆಂಬರ್ 19 ರಂದು  ಭಾರತದಲ್ಲಿ ಮೊದಲ ಬಾರಿಗೆ ಅಂತರಾಷ್ಟ್ರೀಯ ಪುರುಷರ ದಿನವನ್ನು ಆರಿಸಲಾಯಿತು. ಹೈದರಾಬಾದ್ ಮೂಲದ ಲೇಖಕಿ ಉಮಾ ಚಲ್ಲಾ ಅವರು 2007 ರಲ್ಲಿ ಇದನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಮಹತ್ವ ಏನು?

ಅಂತರಾಷ್ಟ್ರೀಯ ಪುರುಷರ ದಿನದ ಮಹತ್ವ:

ಪುರುಷರ ಕಲ್ಯಾಣದ ಮೇಲೆ ಪ್ರಯತ್ನಗಳನ್ನು ಕೇಂದ್ರೀಕರಿಸಲು ಮತ್ತು ಪುರುಷರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನವೆಂಬರ್ 19 ರಂದು ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಿಸಲಾಗುತ್ತದೆ.  ಪುರುಷರ ಮಾನಸಿಕ ಆರೋಗ್ಯದ ಬಗ್ಗೆ   ಕಾಳಜಿ ವಹಿಸುವುದು, ಸಮಾಜದಲ್ಲಿ ಪುರುಷರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು, ಪುರುಷರ ಸಕಾರಾತ್ಮಕ ಗುಣಗಳನ್ನು ಶ್ಲಾಘಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ಪುರುಷರ ಸಾಧನೆಯನ್ನು ಗೌರವಿವುದು ಹಾಗೂ ಮುಖ್ಯವಾಗಿ ಲಿಂಗ ಸಮಾನತೆಯನ್ನು ಉತ್ತೇಜಿಸುವುದು ಅಂತರಾಷ್ಟ್ರೀಯ ಪುರುಷರ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ.

ನಮ್ಮ ಜೀವನದಲ್ಲಿ ಮಹಿಳೆಯರ ಕೊಡುಗೆಗೆ ಧನ್ಯವಾದ ಹೇಳಲು ನಾವು ಮಹಿಳಾ ದಿನ, ತಾಯಂದಿರ ದಿನ ಮತ್ತು ಸಹೋದರಿಯರ ದಿನವನ್ನು ಆಚರಿಸುತ್ತೇವೆ. ಆದರೆ   ನಮ್ಮ ಜೀವನದಲ್ಲಿ ನಮ್ಮ ತಂದೆ, ಸಹೋದರ, ಬಾಳ ಸಂಗಾತಿ ಮತ್ತು ಸ್ನೇಹಿತರ  ಕೊಡುಗೆಯನ್ನು ಗೌರವಿಸಲು  ನಾವು ಆಗಾಗ್ಗೆ ಮರೆಯುತ್ತೇವೆ. ಆದರೆ ಅಂತರಾಷ್ಟ್ರೀಯ ಪುರುಷರ ದಿನದ ಮೂಲಕ ನಾವು ನಮ್ಮ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಪುರುಷರಿಗೆ ಧನ್ಯವಾದಗಳನ್ನು ತಿಳಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ