National Legal Services Day 2023: ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ  ದಿನದ ಹಿನ್ನೆಲೆ, ಮಹತ್ವ ಇಲ್ಲಿದೆ 

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 08, 2023 | 5:00 PM

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯಡಿಯಲ್ಲಿ, ಸಮಾಜದ ದುರ್ಬಲ ವರ್ಗದವರಿಗೆ ಉಚಿತ ಕಾನೂನು ಸೇವೆಗಳ ನೆರವಿನ ಲಭ್ಯತೆಯ ಬಗ್ಗೆ  ಜನರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ನವೆಂಬರ್ 09 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ.  ಈ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

National Legal Services Day 2023: ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ  ದಿನದ ಹಿನ್ನೆಲೆ, ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
Follow us on

ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆ 1987  ಜಾರಿಗೊಂಡ ದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ನವೆಂಬರ್ 09 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು (National Legal Services Day ) ಆಚರಿಸಲಾಗುತ್ತದೆ. ಈ ಕಾಯಿದೆ 1995, ನವೆಂಬರ್ 09 ರಂದು ಜಾರಿಗೆ ಬಂದಿತು. ರಾಷ್ಟ್ರೀಯ ಕಾನೂನು ಸೇವೆಗಳ ದಿನದಂದು ಕಾನೂನು ಜಾಗೃತಿ ಶಿಬಿರಗಳು, ಉಚಿತ ಕಾನೂನು  ಸೇವೆಗಳ  ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸುವಂತಹ ಕಾರ್ಯವನ್ನು ಮಾಡಲಾಗುತ್ತದೆ. ಈ ದಿನದ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

ಕಾನೂನು ಸೇವೆಗಳ ಪ್ರಾದಿಕಾರಗಳ ಕಾಯಿದೆ 1987:

ರಾಷ್ಟ್ರೀಯ ಕಾನೂನ ಸೇವೆಗಳ ದಿನದ ಇತಿಹಾಸವನ್ನು ತಿಳಿದುಕೊಳ್ಳುವ ಮೊದಲು ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ 1987 ಏನೆಂದು ತಿಳಿದುಕೊಳ್ಳುವುದು ಮುಖ್ಯವಾಗಿದೆ.
ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ 1987 ನ್ನು ಕೇಂದ್ರ ಸರ್ಕಾರವು ಭಾರತದ ಸಂವಿಧಾನದ 39A ಮತ್ತು ಅದರ ಸಮಿತಿಯು ಮಾಡಿದ ಶಿಫಾರಸುಗಳಿಗೆ ಅನುಗುಣವಾಗಿ ಜಾರಿಗೆ ತಂದಿದೆ. 1994 ರ ತಿದ್ದುಪಡಿ ಕಾಯಿದೆಯ ನಂತರ ಈ ಕಾಯಿದೆಯನ್ನು ನವೆಂಬರ್ 1995 ರಂದು ಜಾರಿಗೆ ತರಲಾಯಿತು. ಅಂದಿನಿಂದ ಈ ಮುಖ್ಯ ಕಾಯಿದೆಯಲ್ಲಿ ಹಲವಾರು ತಿದ್ದುಪಡಿಗಳನ್ನು ಮಾಡಲಾಗಿದೆ. ಈ ಕಾಯ್ದೆಯ ಮೂಲಕ ಸಮಾಜದ ಹಿಂದುಳಿದ ವರ್ಗಗಳು, ಆರ್ಥಿಕವಾಗಿ ದುರ್ಬಲವಿರುವ ವರ್ಗಗಳು ಮತ್ತು ವಿಕಲಚೇತನರಿಗೆ ಉಚಿತ ಕಾನೂನು ನೆರವನ್ನು ಪಡೆಯುವ ಹಕ್ಕನ್ನು ನೀಡಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ಪಾತ್ರ:

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವನ್ನು  ನ್ಯಾಯಮೂರ್ತಿ ಆರ್.ಎನ್ ಮಿಶ್ರಾ ಡಿಸೆಂಬರ್ 05, 1995 ರಂದು ಕಾನೂನು ಸೇವೆಗಳ ಪ್ರಾಧಿಕಾರ 1987 ರ ಅಡಿಯಲ್ಲಿ ಜಾರಿಗೆ ತಂದರು.  ಈ ಪ್ರಾಧಿಕಾರವು ಅಗತ್ಯವಿರುವವರಿಗೆ ಉಚಿತ ಕಾನೂನು ನೆರವು, ಮಾರ್ಗದರ್ಶನವನ್ನು ಒದಗಿಸುವ ಮತ್ತು ಮಧ್ಯಸ್ಥಿಕೆ ಹಾಗೂ ಸೌಹಾರ್ದಯುತ ಇತ್ಯರ್ಥಗಳ ಮೂಲಕ ಸಮಸ್ಯೆಗಳನ್ನು ಪರಿಹರಿಸುವಂತಹ ಕಾರ್ಯವನ್ನು ಮಾಡುತ್ತದೆ.

ಇದನ್ನೂ ಓದಿ:  ನವೆಂಬರ್  ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತರಾಷ್ಟ್ರೀಯ ದಿನಾಚರಣೆಗಳು ಇಲ್ಲಿದೆ 

ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಇತಿಹಾಸ:

ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ 1987 ನ್ನು ಅಕ್ಟೋಬರ್ 1987 ರಂದು ಕೇಂದ್ರ ಸರ್ಕಾರವು ಭಾರತೀಯ ಸಂವಿಧಾನದ 39A ವಿಧಿಯ ಅಡಿಯಲ್ಲಿ ಮತ್ತು ಅದರ ಸಮಿತಿಯ ಶಿಫಾರಸುಗಳ ಮೇಲೆ ಜಾರಿಗೊಳಿಸಿತು. ಈ ಕಾಯಿದೆಯನ್ನು 09 ನವೆಂಬರ್ 1995 ರಂದು ಜಾರಿಗೆ ತರಲಾಯಿತು. ಈ ಕಾಯಿದೆ ಜಾರಿಗೆ ಬಂದ ದಿನದ ಸ್ಮರಣಾರ್ಥವಾಗಿ ರಾಷ್ಟ್ರೀಯ ಸೇವಾ ದಿನವನ್ನು ಆಚರಿಸುವುದಾಗಿ , 1995 ರಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯವು ಘೋಷಿಸಿತು. ಈ ದಿನದ ಮೂಲಕ ಕಾನೂನು ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸು ಪ್ರಯತ್ನ ಮಾಡಲಾಗುತ್ತಿದೆ. ವ್ಯಕ್ತಿ ಬಡವನಾಗಿರಲಿ, ವಿಕಲ ಚೇತನರಾಗಿರಲಿ, ಸಮಾಜದ ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶವಿದೆ. ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು  ಅವರಿಗೆ ಉಚಿತ ಕಾನೂನು ನೆರವು ಮತ್ತು ಉಚಿತ ಸಮಲೋಚನೆಯನ್ನು  ನೀಡಲಾಗುತ್ತದೆ. ಹೀಗೆ ಜನರಿಗೆ ನ್ಯಾಯ ಪಡೆಯುವ ಹಕ್ಕಿನ ಬಗ್ಗೆ ಅರಿವು ಮೂಡಿಸಲು  ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತದೆ.

ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಮಹತ್ವ:

ಕಾನೂನು ಸೇವೆಗಳ ದಿನವನ್ನು ಆಚರಿಸುವ ಮುಖ್ಯ ಉದ್ದೇಶವು ಸಮಾಜದ ದುರ್ಬಲ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ, ವಿಕಲಚೇತನರಿಗೆ  ಉಚಿತ ಕಾನೂನು ಸಹಾಯ ಮತ್ತು ಬೆಂಬಲವನ್ನು ಒದಗಿಸುವುದಾಗಿದೆ.  ಮತ್ತು ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ ಮತ್ತು ಈ ಕಾಯ್ದೆಯ ಅಡಿಯಲ್ಲಿ ಲಭಿಸುವ ಉಚಿತ ಕಾನೂನು ಸೇವೆಗಳ  ಬಗ್ಗೆ   ಸಾರ್ವಜನಿಕರಿಗೆ ಅರಿವು  ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: