World Stroke Day 2023: ವಿಶ್ವ ಪಾರ್ಶ್ವವಾಯು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಮಹತ್ವ 

ಪಾರ್ಶ್ವವಾಯು ಕಾಯಿಲೆಯ ಗಂಭೀರ ಸ್ವರೂಪಗಳ  ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಈ ಮಾರಣಾಂತಿಕ ಸ್ಥಿತಿಯು ಎದುರಾದಾಗ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮ, ಸರಿಯಾದ ಚಿಕಿತ್ಸೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸ್ಟ್ರೋಕ್ ದಿನವನ್ನು ಪ್ರತಿ ವರ್ಷ  ಅಕ್ಟೋಬರ್  29 ರಂದು ಆಚರಿಸಲಾಗುತ್ತದೆ.  

World Stroke Day 2023: ವಿಶ್ವ ಪಾರ್ಶ್ವವಾಯು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಮಹತ್ವ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 28, 2023 | 6:23 PM

ಪ್ರತಿವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ಮೆದುಳಿನ ನಿರ್ದಿಷ್ಟ ಭಾಗಕ್ಕೆ ರಕ್ತ ಪೂರೈಸುವ ರಕ್ತನಾಳ ಬ್ಲಾಕ್ ಅದಾಗ ಅಥವಾ ರಕ್ತನಾಳ ಸ್ಪೋಟಿಸಿದಾಗ ಸ್ಟ್ರೋಕ್ ಸಂಭವಿಸುತ್ತದೆ.  ಇದರಿಂದ ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ.  ಅಥವಾ ಮೆದುಳಿನ ಭಾಗಗಳು ಸಂಪೂರ್ಣ ನಿಷ್ಕ್ರೀಯಗೊಳ್ಳುವ ಸಾಧ್ಯತೆ ಇರುತ್ತದೆ.  ಕಳಪೆ ಮಟ್ಟದ ಜೀವನಶೈಲಿಯ ಕಾರಣ ಪಾರ್ಶ್ವವಾಯು ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ಹಠಾತ್ ಮೆದುಳಿನ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ದೊರೆತರೆ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ ಸಂಪೂರ್ಣ ಗುಣಮುಖವಾಗುವ ಸಾಧ್ಯತೆಯಿದೆ. ಚಿಕಿತ್ಸೆಯ ವಿಳಂಬವು ವ್ಯಕ್ತಿಯ ಪ್ರಾಣವನ್ನೇ ಬಲಿ ತೆಗೆದುಕೊಳ್ಳಬಹುದು ಅಥವಾ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವು ಕ್ಷೀಣಿಸಲು ಕಾರಣವಾಗಬಹುದು. ಈ ನಿಟ್ಟಿನಲ್ಲಿ ಪಾರ್ಶ್ವವಾಯುವಿನ ಗಂಭೀರ ಸ್ಥಿತಿಯ  ಬಗ್ಗೆ ಜಾಗತಿಕ ಮಟ್ಟದಲ್ಲಿ  ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪಾರ್ಶ್ವವಾಯು ದಿನದ ಇತಿಹಾಸ:

ವಿಶ್ವ ಪಾರ್ಶ್ವವಾಯು ದಿನವನ್ನು ಪ್ರತಿವರ್ಷ ಅಕ್ಟೋಬರ್ 29 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ವಿಶ್ವ ಸ್ಟ್ರೋಕ್ ಆರ್ಗನೈಸೇಶನ್ (WSO) ಜಾಗತಿಕವಾಗಿ ಜಾಗೃತಿಯನ್ನು ಹೆಚ್ಚಿಸಲು ಈ ದಿನವನ್ನು ಆಚರಿಸಲು ಪ್ರಾರಂಭಿಸಿತು. 2004 ರಲ್ಲಿ ಕೆನಡಾದ ವ್ಯಾಂಕೋರ್ನಲ್ಲಿ ನಡೆದ ವಿಶ್ವ  ಸ್ಟ್ರೋಕ್ ಕಾಂಗ್ರೇಸ್ನಲ್ಲಿ ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸುವ ಬಗ್ಗೆ ತೀರ್ಮಾನಿಸಲಾಯಿತು.

ವರ್ಲ್ಡ್ ಸ್ಟ್ರೋಕ್ ಆರ್ಗನೈಸೇಶನ್ ಪ್ರಕಾರ, ಪ್ರಪಂಚದಾದ್ಯಂತ 4 ವಯಸ್ಕರರಲ್ಲಿ ಒಬ್ಬರು ಪಾರ್ಶ್ವವಾಯುವಿಗೆ ತುತ್ತಾಗುತ್ತಾರೆ. ಆದ್ದರಿಂದ ಈ ದಿನದ ಮೂಲಕ ಜನರಲ್ಲಿ ಪಾರ್ಶ್ವವಾಯುವಿನ ಜಾಗೃತಿಯನ್ನು ಮೂಡಿಸುವುದು ಅತೀ ಅಗತ್ಯವೆಂದು ಈ ಸಂಸ್ಥೆ ಪರಿಗಣಿಸಿದೆ.  ಪಾರ್ಶ್ವವಾಯುವಿನ ಗಂಭೀರ ಸ್ವರೂಪ ಮತ್ತು ಅದರ ಅಪಾಯದ ದರಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವುದು ಪಾರ್ಶ್ವವಾಯು ದಿನದ ಆಚರಣೆಯ ಮುಖ್ಯ  ಗುರಿಯಾಗಿದೆ.

ಇದನ್ನೂ ಓದಿ: ವಿಶ್ವ ಅಸ್ವಸ್ಥರ ದಿನದ ಇತಿಹಾಸ ಮತ್ತು ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ವಿಶ್ವ ಪಾರ್ಶ್ವವಾಯು ದಿನದ ಮಹತ್ವ:

ವಿಶ್ವದಾದ್ಯಂತ ಪಾರ್ಶ್ವವಾಯು ಸಾವಿಗೆ ಎರಡನೇ ಪ್ರಮುಖ ಕಾರಣವಾಗಿದೆ ಮತ್ತು ಅಂಗವೈಕಲ್ಯಕ್ಕೆ ಮೂರನೇ ಪ್ರಮುಖ ಕಾರಣವಾಗಿದೆ. ಅಲ್ಲದೆ ಪ್ರತಿ ವರ್ಷ ಸುಮಾರು 18 ಲಕ್ಷ ಜನರು ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ಇದರ ಚಿಕಿತ್ಸೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕೆಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ.

ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದು, ಧೂಮಪಾನ ಮದ್ಯಪಾನವನ್ನು ತ್ಯಜಿಸುವುದು, ನಿಯಮಿತ ದೈಹಿಕ ಚಟುವಟಿಕೆಯನ್ನು ಮಾಡುವುದು ಹಾಗೂ ಆರೋಗ್ಯಕರ ಆಹಾರ ಶೈಲಿಯ ಪಾಲನೆಯ ಮೂಲಕ ಪಾರ್ಶ್ವವಾಯುವಿಗೆ ತುತ್ತಾಗದಂತೆ ಹೇಗೆ ನೋಡಿಕೊಳ್ಳಬಹುದು ಎಂದು ಸಾರ್ವಜನಿಕರಿಗೆ ಈ ದಿನ ಶಿಕ್ಷಣವನನ್ನು ನೀಡಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ