National Milk Day 2023: ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ

ಭಾರತದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸಿದ, ಶ್ವೇತ ಕ್ರಾಂತಿಯ ಪಿತಾಮಹರಾದ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನದ ಸವಿನೆನಪಿಗಾಗಿ ಭಾರತದಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಹಾಲಿನ ಉತ್ಪಾದನೆಯನ್ನು ಉತ್ತೇಜಿಸುವುದು ಮತ್ತು ಹಾಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ದಿನಾಚರಣೆಯನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.

National Milk Day 2023: ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ
National Milk Day Image Credit source: Pinterest
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Nov 25, 2023 | 4:55 PM

ಹಾಲನ್ನು ಸಂಪೂರ್ಣ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಹಾಲು ದೇಹವನ್ನು ಪೋಷಿಸುವ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಇದು ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅತ್ಯಗತ್ಯ ಆಹಾರವಾಗಿದೆ. ವಿಶೇಷವಾಗಿ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ವೈದ್ಯರು ಪ್ರತಿನಿತ್ಯ ಹಾಲು ಕುಡಿಯಲು ಶಿಫಾರಸು ಮಾಡುತ್ತಾರೆ. ಹೀಗೆ ಹಾಲಿನ ಆರೋಗ್ಯ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ತಿಳಿಸಲು ಮತ್ತು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸಲು ಕ್ಷೀರಕ್ರಾಂತಿಯ ಪಿತಾಮಹರಾದ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನವಾದ ನವೆಂಬರ್ 26 ರಂದು ಭಾರತದಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಹಾಲು ದಿನಾಚರಣೆಯ ಇತಿಹಾಸ:

ಪ್ರಸ್ತುತ ಭಾರತವು ಹಾಲು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಶ್ವೇತ ಕ್ರಾಂತಿಯ ಪಿತಾಮಹರಾದ ಡಾ. ವರ್ಗೀಸ್ ಕುರಿಯನ್ ಅವರಿಗೆ ಸಲ್ಲುತ್ತದೆ. ಕುರಿಯನ್ ಅವರು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವಲ್ಲಿ, ಹೈನುಗಾರಿಕೆಯನ್ನು ಉತ್ತೇಜಿಸುವಲ್ಲಿ ಬಹಳಷ್ಟು ಕೊಡುಗೆ ನೀಡಿದ್ದಾರೆ, ಈ ಕಾರಣದಿಂದಾಗಿ ಅವರನ್ನು “ಮಿಲ್ಕ್ ಮ್ಯಾನ್ ಆಫ್ ಇಂಡಿಯಾʼ ಎಂದು ಕರೆಯಲಾಗುತ್ತದೆ.

ಅವರು 1970 ರಲ್ಲಿ ಶ್ವೇತ ಕ್ರಾಂತಿಯನ್ನು ಪ್ರಾರಂಭಿಸಿದರು. ಈ ಕ್ರಾಂತಿಯ ಮುಖ್ಯ ಉದ್ದೇಶವೆಂದರೆ ಹಾಲು ಉತ್ಪಾದನೆಯನ್ನು ಉತ್ತೇಜಿಸುವುದು. ಇದಕ್ಕಾಗಿ ಜನತೆಗೆ ಎಲ್ಲಾ ರೀತಿಯ ನೆರವು ನೀಡುವುದು. ಡಾ. ವರ್ಗೀಸ್ ಕುರಿಯನ್ 1965 ರಿಂದ 1998 ರ ವರೆಗೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು. ಈ ಸಮಯದಲ್ಲಿ ಅವರು ದೇಶದ ಮೂಲೆ ಮೂಲೆಯಲ್ಲೂ ಹಾಲು ಉತ್ಪಾದನೆಯನ್ನು ಉತ್ತೇಜಿಸುವ ಪ್ರಯತ್ನವನ್ನು ಮಾಡುತ್ತಾರೆ. ಈ ಕ್ರಾಂತಿಯ ಫಲವಾಗಿ ಭಾರತವು ಇಂದು ಹಾಲು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.

ಇದನ್ನೂ ಓದಿ: ಡಿಸೆಂಬರ್ ತಿಂಗಳಲ್ಲಿ ಆಚರಿಸುವ ಪ್ರಮುಖ ಹಬ್ಬಗಳಾವುವು?

ಹಾಗಾಗಿ ದೇಶದ ಉತ್ಪಾದನೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ ಡಾ. ವರ್ಗೀಸ್ ಅವರ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (NDDB), ಇಂಡಿಯನ್ ಡೈರಿ ಅಸೋಸಿಯೇಷನ್ (IDA) ಮತ್ತು 22 ರಾಜ್ಯಮಟ್ಟದ ಡೈರಿ ಫೆಡರೇಷನ್ಗಳ ಸಹಯೋಗದಲ್ಲಿ 2014 ರಲ್ಲಿ ನವೆಂಬರ್ 26 ಅಂದರೆ ವರ್ಗೀಸ್ ಅವರ ಜನ್ಮದಿನದಂದು ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ಡಾ. ವರ್ಗೀಸಸ್ ಕುರಿಯನ್ ಅವರ ಗೌರವಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಹಾಲು ದಿನಾಚರಣೆಯ ಮಹತ್ವ:

ಭಾರತದಲ್ಲಿ ಹಾಲಿನ ಉತ್ಪಾದನೆಯನ್ನು ಉತ್ತೇಜಿಸುವುದು ಮತ್ತು ಹಾಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ದಿನಾಚರಣೆಯನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ. ಈ ದಿನದಂದು ಜನರಿಗೆ ಹಾಲು ಉತ್ಪಾದನೆ ಮತ್ತು ಅದರ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸೂಕ್ತ ಮಾಹಿತಿಗಳನ್ಉ ನೀಡಲಗುತ್ತದೆ. ಅಲ್ಲದೆ ಈ ದಿನವು ವ್ಯಕ್ತಿಯ ಜೀವನದಲ್ಲಿ ಹಾಲಿನ ಮಹತ್ವದ ಬಗ್ಗೆ ತಿಳಿಸುತ್ತದೆ. 2014 ರಿಂದ ಈ ವಿಶೇಷ ದಿನವನ್ನು ಭಾರತದಲ್ಲಿ ಆಚರಿಸುತ್ತಾ ಬರಲಾಗುತ್ತಿದೆ. ನಮ್ಮ ಆಹಾರ ಮತ್ತು ಆರ್ಥಿಕತೆಯಲ್ಲಿ ಹಾಲಿನ ಪ್ರಾಮುಖ್ಯತೆ ದೊಡ್ಡದಾಗಿದೆ. ಈ ದಿನದಂದು ಸಾರ್ವಜನಿಕರಿಗೆ ಡೈರಿ ಉತ್ಪನ್ನಗಳು ಮತ್ತು ಹಾಲಿನ ಪ್ರಯೋಜನಗಳ ಬಗ್ಗೆ ತಿಳಿಸಲು ಅನೇಕ ಅಭಿಯಾನಕಾರ್ಯಗಳನ್ನು ಸಹ ನಡೆಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು