AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Stroke Day 2023: ವಿಶ್ವ ಪಾರ್ಶ್ವವಾಯು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವನ್ನು ತಿಳಿದುಕೊಳ್ಳಿ

World Stroke Day 2023: ಪಾರ್ಶ್ವವಾಯು ಕಾಯಿಲೆಯ ಗಂಭೀರ ಸ್ವರೂಪಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಈ ಮಾರಣಾಂತಿಕ ಸ್ಥಿತಿಯು ಎದುರಾದಾಗ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮ, ಸರಿಯಾದ ಚಿಕಿತ್ಸೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸ್ಟ್ರೋಕ್ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 29 ರಂದು ಆಚರಿಸಲಾಗುತ್ತದೆ.

World Stroke Day 2023: ವಿಶ್ವ ಪಾರ್ಶ್ವವಾಯು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವನ್ನು ತಿಳಿದುಕೊಳ್ಳಿ
ವಿಶ್ವ ಸ್ಟ್ರೋಕ್ ದಿನ 2023
TV9 Web
| Updated By: ನಯನಾ ಎಸ್​ಪಿ|

Updated on: Oct 26, 2023 | 3:31 PM

Share

ಪ್ರತಿವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಪಾರ್ಶ್ವವಾಯುವಿಗೆ (World Stroke Day 2023) ತುತ್ತಾಗುತ್ತಿದ್ದಾರೆ. ಮೆದುಳಿನ ನಿರ್ದಿಷ್ಟ ಭಾಗಕ್ಕೆ ರಕ್ತ ಪೂರೈಸುವ ರಕ್ತನಾಳ ಬ್ಲಾಕ್ ಅದಾಗ ಅಥವಾ ರಕ್ತನಾಳ ಸ್ಪೋಟಿಸಿದಾಗ ಸ್ಟ್ರೋಕ್ ಸಂಭವಿಸುತ್ತದೆ. ಇದರಿಂದ ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ. ಅಥವಾ ಮೆದುಳಿನ ಭಾಗಗಳು ಸಂಪೂರ್ಣ ನಿಷ್ಕ್ರೀಯಗೊಳ್ಳುವ ಸಾಧ್ಯತೆ ಇರುತ್ತದೆ. ಕಳಪೆ ಮಟ್ಟದ ಜೀವನಶೈಲಿಯ ಕಾರಣ ಪಾರ್ಶ್ವವಾಯು ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ಹಠಾತ್ ಮೆದುಳಿನ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ದೊರೆತರೆ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ ಸಂಪೂರ್ಣ ಗುಣಮುಖವಾಗುವ ಸಾಧ್ಯತೆಯಿದೆ. ಚಿಕಿತ್ಸೆಯ ವಿಳಂಬವು ವ್ಯಕ್ತಿಯ ಪ್ರಾಣವನ್ನೇ ಬಲಿ ತೆಗೆದುಕೊಳ್ಳಬಹುದು ಅಥವಾ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವು ಕ್ಷೀಣಿಸಲು ಕಾರಣವಾಗಬಹುದು. ಈ ನಿಟ್ಟಿನಲ್ಲಿ ಪಾರ್ಶ್ವವಾಯುವಿನ ಗಂಭೀರ ಸ್ಥಿತಿಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪಾರ್ಶ್ವವಾಯು ದಿನದ ಇತಿಹಾಸ:

ವಿಶ್ವ ಪಾರ್ಶ್ವವಾಯು ದಿನವನ್ನು ಪ್ರತಿವರ್ಷ ಅಕ್ಟೋಬರ್ 29 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ವಿಶ್ವ ಸ್ಟ್ರೋಕ್ ಆರ್ಗನೈಸೇಶನ್ (WSO) ಜಾಗತಿಕವಾಗಿ ಜಾಗೃತಿಯನ್ನು ಹೆಚ್ಚಿಸಲು ಈ ದಿನವನ್ನು ಆಚರಿಸಲು ಪ್ರಾರಂಭಿಸಿತು. 2004 ರಲ್ಲಿ ಕೆನಡಾದ ವ್ಯಾಂಕೋರ್ನಲ್ಲಿ ನಡೆದ ವಿಶ್ವ ಸ್ಟ್ರೋಕ್ ಕಾಂಗ್ರೇಸ್ನಲ್ಲಿ ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸುವ ಬಗ್ಗೆ ತೀರ್ಮಾನಿಸಲಾಯಿತು.

ವರ್ಲ್ಡ್ ಸ್ಟ್ರೋಕ್ ಆರ್ಗನೈಸೇಶನ್ ಪ್ರಕಾರ, ಪ್ರಪಂಚದಾದ್ಯಂತ 4 ವಯಸ್ಕರರಲ್ಲಿ ಒಬ್ಬರು ಪಾರ್ಶ್ವವಾಯುವಿಗೆ ತುತ್ತಾಗುತ್ತಾರೆ. ಆದ್ದರಿಂದ ಈ ದಿನದ ಮೂಲಕ ಜನರಲ್ಲಿ ಪಾರ್ಶ್ವವಾಯುವಿನ ಜಾಗೃತಿಯನ್ನು ಮೂಡಿಸುವುದು ಅತೀ ಅಗತ್ಯವೆಂದು ಈ ಸಂಸ್ಥೆ ಪರಿಗಣಿಸಿದೆ. ಪಾರ್ಶ್ವವಾಯುವಿನ ಗಂಭೀರ ಸ್ವರೂಪ ಮತ್ತು ಅದರ ಅಪಾಯದ ದರಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವುದು ಪಾರ್ಶ್ವವಾಯು ದಿನದ ಆಚರಣೆಯ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ: ಮೊಸರು ಬಳಸಿ ಹೇಗೆಲ್ಲ ಫೇಸ್​ಪ್ಯಾಕ್ ಮಾಡಿಕೊಳ್ಳಬಹುದು ಗೊತ್ತಾ?

ವಿಶ್ವ ಪಾರ್ಶ್ವವಾಯು ದಿನದ ಮಹತ್ವ:

ವಿಶ್ವದಾದ್ಯಂತ ಪಾರ್ಶ್ವವಾಯು ಸಾವಿಗೆ ಎರಡನೇ ಪ್ರಮುಖ ಕಾರಣವಾಗಿದೆ ಮತ್ತು ಅಂಗವೈಕಲ್ಯಕ್ಕೆ ಮೂರನೇ ಪ್ರಮುಖ ಕಾರಣವಾಗಿದೆ. ಅಲ್ಲದೆ ಪ್ರತಿ ವರ್ಷ ಸುಮಾರು 18 ಲಕ್ಷ ಜನರು ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ಇದರ ಚಿಕಿತ್ಸೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕೆಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದು, ಧೂಮಪಾನ ಮದ್ಯಪಾನವನ್ನು ತ್ಯಜಿಸುವುದು, ನಿಯಮಿತ ದೈಹಿಕ ಚಟುವಟಿಕೆಯನ್ನು ಮಾಡುವುದು ಹಾಗೂ ಆರೋಗ್ಯಕರ ಆಹಾರ ಶೈಲಿಯ ಪಾಲನೆಯ ಮೂಲಕ ಪಾರ್ಶ್ವವಾಯುವಿಗೆ ತುತ್ತಾಗದಂತೆ ಹೇಗೆ ನೋಡಿಕೊಳ್ಳಬಹುದು ಎಂದು ಸಾರ್ವಜನಿಕರಿಗೆ ಈ ದಿನ ಶಿಕ್ಷಣವನನ್ನು ನೀಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ