World Suicide Prevention Day 2023:ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಏಕೆ ಆಚರಿಸಲಾಗುತ್ತದೆ? ಆಚರಣೆಯ ಹಿಂದಿನ ಉದ್ದೇಶ ತಿಳಿಯಿರಿ

ಬಿಡುವಿಲ್ಲದ ಜೀವನಶೈಲಿ ಮತ್ತು ಒತ್ತಡವು ಜನರನ್ನು ಖಿನ್ನತೆಗೆ ದೂಡುತ್ತಿದೆ. ಈ ಖಿನ್ನತೆಯ ಕಾರಣದಿಂದಾಗಿ ಪ್ರಪಂಚದಾದ್ಯಂತ ಅನೇಕ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದು ಗಂಭೀರ ಸಾರ್ವಜನಿಕ ಸಮಸ್ಯೆಯಾಗಿದ್ದು, ಇಂತಹ ಪ್ರಕರಣಗಳನ್ನು ತಡೆಯಲು ಮತ್ತು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುವವರ ಮನಃ ಪರಿವರ್ತನೆ ಮಾಡಲು ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ 10 ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ.

World Suicide Prevention Day 2023:ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಏಕೆ ಆಚರಿಸಲಾಗುತ್ತದೆ? ಆಚರಣೆಯ ಹಿಂದಿನ ಉದ್ದೇಶ ತಿಳಿಯಿರಿ
World Suicide Prevention Day
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Sep 09, 2023 | 12:20 PM

ಆತ್ಮಹತ್ಯೆ ಪ್ರಕರಣಗಳು ಬಹುತೇಕ ಪ್ರತಿದಿನ ಕೇಳಿಬರುತ್ತವೆ. ಇತ್ತೀಚಿನ ದಿನಗಳಲ್ಲಿ ಹೆಸರು, ಹಣ ಮತ್ತು ಖ್ಯಾತಿಯನ್ನು ಗಳಿಸುವ ಆತುರದಲ್ಲಿ ಜನರು ಹೆಚ್ಚಾಗಿ ಮಾನಸಿಕ ಒತ್ತಡದಂತಹ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಜನರಲ್ಲಿ ತಾಳ್ಮೆ ವೇಗವಾಗಿ ಕ್ಷೀಣಿಸುತ್ತಿದೆ. ಕೌಟುಂಬಿಕ ಕಲಹ, ಉದ್ಯೋಗ ಸಂಬಂಧಿ ಸಮಸ್ಯೆ, ಪ್ರೇಮ ವೈಫಲ್ಯ, ಖಿನ್ನತೆ ಹೀಗೆ ನಾನಾ ರೀತಿಯ ಕ್ಷುಲ್ಲಕ ಕಾರಣಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಮಾನವನ ಜನ್ಮವು ಶ್ರೇಷ್ಟವಾದದ್ದು, ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಪರಿಹಾರವಲ್ಲ. ಈ ನಿಟ್ಟಿನಲ್ಲಿ ಇಂತಹ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಸೆಪ್ಟೆಂಬರ್ 10 ನೇ ತಾರೀಕಿನಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆತ್ಮಹತ್ಯೆ ತಡೆ ದಿನದ ಇತಿಹಾಸ:

ಇಂಟರ್ ನ್ಯಾಷನಲ್ ಅಸೋಸಿಯೇಷನ್ ಫಾರ್ ಸುಸೈಡ್ ಪ್ರಿವೆನ್ಷನ್ (IASP) ಎಂಬ ಸಂಸ್ಥೆಯು 2003 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಸಹಯೋಗದೊಂದಿಗೆ ವಿಶ್ವ ಆತ್ಮಹತ್ಯೆ ತಡೆ ದಿನವನ್ನು (World Suicide Prevention Day) ಪ್ರಾರಂಭಿಸಿತು. ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಈ ಸಂಸ್ಥೆಗಳು ಆತ್ಮಹತ್ಯೆಯನ್ನು ತಡೆಯುವುದು ಹೇಗೆ ಎಂಬ ಕುರಿತು ಪ್ರಪಂಚದಾದ್ಯಂತ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತವೆ.

ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸುವ ಉದ್ದೇಶ:

ಆತ್ಮಹತ್ಯೆಯು ಗಂಭೀರವಾದ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದ್ದು, ಜನರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿವವನ್ನು ಆಚರಿಸುವ ಹಿಂದಿನ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಪ್ರತ್ಯೇಕತೆಯ ಆತಂಕವನ್ನು ಹೆಚ್ಚಿಸುವ ಕಾರಣಗಳು ಹಾಗೂ ಅದರಿಂದ ಹೊರ ಬರುವ ಉಪಾಯಗಳ ತಿಳಿಯಿರಿ

ವಿಶ್ವ ಆತ್ಮಹತ್ಯೆ ತಡೆ ದಿನ 2023 ರ ಧ್ಯೇಯ:

ಕ್ರಿಯೆಯ ಮೂಲಕ ಭರವಸೆಯನ್ನು ಸೃಷ್ಟಿಸುವುದು ಇದು 2021 ರಿಂದ 2023 ರವರೆಗಿನ ಆತ್ಮಹತ್ಯೆ ತಡೆ ದಿನದ ತ್ರೈವಾರ್ಷಿಕ ಧ್ಯೇಯವಾಗಿದೆ. ಅಂದರೆ ನಿಮ್ಮ ಕೆಲಸ ಅಥವಾ ಕಾಳಜಿಯ ಮೂಲಕ ಭರವಸೆ ಮೂಡಿಸುವುದಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುವ ಜನರು ಎಂದಿಗೂ ಬದುಕಿನ ಭರವಸೆಯನ್ನು ಕಳೆದುಕೊಂಡು, ಆತ್ಮಹತ್ಯೆಗೆ ಯತ್ನಿಸಬಾರದೆಂಬ ಸಂದೇಶವನ್ನು ಇಲ್ಲಿ ಸಾರಲಾಗಿದೆ.

ಆತ್ಮಹತ್ಯೆಯ ಕುರಿತ ಡೇಟಾ ಹೀಗಿದೆ:

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ 8 ಲಕ್ಷಕ್ಕೂ ಹೆಚ್ಚು ಜನರು ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಸುತ್ತಿದ್ದಾರೆ. ಅದರಲ್ಲೂ ಈ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ 15 ರಿಂದ 29 ವರ್ಷ ವಯೋಮಾನದ ಯುವಜನರ ಸಂಖ್ಯೆಯೇ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ. ಈ ಅಂಕಿಅಂಶವು ಇಂದಿನ ದಿನಗಳಲ್ಲಿ ಜನರು ಎಷ್ಟರ ಮಟ್ಟಿಗೆ ಮಾನಸಿಕ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ