National Education Day 2023: ಮೌಲಾನ ಅಬುಲ್ ಕಲಾಂ ಆಜಾದ್ ಯಾರು? ಇವರ ಜನ್ಮ ದಿನದ ಸವಿನೆನಪಿಗಾಗಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ 

Maulana Abul Kalam: ಸುಸ್ಥಿರ ಭವಿಷ್ಯವನ್ನು ನಿರ್ಮಿಸುವಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

National Education Day 2023: ಮೌಲಾನ ಅಬುಲ್ ಕಲಾಂ ಆಜಾದ್ ಯಾರು? ಇವರ ಜನ್ಮ ದಿನದ ಸವಿನೆನಪಿಗಾಗಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 10, 2023 | 5:50 PM

ಶಿಕ್ಷಣವು ಮೂಲಭೂತ ಹಕ್ಕಾಗಿದ್ದು, ಇದು ಒಬ್ಬ ವ್ಯಕ್ತಿಯ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ರೂಪಿಸುವ ಸಾಮರ್ಥ್ಯವನ್ನು ಹೊಂದಿದೆ.  ಶಿಕ್ಷಣವು ವ್ಯಕ್ತಿಯ  ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವವನ್ನು  ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.  ಹಾಗೂ  ಶಿಕ್ಷಣದ ಮೂಲಕ ಸುಸ್ಥಿರ ಸಮಾಜವನ್ನು ರೂಪಿಸಲು ಸಾಧ್ಯ.  ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಲು, ಭಾರತೀಯ  ಶಿಕ್ಷಣ ಕ್ಷೇತ್ರಕ್ಕೆ ಅತ್ಯದ್ಭುತ ಕೊಡುಗೆಯನ್ನು ನೀಡಿದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನದ ಸವಿನೆನಪಿನ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಮೌಲಾನ ಅಬುಲ್ ಕಲಾಂ ಆಜಾದ್ ಯಾರು?

ಭಾರತವು ಇಂದು ದೃಢವಾದ  ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ, ಆ ವ್ಯವಸ್ಥೆಗೆ  ಅಡಿಪಾಯವನ್ನು ಹಾಕಿದ ಕೀರ್ತಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಲ್ಲುತ್ತದೆ.   ಸಮಾಜವನ್ನು ಪರಿವರ್ತಿಸಲು ಮತ್ತು ಜನಸಾಮಾನ್ಯರನ್ನು ಸಬಲಗೊಳಿಸು ಪ್ರಬಲವಾದ ಅಸ್ತ್ರ ಶಿಕ್ಷಣ ಎಂದು  ದೃಢವಾಗಿ ನಂಬಿದ್ದ ಆಜಾದ್,  ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅಡಿಪಾಯ ಹಾಕಿದರು.

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ನವೆಂಬರ್ 11, 1888 ರಲ್ಲಿ ಜನಿಸಿದರು. ಆಜಾದ್ ಒಬ್ಬ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣತಜ್ಞ, ಪತ್ರಕರ್ತ ಮತ್ತು ಬರಹಗಾರರಾಗಿದ್ದರು. ಆಜಾದ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.  ಭಾರತವು ಸ್ವಾತಂತ್ರ್ಯವನ್ನು ಪಡೆದುಕೊಂಡ ನಂತರ, ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ನೇಮಕಗೊಂಡರು  ಮತ್ತು ಇವರು ತಮ್ಮ ಅಧಿಕಾರವಧಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಮತ್ತು ಎಲ್ಲರಿಗೂ ಶಿಕ್ಷಣವನ್ನು ದೊರೆಯುವಂತೆ ಮಾಡುವಲ್ಲಿ ಗಮನಾರ್ಹವಾಗಿ ಕೊಡುಗೆಯನ್ನು ನೀಡಿದ್ದಾರೆ.

ಮೌಲಾನ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣವನ್ನು ಭಾರತದ ಅಭಿವೃದ್ಧಿಯ ಆಧಾರವೆಂದು ಪರಿಗಣಿಸಿದ್ದರು ಮತ್ತು ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯ ಮತ್ತು ಉಚಿತ ಮಾಡಲು ಪ್ರಸ್ತಾಪಿಸಿದರು. ಇದಲ್ಲದೆ  ಅವರು ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ (ICSSR), ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸ್ಥಾಪನೆ ಮಾಡಿದರು.  ಹೀಗೆ ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್  (CSIR), ಇಂಡಿಯನ್ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್ (ICCR), ಸ್ಕೂಲ್ ಆಫ್ ಪ್ಲಾನಿಂಗ್ ಆಂಡ್ ಆರ್ಕಿಟೆಕ್ಚರ್ ಮತ್ತು  ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ಸ್(UGC) ಅನ್ನು ಸ್ಥಾಪಿಸಲಾಯಿತು. ಹೀಗೆ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ, ಆಧುನೀಕರಿಸುವಲ್ಲಿ ಆಜಾದ್ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ದಿನದ ಇತಿಹಾಸ:

ಮೌಲಾನಾ ಅಬುಲ್ ಕಲಾಂ ಆಜಾದ್ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ, ಭಾರತೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡಿದ ಮಹತ್ತರವಾದ ಕೊಡುಗೆಯನ್ನು ಗೌರವಿಸುವ ಸಲುವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2008 ರಲ್ಲಿ ಆಜಾದ್  ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು

ರಾಷ್ಟ್ರೀಯ ಶಿಕ್ಷಣ ದಿನದ ಮಹತ್ವ:

ಶಿಕ್ಷಣದ  ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಶಿಕ್ಷಣದ ಮಹತ್ವದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಮತ್ತು ಮುಖ್ಯವಾಗಿ ಈ ದಿನ  ರಾಷ್ಟ್ರ ನಿರ್ಮಾಣದಲ್ಲಿ ಹಾಗೂ ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕ ಮೌಲಾನಾ ಅಬುಲ್ ಕಲಾಂ ಆಜಾದ್ ಅವರನ್ನು ಸ್ಮರಿಸಲಾಗುತ್ತದೆ. ಶಿಕ್ಷಣವು ನಮ್ಮ ಜೀವನವನ್ನು ಸುಧಾರಿಸುವ ಪ್ರಬಲ ಸಾಧನವಾಗಿದೆ. ಇದು ನಮಗೆ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ನೀಡುತ್ತದೆ. ಶಿಕ್ಷಣದ ಮೂಲಕ ನಮ್ಮ ಗುರಿಯನ್ನು ಸಾಧಿಸಬಹುದು ಹೀಗೆ  ಸುಸ್ಥಿರ ಭವಿಷ್ಯವನ್ನು ನಿರ್ಮಿಸುವಲ್ಲಿ ಶಿಕ್ಷಣ ಪಾತ್ರದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Fri, 10 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ