World Mosquito Day 2023: ವಿಶ್ವ ಸೊಳ್ಳೆ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಹಿಂದಿನ ಇತಿಹಾಸ ಇಲ್ಲಿದೆ

ಮನುಷ್ಯರ ರಕ್ತ ಹೀರುವ ಸೊಳ್ಳೆಗಳು ಗಾತ್ರದಲ್ಲಿ ಚಿಕ್ಕದಾಗಿರಬಹುದು, ಆದರೆ ಅವು ಪ್ರತಿ ವರ್ಷ ಪ್ರಪಂಚದಾದ್ಯಂತ ಹಲವಾರು ಸಾವುಗಳಿಗೆ ಕಾರಣವಾಗುತ್ತದೆ. ಈ ಪರಾವಲಂಬಿ ಜೀವಿಗಳು ಮಲೇರಿಯಾ, ಡೆಂಗ್ಯೂ ಮುಂತಾದ ಮಾರಣಾಂತಿಕ ರೋಗಗಳನ್ನು ಹರಡುತ್ತದೆ. ಪ್ರತಿ ವರ್ಷ ಮಲೇರಿಯಾ ರೋಗಕ್ಕೆ ತುತ್ತಾಗಿ ಅದೆಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಮಲೇರಿಯಾ ರೋಗವನ್ನು ಹಾಗೂ ಸೊಳ್ಳಗಳಿಂದ ಹರಡುವ ಇನ್ನಿತರ ರೋಗಗಳನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಹಿಂದಿನ ಇತಿಹಾಸವೇನು ಎಂಬುದನ್ನು ನೋಡೋಣ.

World Mosquito Day 2023: ವಿಶ್ವ ಸೊಳ್ಳೆ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಹಿಂದಿನ ಇತಿಹಾಸ ಇಲ್ಲಿದೆ
World Mosquito Day
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 19, 2023 | 6:40 AM

ಯಾವುದೇ ಋತುವಿನಲ್ಲಾದರೂ ಸರಿ, ಸೊಳ್ಳೆಯ ಕಾಟ ತಪ್ಪಿದ್ದಲ್ಲ.ಸೊಳ್ಳೆ ಕಡಿತದಿಂದ ಡೆಂಗ್ಯೂ, ಜಿಕಾ ವೈರಸ್, ಚಿಕನ್ ಗುನ್ಯಾ ಮತ್ತು ಮಲೇರಿಯಾದಂತಹ ಮಾರಣಾಂತಿಕ ರೋಗಗಳು ಮನುಷ್ಯರಿಗೆ ಭಾದಿಸುತ್ತದೆ. ಇದರಿಂದ ಪ್ರತಿವರ್ಷ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಸೊಳ್ಳೆಯ ಕಾಟದಿಂದ ತಪ್ಪಿಸಲು ಮನೆಯ ಸುತ್ತಮಮುತ್ತ ಆದಷ್ಟು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಜಾಗೃತಿ ಮೂಡಿಸಲಾಗುತ್ತದೆ. ಏಕೆಂದರೆ ಹೆಣ್ಣು ಅನಾಫಿಲಿಕ್ ಸೊಳ್ಳೆಗಳ ಕಡಿತದಿಂದ ಮಲೇರಿಯಾದಂತಹ ರೋಗಗಳು ಭಾದಿಸಬಹುದು. ಈ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಹಿಂದಿನ ಇತಿಹಾಸವೇನು ಎಂಬುದನ್ನು ನೋಡೋಣ.

ವಿಶ್ವ ಸೊಳ್ಳೆ ದಿನ ಆಚರಣೆಯ ಹಿಂದಿನ ಇತಿಹಾಸ:

ಪ್ರತಿ ವರ್ಷ ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲಾಗುತ್ತದೆ. 1897 ರ ವೇಳೆಯಲ್ಲಿ ಬ್ರಿಟೀಷ್ ವೈದ್ಯ ಸರ್ ರೊನಾಲ್ಡ್ ರಾಸ್ ಅವರು ಸೊಳ್ಳೆಗಳು ಮತ್ತು ಅವುಗಳಿಂದ ಉಂಟಾಗುವ ರೋಗಗಳ ಬಗ್ಗೆ ಸಂಶೋಧನೆ ಮಾಡಿದರು. ಹಾಗೂ 1897 ಆಗಸ್ಟ್ 20 ರಂದು ಹೆಣ್ಣು ಅನಾಫಿಲಿಕ್ ಸೊಳ್ಳೆ ಕಡಿತದಿಂದ ಮನುಷ್ಯರಿಗೆ ಮಲೇರಿಯಾ ಕಾಯಿಲೆ ಹರಡುತ್ತದೆ ಎಂದು ಡಾ. ರೊನಾಲ್ಡ್ ತಮ್ಮ ಸಂಶೋಧನೆಯಲ್ಲಿ ಕಂಡುಕೊಂಡರು. ಅವರ ಈ ಆವಿಷ್ಕಾರವು ರೋಗದ ಬಗ್ಗೆ ಜಾಗೃತಿಯನ್ನು ಮೂಡಿಸಲು ಕಾರಣವಾಯಿತು. ಸರ್ ರಾಸ್ ಮತ್ತು ಅವರ ತಂಡದ ಈ ಅದ್ಭುತ ಸಂಶೋಧನೆಯನ್ನು ಶ್ಲಾಘಿಸಲು “ಲಂಡನ್ ಸ್ಕೂಲ್ ಆಫ್ ಹೈಜೀನ್ ಆಂಡ್ ಮೆಡಿಸಿನ್” ಸಂಸ್ಥೆಯು ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲು ಘೋಷಿಸಿತು. ಈ ದಿನ ಸೊಳ್ಳೆಗಳಿಂದ ಹರಡುವ ಮಾರಣಾಂತಿಕ ಕಾಯಿಲೆಯ ಕಾರಣಗಳು ಮತ್ತು ಅದರ ತಡೆಗಟ್ಟುವಿಕೆಯ ಕುರಿತು ಪ್ರಚಾರ ಅಥವಾ ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಛಾಯಾಗ್ರಹಣ ದಿನ ಯಾವಾಗ? ಈ ವಿಶೇಷ ದಿನದ ಇತಿಹಾಸ ಏನು?

ವಿಶ್ವ ಸೊಳ್ಳೆ ದಿನದ ಮಹತ್ವ:

ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳು ಎಷ್ಟೇ ಮುಂದುವರೆದಿದ್ದರೂ, ಸೊಳ್ಳೆಗಳಿಂದ ಹರಡುವ ರೋಗಗಳು ಮನುಷ್ಯರನ್ನು ಇಂದಿಗೂ ಬಲಿ ತೆಗೆದುಕೊಳ್ಳುತಿವೆ. ಆಫ್ರಿಕಾ ಮತ್ತು ಏಷ್ಯಾ ಖಂಡದ ದೇಶಗಳಲ್ಲಿ ಈ ಸ್ಥಿತಿಯು ಹೆಚ್ಚು ತೀವ್ರವಾಗಿದೆ. ಈ ಕಾರಣದಿಂದ ಪ್ರತಿ ವರ್ಷ ವಿಶ್ವ ಸೊಳ್ಳೆ ದಿನದಂದು ವಿವಿಧ ರೀತಿಯ ಸೊಳ್ಳೆಗಳು ಮತ್ತು ಅವುಗಳ ಕಡಿತದಿಂದ ಉಂಟಾಗುವ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತದೆ. ಈ ದಿನ ಸರ್ಕಾರಿ ಮತ್ತು ಸರ್ಕಾರೇತ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಸೊಳ್ಳೆಗಳಿಂದ ಹರಡುವ ಮಾರಣಾಂತಿಕ ಕಾಯಿಲೆಯ ಕಾರಣಗಳು ಮತ್ತು ಅದರ ತಡೆಗಟ್ಟುವಿಕೆಯ ಕುರಿತು ಪ್ರಚಾರ ಅಥವಾ ಪ್ರದರ್ಶನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್