AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World AIDS Day 2023: ವಿಶ್ವ ಏಡ್ಸ್ ದಿನದ ಇತಿಹಾಸ, ಮಹತ್ವ

ಏಡ್ಸ್ ಗುಣಪಡಿಸಲಾಗದ ಹಾಗೂ ಗಂಭೀರ ಕಾಯಿಲೆಯಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಹಾಗಾಗಿ ಈ ಮಾರಣಾಂತಿಕ  ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ಧೇಶದಿಂದ ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ.  ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

World AIDS Day 2023: ವಿಶ್ವ ಏಡ್ಸ್ ದಿನದ ಇತಿಹಾಸ, ಮಹತ್ವ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 30, 2023 | 5:20 PM

ಏಡ್ಸ್ ಗಂಭೀರ ಮತ್ತು ಗುಣಪಡಿಲಾಗದ ಕಾಯಿಲೆಯಾಗಿದೆ. ಹ್ಯೂಮನ್ ಇಮ್ಯೂನೊ ಡಿಫಿಷಿಯೆನ್ಸಿ ವೈರಸ್ (H.I.V) ನಿಂದ ಉಂಟಾಗುವ ಈ ರೋಗವು ಸೋಂಕಿತ ವ್ಯಕ್ತಿಯ ಜೀವಕ್ಕೆ ಮಾರಕವಾಗಿ ಪರಿಣಾಮಿಸಬಹುದು. ಈ ಕಾಯಿಲೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಈ ಕಾರಣದಿಂದ ಈ ವೈರಸ್ ದೇಹದಲ್ಲಿ ವೇಗವಾಗಿ ಹರಡಲು ಪ್ರಾರಂಭಿಸುತ್ತದೆ. ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡದಿದ್ದರೆ, ಈ ಕಾಯಿಲೆ ಮಾರಣಾಂತಿಕವಾಗಿ ಪರಿಣಮಿಸುತ್ತದೆ.  ಅಸುರಕ್ಷಿತ ಲೈಂಗಿಕತೆ, ಸೋಂಕಿತ ರಕ್ತದ ವರ್ಗಾವಣೆಯ ಮೂಲಕ ಅಥವಾ ಸೋಂಕಿತ ವ್ಯಕ್ತಿಯ ಚುಚ್ಚು ಮದ್ದಿನ ಹಂಚಿಕೆಯ ಮೂಲಕ ಈ ಸೋಂಕು ಒಬ್ಬ ವ್ಯಕ್ತಿಯಿಂದ  ಇನ್ನೊಬ್ಬ ವ್ಯಕ್ತಿಗೆ ಹರಡಬಹುದು. ವಿಶೇಷವಾಗಿ ಈ ಒಂದು  ರೋಗದ ಬಗ್ಗೆ  ಹಲವು ತಪ್ಪು ಕಲ್ಪನೆಗಳಿವೆ. ಇಂದಿಗೂ ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಸಮಾಜದಲ್ಲಿ ಬಹಳ ಕೀಳರಿಮೆಯಿಂದ ನೋಡಲಾಗುತ್ತದೆ.  ಹಾಗಾಗಿ ಏಡ್ಸ್ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು, ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಈ ರೋಗವನ್ನು ತಡೆಗಟ್ಟುವ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್  1 ರಂದು ವಿಶ್ವ ಏಡ್ಸ್ ದಿನವನ್ನು (World AIDS Day) ಆಚರಿಸಲಾಗುತ್ತದೆ.

ವಿಶ್ವ ಏಡ್ಸ್ ದಿನದ ಇತಿಹಾಸ:

ವಿಶ್ವ ಏಡ್ಸ್ ದಿನವನ್ನು ಮೊದಲ ಬಾರಿಗೆ 1988 ರಲ್ಲಿ ಆಚರಿಸಲಾಯಿತು. 1981 ರಲ್ಲಿ ಮೊದಲ ಏಡ್ಸ್ ಪ್ರಕರಣ ವರದಿಯಾದ ನಂತರ,  ಸುಮಾರು 25 ಮಿಲಿಯನ್ ಜನರು ಈ ಕಾಯಿಲೆಗೆ ತುತ್ತಾಗಿ ಪ್ರಾಣವನ್ನು ಕಳೆದುಕೊಂಡರು. ಇಂತಹ ಪರಿಸ್ಥಿತಿಯಲ್ಲಿ ಈ ಗಂಭೀರ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಅಗತ್ಯವಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆನ್ನುವ ಸಲುವಾಗಿ 1987 ರಲ್ಲಿ ಥಾಮಸ್ ನೆಟ್ಟರ್ ಮತ್ತು ಜೇಮ್ಸ್ ಡಬ್ಲ್ಯೂ ಬನ್ ಅವರು ಏಡ್ಸ್ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಜಾರಿಗೆ ತಂದರು.  ಅದರ ಮಾರನೇ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು  ಈ ದಿನವನ್ನು ವಿಶ್ವ ಮಟ್ಟದಲ್ಲಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಮೂಲಕ ಪ್ರತಿಯೊಂದು ದೇಶದ ಸರ್ಕಾರಗಳು ಈ ರೋಗದ ಹರಡುವಿಕೆ ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಇದನ್ನೂ ಓದಿ: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ವಿಶ್ವ ಏಡ್ಸ್ ದಿನದ ಪ್ರಾಮುಖ್ಯತೆ:

ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವದಾದ್ಯಂತ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಈ ರೋಗದ ಹರಡುವಿಕೆ ಮತ್ತು ಅದರ ತಡೆಗಟ್ಟುವಿಕೆಯ  ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ.

ಏಡ್ಸ್ ರೋಗದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಈ ರೋಗಕ್ಕೆ ತುತ್ತಾದವರು  ಸಮಾಜದಲ್ಲಿ ತಾರತಮ್ಯವಿಲ್ಲದೆ ಸುರಕ್ಷಿತ ಜೀವನ ನಡೆಸುವಂತಾಗಬೇಕು ಮತ್ತು ಈ ರೋಗದ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕೆಂದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಈ ದಿನ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಈ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ