World Breastfeeding Week 2023: ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಏಕೆ ಆಚರಿಸಲಾಗುತ್ತದೆ? ಇದರ ಮಹತ್ವವೇನು?

ಸ್ತನ್ಯಪಾನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಮತ್ತು ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸುವ ಉದ್ದೇಶದಿಂದ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಪ್ರತಿ ವರ್ಷ ಆಗಸ್ಟ್ 1 ರಿಂದ ಅಂದರೆ ಇಂದಿನಿಂದ ಆಗಸ್ಟ್ 7ರ ವರೆಗೆ ಆಚರಿಸಲಾಗುತ್ತದೆ. ಈ ಸ್ತನ್ಯಪಾನ ವಾರ ಹೇಗೆ ಪ್ರಾರಂಭವಾಯಿತು, ಈ ಸಪ್ತಾಹದ ಮಹತ್ವವೇನು ಎಂಬುದನ್ನು ತಿಳಿಯೋಣ.

World Breastfeeding Week 2023: ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಏಕೆ ಆಚರಿಸಲಾಗುತ್ತದೆ? ಇದರ ಮಹತ್ವವೇನು?
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 01, 2023 | 6:21 PM

ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ. ಆದ್ದರಿಂದಲೇ ತಾಯಿ ಎದೆಹಾಲು ಅಮೃತವಿದ್ದಂತೆ ಎಂದು ಹೇಳಲಾಗುತ್ತದೆ. ತಾಯಿಯ ಎದೆಹಾಲಿಗೆ ಸಂಬಂಧಿಸಿದ ಈ ವಿಶೇಷತೆಗಳನ್ನು ಜಗತ್ತಿಗೆ ತಿಳಿಸಲು ಮತ್ತು ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಲು ಆಗಸ್ಟ್ ಮೊದಲ ವಾರವನ್ನು ವಿಶ್ವಸ್ತನ್ಯಪಾನ ಸಪ್ತಾಹವನ್ನಾಗಿ ಆಚರಿಸಲಾಗುತ್ತದೆ. ಆಗಸ್ಟ್ 1 ರಿಂದ ಅಂದರೆ ಇಂದಿನಿಂದ ಆಗಸ್ಟ್ 7ರ ವರೆಗೆ ನಡೆಯುವ ಈ ಸಪ್ತಾಹದಲ್ಲಿ ತಾಯಿಯ ಎದೆಹಾಲಿನ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಮತ್ತು ಮಗುವಿನ ಆರೋಗ್ಯಕ್ಕೆ ತಾಯಿಯ ಹಾಲು ಎಷ್ಟೊಂದು ಪ್ರಾಮುಖ್ಯ ಎಂಬುದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ವಿಶೇಷ ಸಪ್ತಾಹಕ್ಕೆ ಸಂಬಂಧಿಸಿದ ವಿಶೇಷ ವಿಷಯಗಳನ್ನು ತಿಳಿದುಕೊಳ್ಳೋಣ

ವಿಶ್ವ ಸ್ತನ್ಯಪಾನ ಸಪ್ತಾಹ ಹೇಗೆ ಪ್ರಾರಂಭವಾಯಿತು?

ಸ್ತನ್ಯಪಾನದ ಪ್ರಯೋಜನಗಳು ಮತ್ತು ಮಗುವಿಗೆ ಹಾಲುಣಿಸಲು ತಾಯಂದಿರನ್ನು ಪ್ರೇರೇಪಿಸುವ ಸಲುವಾಗಿ 1991ರಲ್ಲಿ ವರ್ಲ್ಡ್ ಅಲೈಯನ್ಸ್ ಫಾರ್ ಬ್ರೆಸ್ಟ್ ಫೀಡಿಂಗ್ ಆಕ್ಷನ್ (WABA) ಅನ್ನು ರಚಿಸಲಾಯಿತು. ಆರಂಭದಲ್ಲಿ ವರ್ಷಕ್ಕೆ ಒಂದು ದಿನ ಸ್ತನ್ಯಪಾನ ದಿನವನ್ನು ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಈ ವಿಷಯವು ಸಾಮಾನ್ಯ ಜೀವನ ಮತ್ತು ಮಕ್ಕಳ ಆರೋಗ್ಯದಂತಹ ಸಮಸ್ಯೆಗಳಿಗೆ ಸಂಬಂಧಿಸಿರುವುದರಿಂದ ಅದರ ಉಪಯುಕ್ತತೆ ಮತ್ತು ಅಗತ್ಯವನ್ನು ಪರಿಗಣಿಸಿ, ಒಂದು ವಾರಗಳ ಕಾಲ ಈ ಜಾಗೃತಿ ಕಾರ್ಯವನ್ನು ಆಚರಿಸಲು ನಿರ್ಧರಿಸಲಾಯಿತು. ಇದಕ್ಕೆ ವಿಶ್ವ ಸ್ತನ್ಯಪಾನ ಸಪ್ತಾಹ (World Breastfeeding Week) ಎಂದು ಹೆಸರಿಡಲಾಯಿತು. ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಮೊದಲ ಬಾರಿಗೆ 1992ರಲ್ಲಿ ಆಯೋಜಿಸಲಾಯಿತು. ಶಿಶುಗಳಿಗೆ ಹಾಲುಣಿಸಲು ತಾಯಂದಿರನ್ನು ಉತ್ತೇಜಿಸುವುದು ಮತ್ತು ಪ್ರಪಂಚದಾದ್ಯಂತ ಮಕ್ಕಳ ಆರೋಗ್ಯವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇಂದು ನೂರಕ್ಕೂ ಹೆಚ್ಚು ದೇಶಗಳು ಈ ಸಾಪ್ತಾಹಿಕ ಜಾಗೃತಿ ಕಾರ್ಯವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಪ್ರಸವಾನಂತರದ ಖಿನ್ನತೆ ಸ್ಯನ್ಯಪಾನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

ವಿಶ್ವ ಸ್ತನ್ಯಪಾನ ಸಪ್ತಾಹದ ಮಹತ್ವ:

ವಿಶ್ವ ಸ್ತನ್ಯಪಾನ ಸಪ್ತಾಹವು ಸ್ತನ್ಯಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುತ್ತದೆ. ನವಜಾತ ಶಿಶುಗಳಿಗೆ ಮತ್ತು ಮಕ್ಕಳ ತಾಯಂದಿರಿಗೆ ಸ್ತನ್ಯಪಾನ ಏಕೆ ಅಗತ್ಯ ಎಂಬುದನ್ನು ತಿಳಿಸುವುದು ಈ ಸಪ್ತಾಹವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಪ್ರತಿ ಮೂರು ಮಕ್ಕಳಲ್ಲಿ ಇಬ್ಬರು ಮಕ್ಕಳು ಎದೆಹಾಲು ಕುಡಿಯುತ್ತಿಲ್ಲ. ಹೀಗಾಗಿ ಈ ಜಾಗೃತಿ ಕಾರ್ಯವನ್ನು ಆಚರಿಸುವುದು ಹೆಚ್ಚು ಮಹತ್ವದ್ದಾಗಿದೆ.

ಸ್ತನ್ಯಪಾನದ ಪ್ರಾಮುಖ್ಯತೆ:

ತಾಯಿಯ ಹಾಲು ಶಿಶುಗಳಿಗೆ ಅಮೃತವಿದ್ದಂತೆ. ಇದು ಬಾಲ್ಯದಲ್ಲಿ ಬರುವ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ. ಇದು ಮಗುವಿಗೆ ಹುಟ್ಟಿದ ಮೊದಲ ಕೆಲವು ತಿಂಗಳುಗಳಿಗೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಎದೆಹಾಲು ಕುಡಿಯುವ ಮಕ್ಕಳು ಆರೊಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಕಡಿಮೆ. ಹಾಗೂ ವೈದ್ಯರ ಪ್ರಕಾರ ಸ್ತನ್ಯಪಾನ ಮಾಡುವ ಮಹಿಳೆಯರು ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್ ಗಳ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಕಡಿಮೆ. ಹೀಗೆ ಸ್ತನ್ಯಪಾನದಿಂದ ತಾಯಿ ಮತ್ತು ಮಗುವಿಗೆ ಹಲವಾರು ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ. ಈ ಎಲ್ಲದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ