World Cotton Day 2023: ವಿಶ್ವ ಹತ್ತಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ಆಚರಣೆಯ ಹಿನ್ನೆಲೆ  ಮಹತ್ವ ಇಲ್ಲಿದೆ 

ಪ್ರಪಂಚದಾದ್ಯಂತ ಹತ್ತಿ ಉತ್ಪಾದನೆಯನ್ನು ಉತ್ತೇಜಿಸುವುದು, ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶವನ್ನು ಒದಗಿಸುವುದು ಮತ್ತು ಹತ್ತಿಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಅಕ್ಟೋಬರ್ 7 ರಂದು ವಿಶ್ವ ಹತ್ತಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದರೆ ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? ಅದರ ಪ್ರಾಮುಖ್ಯತೆ  ಏನು ಎಂಬುದನ್ನು ತಿಳಿಯೋಣ.  

World Cotton Day 2023: ವಿಶ್ವ ಹತ್ತಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ಆಚರಣೆಯ ಹಿನ್ನೆಲೆ  ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 05, 2023 | 6:21 PM

ಹತ್ತಿಯು ವಿವಿಧೋದ್ದೇಶ ಸಸ್ಯವಾಗಿದ್ದು, ವೈದ್ಯಕೀಯ ಕ್ಷೇತ್ರ, ಪಶು ಆಹಾರಗಳು, ಖಾದ್ಯ ತೈಲ ಮತ್ತು ಜವಳಿ ಉದ್ಯಮಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹತ್ತಿ ಬೆಳೆಯನ್ನು ಹೆಚ್ಚಾಗಿ ಭಾರತ ಸೇರಿದಂತೆ ಉಷ್ಣವಲಯದ ದೇಶಗಳಲ್ಲಿ ಬೆಳೆಯಲಾಗುತ್ತದೆ.  ಆದರೆ ಇಂದು ಹವಾಮಾನ ಬದಲಾವಣೆ ಮತ್ತು ಇತರ ಸಮಸ್ಯೆಗಳಿಂದ ಅದರ ಉತ್ಪಾದನೆ ಕಡಿಮೆಯಾಗುತ್ತಿದೆ. ಹತ್ತಿ ಕ್ಷೇತ್ರವು ಇಂದು  ಇದೇ ರೀತಿಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ  ಹತ್ತಿ ಉತ್ಪಾದನೆಗೆ ಸಂಬಂಧಿಸಿದ ಸವಾಲುಗಳನ್ನು ಎತ್ತಿ ತೋರಿಸಲು, ಹತ್ತಿ  ಉತ್ಪಾದನೆಗೆ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು, ಮತ್ತು  ಹತ್ತಿ ಬೆಳೆಯನ್ನು ಜಾಗತಿಕ ಮಟ್ಟದಲ್ಲಿ ಉತ್ತೇಜಿಸುವ ಸಲುವಾಗಿ ಅಕ್ಟೋಬರ್   07 ರಂದು ವಿಶ್ವ ಹತ್ತಿ ದಿನವನ್ನು ಆಚರಿಸಲಾಗುತ್ತದೆ.  ಹಾಗಾದರೆ ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? ಅದರ ಪ್ರಾಮುಖ್ಯತೆ  ಏನು ಎಂಬುದನ್ನು ತಿಳಿಯೋಣ.

ವಿಶ್ವ ಹತ್ತಿ ದಿನದ ಇತಿಹಾಸ:

ಮೊದಲ ಬಾರಿಗೆ ಹತ್ತಿ ದಿನವನ್ನು ಅಕ್ಟೋಬರ್ 07, 2019 ರಂದು ಆಚರಿಸಲಾಯಿತು. ಬೆನಿನ್, ಬುರ್ಕಿನಾ, ಫಾಸೊ, ಚಾಡ್ ಮತ್ತು ಮಾಲಿ ಈ ನಾಲ್ಕು ದೇಶಗಳು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಗೆ   ಸಲ್ಲಿಸಿದ ಪ್ರಸ್ತಾವನೆಯ  ಮೇರೆಗೆ  ವಿಶ್ವ ವ್ಯಾಪರ ಸಂಸ್ಥೆ (WTO) ಸಚಿವಾಲಯವು  ವಿಶ್ವ ಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO), ವಿಶ್ವಸಂಸ್ಥೆಯ  ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನ (UNCTAD), ಅಂತರಾಷ್ಟ್ರೀಯ ವ್ಯಾಪಾರ ಕೇಂದ್ರ (ITC) ಮತ್ತು ಅಂತರಾಷ್ಟ್ರೀಯ ಹತ್ತಿ ಸಲಹಾ ಸಮಿತಿಯ ಕಾರ್ಯದರ್ಶಿಗಳ ಸಹಯೋಗದೊಂದಿಗೆ  ವಿಶ್ವ ಹತ್ತಿ ದಿನದ ಆಚರಣೆಯನ್ನು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಹತ್ತಿಬೆಳೆಯನ್ನು ಉತ್ತೇಜಿಸುವ  ಹಾಗೂ ಹತ್ತಿ ಬೆಳೆಗಾರರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಅಕ್ಟೋಬರ್ 07 ರಂದು ವಿಶ್ವದಾದ್ಯಂತ ಹತ್ತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಹತ್ತಿ ದಿನದ ಆಚರಣೆಯ ಉದ್ದೇಶ ಮತ್ತು ಪ್ರಾಮುಖ್ಯತೆ:

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಹತ್ತಿಗೆ ಭಾರಿ ಬೇಡಿಕೆ ಇದೆ. ಆದರೆ ಇಂದು ಹವಮಾನ ಬದಲಾವಣೆ ಮತ್ತು ಇತರ ಸಮಸ್ಯೆಗಳ ಕಾರಣದಿಂದಾಗಿ ಇದರ  ಉತ್ಪಾದನೆಯು ಕಡಿಮೆಯಾಗುತ್ತದೆ. ಹತ್ತಿ ಬೆಳೆಯು ಅನೇಕ ಜನರಿಗೆ ಉದ್ಯೋಗದ ಹಾಗೂ ಆದಾಯದ ಪ್ರಮುಖ ಮೂಲವಾಗಿದೆ. ಹಾಗಾಗಿ ಹತ್ತಿಯ ಮಹತ್ವವನ್ನು ಜಗತ್ತಿಗೆ ಸಾರುವುದು ಈ ದಿನವನ್ನು ಆಚರಿಸುವ ಮುಖ್ಯ  ಉದ್ದೇಶಗಳಲ್ಲಿ ಒಂದಾಗಿದೆ.

ಇದನ್ನೂ ಓದಿ:ಬಾಲ್ಯದ ನೆನಪುಗಳನ್ನು ಮತ್ತೆ ಮರುಕಳಿಸುವಂತೆ ಮಾಡುವ ಕಾಟನ್ ಕ್ಯಾಂಡಿ 

ವಿಶ್ವ ಹತ್ತಿ ದಿನವು ಉತ್ತಮ ಉತ್ಪಾದನೆ, ಉತ್ತಮ ಪೋಷಣೆ, ಉತ್ತಮ ಪರಿಸರ ಮತ್ತು ಉತ್ತಮ ಜೀವನಕ್ಕಾಗಿ ಸುಸ್ಥಿರ ಹತ್ತಿ ವಲಯದ ಬದ್ಧತೆಯನ್ನು ನವೀಕರಿಸಲು ಅನನ್ಯ ಅವಕಾಶವನ್ನು ನೀಡುತ್ತದೆ.  ಅಲ್ಲದೆ  ಹತ್ತಿ ಉತ್ಪಾದನೆಗೆ ಅಗತ್ಯವಿರುವ ಎಲ್ಲಾ ಬದಲಾವಣೆಗಳನ್ನು ಮಾಡುವುದು, ಹತ್ತಿ ಉತ್ಪಾದನಾ ತಂತ್ರಗಳ ಅಭಿವೃದ್ಧಿಯನ್ನು ಉತ್ತೇಜಿಸುವುದು,  ಮತ್ತು ಗರಿಷ್ಠ ಉದ್ಯೋಗಾವಾಕಾಶವನ್ನು ಒದಗಿಸುವುದು ವಿಶ್ವ ಹತ್ತಿ ದಿನದ  ಉದ್ದೇಶವಾಗಿದೆ. ಈ ದಿನ ಹತ್ತಿಯ ಅನೇಕ ಪ್ರಯೋಜನಗಳ ಕುರಿತು ಜನರಿಗೆ ಅರಿವು ಮೂಡಿಸಲು  ಹಾಗೂ ಹತ್ತಿಯ ಉತ್ತಮ ಫಸಲನ್ನು ಪಡೆಯುವ ಮಾರ್ಗಗಳ ಬಗ್ಗೆ ಹತ್ತಿ ಬೆಳೆಗಾರರಿಗೆ ಮಾರ್ಗದರ್ಶನ ಹಾಗೂ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ