ಸುನಾಮಿಯಂತಹ ವಿನಾಶಕಾರಿ ಪ್ರಾಕೃತಿಕ ವಿಕೋಪಗಳು ಅದೆಷ್ಟೋ ಜೀವಗಳು ಬಲಿ ತೆಗೆದುಕೊಳ್ಳುತ್ತವೆ. ಅಲ್ಲದೆ ಇಂತಹ ಘಟನಗಳಿಂದ ಆಸ್ತಿಪಾಸ್ತಿಗಳು ನಷ್ಟ ಸೇರಿದಂತೆ ಹಲವಾರು ತೊಂದರೆಗಳು ಸಂಭವಿಸುತ್ತದೆ. ವಿಶ್ವ ಸಂಸ್ಥೆಯ ವರದಿ ಪ್ರಕಾರ ಸುನಾಮಿಯು ಸಾಕಷ್ಟು ಅಪಾಯಕಾರಿಯಾಗಿದೆ. ಸುನಾಮಿಯು ಇಲ್ಲಿಯವರೆಗೆ ಲಕ್ಷಾಂತರ ಜನರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಈ ಹಿಂದೆ ಡಿಸೆಂಬರ್ 2004ರಲ್ಲಿ ಹಿಂದೂ ಮಹಾಸಾಗರದಲ್ಲಿ ವಿನಾಶಕಾರಿ ಸುನಾಮಿ ಸಂಭವಿಸಿತ್ತು. ಈ ಭೀಕರ ಸುನಾಮಿಯಿಂದಾಗಿ ಇಂಡೋನೇಷ್ಯಾ, ಶ್ರೀಲಂಕಾ, ಭಾರತ ಮತ್ತು ಥೈಲ್ಯಾಂಡ್ ಸೇರಿದಂತೆ 14 ದೇಶಗಳಲ್ಲಿ ಲಕ್ಷಾಂತರ ಜೀವ ಹಾನಿಗಳು ಸಂಭವಿಸಿತ್ತು. ಆ ಬಳಿಕ ಸುನಾಮಿಯ ವಿನಾಶಕಾರಿ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು, ಸುನಾಮಿಯಂತಹ ವಿನಾಶಕಾರಿ ಪ್ರಾಕೃತಿಕ ವಿಕೋಪಗಳ ಅಪಾಯಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಹಾಗೂ ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸುನಾಮಿ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿದುಕೊಳ್ಳೋಣ.
2004 ರಲ್ಲಿ ಸಂಭವಿಸಿದ ವಿನಾಶಕಾರಿ ಸುನಾಮಿಯ ನಂತರ ವಿಪತ್ತುಗಳಿಂದ ಉಂಟಾಗುವ ಅಪಾಗಳನ್ನು ಕಡಿಮೆ ಮಾಡಲು ಜಗತ್ತಿನಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ. ಅಲ್ಲದೆ ಈ ಅಪಾಯಗಳು ಸಂಭವಿಸಿದಾಗ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ವಿಶ್ವದ ಹಲವು ರಾಷ್ಟ್ರಗಳು ಒಗ್ಗೂಡಿ ವಿಶ್ವಸಂಸ್ಥೆಗೆ ಬೇಡಿಕೆ ಸಲ್ಲಿಸಿದವು. ಈ ಪ್ರಯತ್ನಗಳ ಫಲವೇ 2015 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನವೆಂಬರ್ 05 ರಂದು ವಿಶ್ವ ಸುನಾಮಿ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಿತು.
ಮೊದಲ ವಿಶ್ವ ಸುನಾಮಿ ಜಾಗೃತಿ ದಿನವನ್ನು 05 ನವೆಂಬರ್ 2016 ರಂದು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ಜಾಗೃತಿ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಿಸಲಾಗುತ್ತಿದೆ.
ಇದನ್ನೂ ಓದಿ: ವಿಶ್ವ ಜೆಲ್ಲಿ ಫಿಶ್ ದಿನ, ಈ ದಿನದ ಇತಿಹಾಸ ಪ್ರಾಮುಖ್ಯತೆ ಏನು?
ಪ್ರಪಂಚದಾದ್ಯಂತ ಸುನಾಮಿ ಮತ್ತು ಇತರೆ ಪ್ರಾಕೃತಿಕ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವುದು, ಅದರ ಅಪಾಯಗಳನ್ನು ಕಡಿಮೆ ಮಾಡುವ ಪ್ರಯತ್ನಗಳು, ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಆರಂಭಿಕ ಕ್ರಮಗಳ ಕುರಿತು ಜಾಗೃತಿಯನ್ನು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಪ್ರಕೃತಿ ವಿಕೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಿಂದ ವಿಪತ್ತು ಸಂಭವಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆ ಜೀವಗಳನ್ನು ಉಳಿಸಬಹುದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ