AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rabies Day 2023: ವಿಶ್ವ ರೇಬೀಸ್ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಪ್ರಾಮುಖ್ಯತೆ ಇಲ್ಲಿದೆ 

ಇಂದಿಗೂ ಪ್ರಪಂಚದಾದ್ಯಂತ ಅನೇಕ ಜನರಿಗೆ ರೇಬೀಸ್ ಕಾಯಿಲೆ ಬಗ್ಗೆ ತಿಳಿದಿಲ್ಲ. ರೇಬೀಸ್ ಸೋಂಕು ಮನುಷ್ಯರು ಮತ್ತು ಪ್ರಾಣಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಹಾಗೂ ಈ ರೋಗಕ್ಕೆ ತುತ್ತಾದಾಗ ಏನು ಮಾಡಬೇಕು ಎಂಬುವುದರ ಬಗ್ಗೆ ತಿಳಿದಿಲ್ಲ.  ಈ ನಿಟ್ಟಿನಲ್ಲಿ  ರೇಬೀಸ್ ಕಾಯಿಲೆ ಮತ್ತು  ಅದರ  ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ 28ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ.

World Rabies Day 2023: ವಿಶ್ವ ರೇಬೀಸ್ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಪ್ರಾಮುಖ್ಯತೆ ಇಲ್ಲಿದೆ 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Sep 27, 2023 | 3:56 PM

Share

ರೇಬೀಸ್ ಒಂದು ಝುನೋಟಿಕ್ ಕಾಯಿಲೆಯಾಗಿದ್ದು, ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ರೇಬೀಸ್ ಕಾಯಿಲೆ ಹರಡಲು  ಲಿಸ್ಸಾವೈರಸ್ ಮುಖ್ಯ ಕಾರಣವಾಗಿದೆ. ನಾಯಿ, ಬೆಕ್ಕುಗಳ ಕಡಿತ ಅಥವಾ ಲಾಲಾರಸದ ಸಂಪರ್ಕದಿಂದ  ಹಾಗೂ ಸಸ್ತನಿಗಳು ಮತ್ತು ವಿಶೇಷವಾಗಿ ಕಾಡುಪ್ರಾಣಿಗಳ ಮೂಲಕ  ಈ  ಸೋಂಕು ಹರಡುತ್ತದೆ. ಈ ರೋಗ ಉಲ್ಬಣಗೊಂಡು ಮಾರಣಾಂತಿಕವಾಗಿ ಪರಿಣಮಿಸಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ರೇಬೀಸ್ ಕಾಯಿಲೆಯು ಪ್ರತಿವರ್ಷ ಅನೇಕ ಸಾವುಗಳಿಗೆ ಕಾರಣವಾಗುತ್ತದೆ, ಮುಖ್ಯವಾಗಿ ಏಷ್ಯಾ ಮತ್ತು ಆಫ್ರಿಕಾ ಖಂಡದ ದೇಶಗಳಲ್ಲಿ ಸುಮಾರು 40% ರಷ್ಟು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ರೇಬೀಸ್ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇಂದಿಗೂ  ಹೆಚ್ಚಿನವರಿಗೆ  ರೇಬೀಸ್ ಕಾಯಿಲೆಯ ಬಗ್ಗೆ ತಿಳಿದಿಲ್ಲ,  ರೇಬೀಸ್ ಸೋಂಕು ಮನುಷ್ಯರು ಮತ್ತು ಸಾಕು ಪ್ರಾಣಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಹಾಗೂ ಈ ರೋಗಕ್ಕೆ ತುತ್ತಾದಾಗ ಏನು ಮಾಡಬೇಕು ಎಂಬುವುದು  ತಿಳಿದಿಲ್ಲ. ಹಾಗಾಗಿ  ರೇಬೀಸ್ ಕಾಯಿಲೆ ಮತ್ತು  ಅದರ  ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲು 1885 ರಲ್ಲಿ ಮೊದಲ ಯಶಸ್ವಿ ರೇಬೀಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಲೂಯಿಸ್ ಪಾಶ್ಚರ್ ಅವರ ಮರಣ ದಿನವಾದ ಸೆಪ್ಟೆಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ರೇಬೀಸ್ ದಿನದ ಇತಿಹಾಸ:

ವಿಶ್ವ ರೇಬೀಸ್ ದಿನವನ್ನು ಮೊದಲ ಬಾರಿಗೆ ಸೆಪ್ಟೆಂಬರ್ 28, 2007 ರಲ್ಲಿ ಆಚರಿಸಲಾಯಿತು. ವಿಶ್ವ ಆರೋಗ್ಯ ಸಂಸ್ಥೆ, ಅಮೇರಿಕಾದ  ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆನ್ಷನ್ ಸಂಸ್ಥೆ  ಮತ್ತು ಅಲೈಯನ್ಸ್ ಫಾರ್ ರೇಬೀಸ್ ಕಂಟ್ರೋಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ವಿಶ್ವ ರೇಬೀಸ್ ದಿನವನ್ನು ಆಚರಿಸಲಾಯಿತು. ರೇಬಿಸ್ ಕಾಯಿಲೆಯ ಹರಡುವಿಕೆ, ಅದರ ತಡೆಗಟ್ಟುವಿಕೆ ಮತ್ತು ಪ್ರಾಈಗಳು ಹಾಗೂ ಮನುಷ್ಯರಿಗೆ ಲಭ್ಯವಿರುವ ರೇಬೀಸ್ ಲಸಿಕೆಯ ಬಗ್ಗೆ   ಜನರಿಗೆ ಅರಿವು  ಮೂಡಿಸುವುದು ಈ ಆಚರಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ವಿಶ್ವ ನದಿಗಳ ದಿನ 2023: ದಿನಾಂಕ, ಇತಿಹಾಸ, ಮಹತ್ವ ಮತ್ತು ಆಚರಣೆ

ವಿಶ್ವ ರೇಬೀಸ್ ದಿನದ ಪ್ರಾಮುಖ್ಯತೆ:

ವಿಶ್ವ ರೇಬೀಸ್ ದಿನವನ್ನು ಆಚರಿಸುವ ಮುಖ್ಯ ಉದ್ದೇಶವು ರೇಬೀಸ್ ಕುರಿತು ಹಾಗೂ ಈ ರೋಗವನ್ನು ತಡೆಗಟ್ಟುವ ಬಗ್ಗೆ  ಜಾಗೃತಿ ಮೂಡಿಸುವುದು.  ರೇಬೀಸ್ ಒಂದು ವೈರಲ್ ಕಾಯಿಲೆಯಾಗಿದ್ದು, ಅದು ಪ್ರಾಣಿಗಳ ಲಾಲಾರಸದ ಮೂಲಕ ಮನುಷ್ಯರಿಗೆ ಹರಡುತ್ತದೆ. ಹಾಗಾಗಿ ಈ ವಿಶೇಷ ದಿನವು ಈ  ಪ್ರಾಣಿಗಳ ಉತ್ತಮ ಆರೈಕೆ ಮತ್ತು ರೇಬೀಸ್ನಂತಹ ಪ್ರತಿಕೂಲ ಪರಿಸ್ಥಿತಿಗಳೊಂದಿಗೆ ಹೇಗೆ  ವ್ಯವಹರಿಸುವುದು ಎಂಬ  ಕುರಿತು ಮಾಹಿತಿಯನ್ನು ನೀಡುತ್ತದೆ.

ವಿಶ್ವ ರೇಬೀಸ್ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 28ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ.  ಫ್ರೆಂಚ್ ವಿಜ್ಞಾನಿ ಲೂಯಿಸ್ ಪಾಶ್ಚರ್ ಅವರ ಮರಣ ದಿನದ  ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.  ಲೂಯಿಸ್ ಪಾಶ್ಚರ್ ಮೊದಲ ಬಾರಿಗೆ ರೇಬೀಸ್ ಲಸಿಕೆ ಅಭಿವೃದ್ಧಿಪಡಿಸುವ ಮೂಲಕ ವೈದ್ಯಕೀಯ ಜಗತ್ತಿಗೆ ಅಮೂಲ್ಯ ಕೊಡುಗೆ ನೀಡಿದರು.  ವಿಶ್ವ ರೇಬೀಸ್ ದಿನದಂದು ಪ್ರಪಂಚದಾದ್ಯಂತ ರೇಬೀಸ್ ರೋಗ, ಅದರ ತಡೆಗಟ್ಟುವಿಕೆಯ ಮತ್ತು  ತಕ್ಷಣದ ಚಿಕಿತ್ಸೆಯ ಬಗ್ಗೆ ಹಲವಾರು ಜಾಗೃತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Wed, 27 September 23

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್